KSRTC; ಸ್ಟೇರಿಂಗ್ ರಾಡ್ ತುಂಡಾಗಿ ಹಳ್ಳಕ್ಕೆ ನುಗ್ಗಿದ ಬಸ್: ಹಲವರಿಗೆ ಗಾಯ
ತಪ್ಪಿದ ಭಾರೀ ಅವಘಡ
Team Udayavani, Sep 27, 2024, 2:28 PM IST
ಗುಂಡ್ಲುಪೇಟೆ(ಚಾಮರಾಜನಗರ): ಸ್ಟೇರಿಂಗ್ ಎಂಡ್ಸ್ ರಾಡ್ ತುಂಡಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ ಟಿಸಿ ಬಸ್ ಹಳ್ಳಕ್ಕೆ ನುಗ್ಗಿರುವ ಘಟನೆ ತಾಲೂಕಿನ ಯರಿಯೂರು ರಸ್ತೆಯಲ್ಲಿ ಶುಕ್ರವಾರ(ಸೆ27 ) ನಡೆದಿದ್ದು, ಬಸ್ ನಲ್ಲಿದ್ದ ಸುಮಾರು 13ಕ್ಕೂ ಅಧಿಕ ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದೆ.
ಕುಂದಕೆರೆ ಗ್ರಾಮದ ಗೋವಿಂದರಾಜು, ರಂಗಯ್ಯ ಸುನಿತಾ, ರಂಗಯ್ಯ ಎಂಬ ನಾಲ್ಕು ಮಂದಿ ಸೊಂಟ, ಎದೆ ಭಾಗ ಹಾಗೂ ತೆಲೆಗೆ ಗಾಯಗಳಾದ ಹಿನ್ನೆಲೆ ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ರವಾಸಿಸಲಾಗಿದೆ. ಉಳಿದಂತೆ ಕುಮಾರ್, ಮಹದೇವಯ್ಯ, ವೆಂಕಟೇಶ್, ಪ್ರಭುಸ್ವಾಮಿ, ನಾಗಾರಾಜು, ದೊಡ್ಡಯ್ಯ, ನಂದಗೋಪಾಲ್, ಪ್ರಸನ್ನ ಕುಮಾರ್, ರಾಜೇಶ್ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗಿದೆ.
ಕುಂದಕೆರೆಯಿಂದ ಯರಿಯೂರು ಮಾರ್ಗವಾಗಿ ಗುಂಡ್ಲುಪೇಟೆಗೆ ಬರುತ್ತಿದ್ದ ಕೆಎಸ್ಆರ್ ಟಿಸಿ ಬಸ್ ನ ಸ್ಟೇರಿಂಗ್ ಎಂಡ್ಸ್ ರಾಡ್ ತುಂಡಾದ ಪರಿಣಾಮ ಚಾಲಕ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಸೇತುವೆಗೆ ಹೊಂದಿಕೊಂಡತ್ತಿರುವ ಹಳ್ಳಕ್ಕೆ ನುಗ್ಗಿದೆ. ಈ ವೇಳೆ ಹಿಂಬದಿಯಲ್ಲಿ ಕುಳಿತಿದ್ದ ನಾಲ್ವರಿಗೆ ತೀವ್ರ ಗಾಯಗಳಾಗಿದ್ದು, ಸುಮಾರು 10ಕ್ಕೂ ಅಧಿಕ ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಘಟನೆ ಬಳಿಕ ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ.
ಘಟನಾ ಸ್ಥಳಕ್ಕೆ ಗುಂಡ್ಲುಪೇಟೆ ಠಾಣೆ ಪೊಲೀಸರು ದೌಡಾಯಿಸಿ ಹಳ್ಳಕ್ಕೆ ಇಳಿದಿದ್ದ ಕೆಎಸ್ಆರ್ ಟಿಸಿ ಬಸ್ ಅನ್ನು ಮೇಲೆತ್ತಿ ಠಾಣೆಗೆ ಎಳೆದು ತರಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
Karnataka Rajyotsava; ಬಾಬು ಪಿಲಾರ್ ಬದಲು ಬಾಬು ಕಿಲಾರ್‌ಗೆ ಪ್ರಶಸ್ತಿ!!
MUST WATCH
ಹೊಸ ಸೇರ್ಪಡೆ
Viral: ಸೆ**ಕ್ಸ್ ಗಾಗಿ 65ರ ಮುದುಕನನ್ನು ವಿವಾಹವಾದ್ರಾ ಈ ನಟಿ? ನೆಟ್ಟಿಗರಿಂದ ಭಾರೀ ಟ್ರೋಲ್
INDvsNZ; ಗಿಲ್, ಪಂತ್, ವಾಷಿಂಗ್ಟನ್ ಬ್ಯಾಟಿಂಗ್ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ
Deepawali: ಬಾಂಬಿನ ಸದ್ದು ಮತ್ತು ಅಪ್ಪನ ಗುದ್ದು!
IPL ಚಾಂಪಿಯನ್ ಕ್ಯಾಪ್ಟನ್ ಅಯ್ಯರ್ ನನ್ನು ಕೆಕೆಆರ್ ಕೈಬಿಟ್ಟಿದ್ಯಾಕೆ?: ಉತ್ತರಿಸಿದ ಸಿಇಒ
Katapady: ಹಟ್ಟಿಗೊಬ್ಬರ ಖರೀದಿ ಹೆಸರಲ್ಲಿ ಮೋಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.