ಚಾಮರಾಜನಗರ ಜಿಲ್ಲೆ 25 ಮಾದರಿ ಗ್ರಾಪಂ ಸಮಗ್ರ ಅಭಿವೃದ್ಧಿಗೆ ಚಾಲನೆ
Team Udayavani, Sep 9, 2020, 11:49 AM IST
ಕೊಳ್ಳೇಗಾಲ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಜಿಲ್ಲೆಯ 25 ಗ್ರಾಮ ಪಂಚಾಯಿತಿಗಳನ್ನು ಮಾದರಿ ಗ್ರಾಮ ಪಂಚಾಯಿತಿಗಳನ್ನಾಗಿಸುವ ವಿಶೇಷ ಕಾರ್ಯಕ್ರಮಕ್ಕೆ ತಾಲೂಕಿನ ಸತ್ತೇಗಾಲ ಗ್ರಾಮದ ಸರ್ಕಾರಿ ಶಾಲೆಯ ಅವರಣದಲ್ಲಿ ಪ್ರಾಥಮಿಕ, ಪ್ರೌಢಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್‌ಕುಮಾರ್ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಉದ್ಯೋಗ ಖಾತರಿ ಯೋಜನೆಯಡಿ ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ, ಯಳಂದೂರು ಹಾಗೂ ಹನೂರು ತಾಲೂಕಿನ ಆಯ್ದ ಗ್ರಾಮಪಂಚಾಯಿತಿಗಳನ್ನು ಮಾದರಿ ಗ್ರಾಮ ಪಂಚಾಯಿತಿಗಳನ್ನಾಗಿ ಅಭಿವೃದ್ಧಿಪಡಿಸಲುಆಯ್ಕೆ ಮಾಡಿಕೊಳ್ಳಲಾಗಿದೆ. ಇನ್ನಷ್ಟು ಗ್ರಾಮ ಪಂಚಾಯಿತಿಗಳ ವಿಸ್ತರಣೆಯನ್ನು ಮುಂದಿನ ಹಂತದಲ್ಲಿ ಮಾಡಲಾಗುವುದು ಎಂದರು.
ಸಂಜೀವಿನಿ ಶೆಡ್: ಮಹಿಳಾ ಸ್ವಸಹಾಯಸಂಘಗಳ ಅರ್ಥಿಕ ಚಟುವಟಿಕೆಗಳಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಮಾದರಿ ಗ್ರಾಮ ಪಂಚಾಯಿತಿ ಯೋಜನೆಯಡಿ ಸಂಜೀವಿನಿ ಶೆಡ್ ನಿರ್ಮಾಣ ಮಾಡಲಾಗುತ್ತದೆ. ಅತ್ಯಂತ ಪೌಷ್ಟಿಕ ಆಹಾರ ಎನಿಸಿರುವ ಹಣಬೆ ಬೇಸಾಯಕ್ಕೂಯೋಜನೆಯಡಿ ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಗ್ರಾಮ ಪಂಚಾಯಿತಿಗಳ ಸಮಗ್ರ ಅಭಿವೃದ್ಧಿ ಯೋಜನೆ ಇತರೆ ಜಿಲ್ಲೆಗಳಿಗೂ ಮಾದರಿಯಾಗಲಿ ಎಂದು ಹಾರೈಸಿದರು.
ತ್ವರಿತ ಕೆಲಸ: ಶಾಸಕ ಆರ್. ನರೇಂದ್ರ ಮಾತನಾಡಿ, ನೂತನ ಮಾದರಿ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಯೋಜನೆ ಎಲ್ಲಾ ಗ್ರಾಮಗಳಿಗೂ ಅನುಕೂಲವಾಗಲಿ. ಅಭಿವೃದ್ಧಿ ಕೆಲಸಗಳು ತ್ವರಿತವಾಗಿ ನಡೆಯಲಿ ಎಂದು ಆಶಿಸಿದರು.
ತಾಪಂ ಅಧ್ಯಕ್ಷ ಸುರೇಶ್, ಜಿಪಂ ಸಿಇಒ ಬೋಯರ್ ಹರ್ಷಲ್ ನಾರಾಯಣ್ ರಾವ್, ಎಸಿ ಡಾ. ಗಿರೀಶ್ ದಿಲೀಪ್ ಬಡೋಲೆ, ತಾಪಂ ಇಒ ಎಲ್. ಗಂಗಾಧರ್, ತಹಶೀಲ್ದಾರ್ ಕೆ. ಕುನಾಲ್, ಜಿ.ಪಂ. ಉಪ ಕಾರ್ಯದರ್ಶಿ ಧರಣೇಶ್ ಇತರರಿದ್ದರು.
ಮಾದರಿ ಗ್ರಾಪಂನಲ್ಲಿ ಏನೇನು ಇರಲಿದೆ? : ಈ ಯೋಜನೆಯಡಿ ಗ್ರಾಮಗಳ ನೈರ್ಮಲ್ಯ, ಕೊಳಚೆ ನೀರಿನ ಸಮರ್ಪಕ ನಿರ್ವಹಣೆಗೆ ಸೋಕ್‌ಪಿಟ್‌ಗಳ ನಿರ್ಮಾಣ ಮಾಡಲಾಗುತ್ತದೆ. ಮನೆಯ ಹಿತ್ತಲಿನಲ್ಲಿ ಪೌಷ್ಟಿಕ ತೋಟ ನಿರ್ಮಾಣವು ಸಹ ಆಗಲಿದೆ. ಶಾಲೆಗಳಲ್ಲಿಯೂ ಪೌಷ್ಟಿಕ ತೋಟ ನಿರ್ಮಾಣವನ್ನು ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಹೊಸ ಕಾರ್ಯ ಚಟುವಟಿಕೆಗಳ ಬಗ್ಗೆ ಉತ್ಸಾಹತುಂಬಬಹುದಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು.
ಮಳೆ ನೀರು ಕೊಯ್ಲು ಸಹ ಯೋಜನೆಯಡಿ ಕೈಗೊಂಡಿರುವ ಪ್ರಮುಖ ಗುರಿಯಾಗಿದೆ. ವ್ಯರ್ಥವಾಗಿ ಹರಿದು ಹೋಗುವ ನೀರನ್ನು ಸಂಗ್ರಹಿಸಿ ಇತರೆ ಉದ್ದೇಶಗಳಿಗೆ ಬಳಸುವ ಹಿನ್ನೆಲೆಯಲ್ಲಿ ಮಳೆ ನೀರು ಕೊಯ್ಲು ಕಾಮಗಾರಿಯನ್ನು ಗ್ರಾಮ ಪಂಚಾಯಿತಿಗಳ ಸಮಗ್ರ ಅಭಿವೃದ್ಧಿ ಯೋಜನೆಯಡಿ ಕೈಗೊಳ್ಳಲಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ಟಿಪ್ಪರ್ ಹರಿದು ಕೇರಳ ಮೂಲದ ಬೈಕ್ ಸವಾರನ ಕಾಲು ನಜ್ಜುಗುಜ್ಜು
Bandipur-Wayanad ರಸ್ತೆಯಲ್ಲಿ ವಾಹನ ಸವಾರರಿಂದ ಆನೆ ಮರಿಗೆ ಕೀಟಲೆ- ವಿಡಿಯೋ ವೈರಲ್
Gundlupete: ಆರು ಜೀವಂತ ಆಮೆ, ಶ್ರೀಗಂಧದ ತುಂಡು ಸಾಗಿಸುತ್ತಿದ್ದ ಆರೋಪಿ ಬಂಧನ
Gundlupete: ಹೆಣ್ಣಾನೆ ಮೃತದೇಹ ಪತ್ತೆ: ಆಂಥಾಕ್ಸ್ ಕಾಯಿಲೆ ಶಂಕೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Mahayuti: ಈ ಬಾರಿ ನಾನು ದೇವೇಂದ್ರ ಫಡ್ನವೀಸ್ ಹೆಸರು ಸೂಚಿಸಿ ಋಣ ತೀರಿಸಿದೆ: ಶಿಂಧೆ
Toll: ವರ್ಷದಲ್ಲೇ 438 ಕೋ.ರೂ. ಟೋಲ್ ಶುಲ್ಕ ಸಂಗ್ರಹ
Electricity Price Hike: ಮೂರು ವರ್ಷದ ವಿದ್ಯುತ್ ದರ ಒಂದೇ ಬಾರಿ ಏರಿಕೆ?
Puttur: ಎಪ್ರಿಲ್, ಮೇ ಬಿಸಿಲ ತಾಪ: ಹಲವೆಡೆ ಅಡಿಕೆ ಮರ ಖಾಲಿ!
Karnataka: ರಾಜ್ಯದ ಎಲ್ಲ ವಿ.ವಿ.ಗಳಲ್ಲೂ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.