ಕಾಂಕ್ರೀಟ್ ರಸ್ತೆ ಕಳಪೆ ಕಾಮಗಾರಿ ಖಂಡಿಸಿ ವಿವಿಧ ಸಂಘನೆಗಳ ಮುಖಂಡರ ಪ್ರತಿಭಟನೆ
Team Udayavani, Sep 26, 2021, 1:39 PM IST
ಗುಂಡ್ಲುಪೇಟೆ: ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯಲ್ಲಿ ನಡೆಯುತ್ತಿರುವ ಕಾಂಕ್ರೀಟ್ ರಸ್ತೆ ಕಾಮಗಾರಿ ಕಳಪೆ ಎಂದು ಆರೋಪಿಸಿ ವಿವಿಧ ಕನ್ನಡ ಪರ ಸಂಘಟನೆ ಪದಾಧಿಕಾರಿಗಳು ಕಾಮಗಾರಿ ತಡೆದು ಶನಿವಾರ ದಿಢೀರ್ ಪ್ರತಿಭಟನೆ ನಡೆಸಿದರು.
ಪ್ರಗತಿಯಲ್ಲಿದ್ದ ಕಾಮಗಾರಿ ಸ್ಥಳದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು, ರಸ್ತೆಯಲ್ಲಿ ಎತ್ತರಗೊಳಿಸಿದ್ದ ಮ್ಯಾನ್‌ಹೋಲ್‌ನಿರ್ಮಾಣ ಗುಣಮಟ್ಟದಿಂದ ಕೂಡಲ್ಲದ ಬಗ್ಗೆ ಕೈನಿಂದ ಕೀಳುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಸ್ಥಳದಲ್ಲಿದ್ದ ಗುತ್ತಿಗೆದಾರ ನೀಡಿದ ಉಡಾಫೆ ಉತ್ತರದಿಂದ ಕೆರಳಿದ ಪ್ರತಿಭಟನಾಕಾರರು, ಗುತ್ತಿಗೆದಾರನ ಜೊತೆಗೆ ಕಿರಿಯ ಇಂಜಿನಿಯರ್‌ರನ್ನು ಹಿಗ್ಗಾಮಗ್ಗಾ ತರಾಟೆಗೆ ತೆಗೆದುಕೊಂಡರು.ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪುರಸಭಾ ಅಧ್ಯಕ್ಷ ಪಿ.ಗಿರೀಶ್, ಗುತ್ತಿಗೆದಾರ ಜವಾಬ್ದಾರಿ ಅರಿತು ಕೆಲಸ ಮಾಡಬೇಕು. ಇಲ್ಲವಾದಲ್ಲಿ ಕಾಮಗಾರಿ ಸ್ಥಗಿತಗೊಳಿಸುವ ಜೊತೆಗೆ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದು ಎಂದು ಎಚ್ಚರಿಸಿದರು.
ರೈತ ಸಂಘದಜಿಲ್ಲಾ ಕಾರ್ಯಾಧ್ಯಕ್ಷ ಮಾಡ್ರಹಳ್ಳಿ ಮಹದೇವಪ್ಪ, ತಾಲೂಕು ಅಧ್ಯಕ್ಷ ಹೊನ್ನೇಗೌಡನಹಳ್ಳಿ ಶಿವಮಲ್ಲು, ಪ್ರಧಾನ ಕಾರ್ಯದರ್ಶಿ ಹಂಗಳ ಮಾಧು, ಮುಖಂಡರಾದ ಕುಂದಕೆರೆ ಸಂಪತ್ತು, ಮಹೇಶ್, ವೃಷಬೇಂದ್ರ, ಕರವೇ ಅಧ್ಯಕ್ಷ ಸುರೇಶ್‌ನಾಯಕ, ಕಾವಲು ಪಡೆ ಅಧ್ಯಕ್ಷ ಎ.ಅಬ್ದುಲ್ ಮಾಲೀಕ್, ಮಹೇಶ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Washington: ಅಮೆರಿಕದ ಭರವಸೆಯಬೆಳಕು ಜೀವಂತವಿರಲಿದೆ: ಕಮಲಾ ಭಾವುಕ ಭಾಷಣ
MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್?
IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್ ಆಫ್ರಿಕಾ ಸವಾಲು
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.