ಕೊನೆಗೂ ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿರಾಳ
Team Udayavani, May 15, 2021, 3:38 PM IST
ಗುಂಡ್ಲುಪೇಟೆ (ಚಾಮರಾಜನಗರ ಜಿಲ್ಲೆ): ಕಳೆದ ಹಲವು ದಿನಗಳಿಂದ ಪ್ರಾಣಿಗಳ ಮೇಲೆ ದಾಳಿ ನಡೆಸಿ ಗ್ರಾಮಸ್ಥರಿಗೆ ಭಯವನ್ನುಂಟು ಮಾಡಿದ ಚಿರತೆ ಕೊನೆಗೂ ಬೋನಿಗೆ ಬಿದ್ದಿರುವ ಘಟನೆ ಶನಿವಾರ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬೊಮ್ಮನಹಳ್ಳಿ ಗ್ರಾಮದ ಜಮೀನುಗಳಿಗೆ ಆಗಾಗ್ಗೆ ನುಗ್ಗಿ ಹಸು, ಕುರಿ, ನಾಯಿಗಳನ್ನು ಸೇರಿದಂತೆ ಸಾಕು ಪ್ರಾಣಿಗಳು ಹಾಗೂ ಜನರ ಮೇಲೆ ದಾಳಿ ನಡೆಸುತ್ತಿದ್ದ ಚಿರತೆಯ ಬಗ್ಗೆ ಮಾಹಿತಿ ಅರಿತ ಅರಣ್ಯ ಇಲಾಖೆ ಸಿಬ್ಬಂದಿ, ಚಿರತೆಯ ಸೆರೆಗೆ ಕಾರ್ಯ ರೂಪಿಸಿ ಮಹಾದೇವಪ್ಪ ಎಂಬವರ ಜಮೀನಿನಲ್ಲಿ ರಾತ್ರಿ ಬೋನಿಟ್ಟು ಚಿರತೆಯನ್ನು ಸೆರೆಹಿಡಿದಿದ್ದಾರೆ.
ಇದನ್ನೂ ಓದಿ : ಉಸಿರಾಟದ ತೊಂದರೆಯಿಂದ ವ್ಯಕ್ತಿ ಸಾವು :ವೈದ್ಯರನ್ನು ನೂಕಾಡಿದ ಸಂಬಂಧಿಕರು
ಹತ್ತು ದಿನಗಳ ಹಿಂದೆ ಮಹದೇವಪ್ಪ ಅವರಿಗೆ ಸೇರಿದ ಹಸುವನ್ನು ಸಹ ಈ ಚಿರತೆ ಕೊಂದು ತಿಂದುಹಾಕಿತ್ತು. ಎರಡು ತಿಂಗಳ ಅಂತರದಲ್ಲಿ ಮಹದೇವಪ್ಪ ಅವರ ಜಮೀನಿನಲ್ಲಿ ಎರಡು ಚಿರತೆಗಳು ಸೆರೆಯಾಗಿವೆ. ಇಂದು ಬೋನಿಗೆ ಬಿದ್ದಿರುವ ಚಿರತೆಗೆ ಅಂದಾಜು 5 ವರ್ಷ ವಯಸ್ಸಿನ ಗಂಡು ಚಿರತೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೆರೆಯಾದ ಚಿರತೆಯನ್ನು ಮೂಲೆಹೊಳೆ ಅರಣ್ಯ ಪ್ರದೇಶದಲ್ಲಿ ಬಿಡಲಾಗಿದೆ ಎಂದು ಅರಣ್ಯ ಇಲಾಖೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.