ಭಾವನನ್ನು ಕೊಲೆಗೈದ ಭಾಮೈದನಿಗೆ ಜೀವಾವಧಿ ಶಿಕ್ಷೆ
Team Udayavani, Apr 3, 2021, 5:56 PM IST
ಕೊಳ್ಳೇಗಾಲ: ಭಾವನನ್ನು ದೊಣ್ಣೆಯಿಂದ ಮನ ಬಂದಂತೆ ಥಳಿಸಿ ಕೊಲೆಗೈದ ಭಾಮೈದನಿಗೆ ಪಟ್ಟಣದ ಜಿಲ್ಲಾ ಮತ್ತು ಸತ್ರ ನ್ಯಾಯಾಲ ಜೀವಾವಧಿ ಶಿಕ್ಷೆ ವಿಧಿಸಿದೆ.
ಹನೂರು ತಾಲೂಕಿನ ಗೋಪಿನಾಥಂ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆಲಂಬಾಡಿ ಗ್ರಾಮ ದಲ್ಲಿ 2017ರ ನವೆಂಬರ್ 25ರಂದು ಈ ಘಟನೆ ಸಂಭವಿಸಿತ್ತು. ಗ್ರಾಮದ ನಿವಾಸಿ ಸೆಲ್ವಂ ಶಿಕ್ಷೆಗೊಳಗಾದ ವ್ಯಕ್ತಿ.
ಘಟನೆ ವಿವಿರ: ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಅಕ್ಕನನ್ನು ಭಾವ ಥಳಿಸಿ ಕಿರುಕುಳ ನೀಡುತ್ತಿದ್ದನು ಎನ್ನಲಾಗಿದೆ. ಇದರಿಂದ ಸಿಟ್ಟಿಗೆದ್ದ ಸೆಲ್ವಂ ತನ್ನ ಭಾವ ಸುರೇಶ್ನಿಗೆ ದೊಣ್ಣೆಯಿಂದ ತಲೆ, ಮುಖ, ಕುತ್ತಿಗೆಗೆ ಹೊಡೆದು ಹತ್ಯೆ ಮಾಡಿದ್ದನು. ಘಟನೆ ಸಂಬಂಧ ಮಲೆಮಹ ದೇಶ್ವರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಸೆಲ್ವಂ ಮೇಲೆ ನ್ಯಾಯಾಲಯದಲ್ಲಿ ದೋಷಾರೋಪಪಟ್ಟಿ ಸಲ್ಲಿಸಲಾಗಿತ್ತು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಸ್ವೆಲಂಗೆ ಜೀವಾವಧಿ ಶಿಕ್ಷೆ ಮತ್ತು 15 ಸಾವಿರ ರೂ. ದಂಡ ವಿಧಿಸಿದ್ದಾರೆ. ಸರ್ಕಾರಿ ಅಭಿಯೋಜಕಿ ಎಂ.ಎಸ್. ಉಷಾ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
America: ಎಚ್-1ಬಿ ವೀಸಾ ವ್ಯವಸ್ಥೆ ಸುಧಾರಣೆ ಬೇಕು: ಒಂದೇ ದಿನದಲ್ಲಿ ಮಸ್ಕ್ ಉಲ್ಟಾ!
Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಿದ ಕೆಇಎ
ಫ್ರಾನ್ಸ್ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್ ಫಿಲಿಯೋಜಾ ನಿಧನ
ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್
Mangaluru; ಪ್ರತ್ಯೇಕ ಚೆಕ್ಬೌನ್ಸ್ ಪ್ರಕರಣ: ಇಬ್ಬರು ಖುಲಾಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.