ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಿ
Team Udayavani, Sep 15, 2020, 12:38 PM IST
ಚಾಮರಾಜನಗರ: ಪ್ರತಿ ವ್ಯಕ್ತಿಗೂ ಶಿಕ್ಷಣ ಮುಖ್ಯವಾಗಿದ್ದು, ಹೆಚ್ಚು ಜನರು ಸೇರುವಂತಹ ಸ್ಥಳಗಳಲ್ಲಿ ಸಾಕ್ಷರತೆಯ ಮಹತ್ವದ ಬಗ್ಗೆ ಅರಿವು ಮೂಡಿಸಿ ಮುಖ್ಯವಾಹಿನಿಗೆ ತರಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್. ಆನಂದ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲೋಕ ಶಿಕ್ಷಣ ನಿರ್ದೇಶನಾಲಯ, ಜಿಪಂ ಹಾಗೂ ಜಿಲ್ಲಾ ಲೋಕ ಶಿಕ್ಷಣ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಾಕ್ಷರತಾ ದಿನಾಚರಣೆ ಹಾಗೂ ಸಪ್ತಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಾರ್ವಜನಿಕರಲ್ಲಿ ಶಿಕ್ಷಣದ ಮಹತ್ವ, ಅವಶ್ಯಕತೆ ಹಾಗೂ ಪ್ರಾಮುಖ್ಯತೆಯ ಬಗ್ಗೆ ಜಾಗೃತಿ ಮಾಡಿಸಿಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಿತರನ್ನಾಗಿ ಮಾಡಬೇಕು. ಹೆಚ್ಚು ಶಿಕ್ಷಿತರಾಗುವುದರಿಂದ ಸಮೃದ್ಧ, ಸುಸ್ಥಿರ ಮತ್ತು ಅಭಿವೃದ್ಧಿ ಸಾಧಿಸಲು ಸಹಾಯವಾಗುತ್ತದೆ.
ಅನಕ್ಷರಸ್ಥರೆಲ್ಲರೂ ವಿದ್ಯೆ ಕಲಿತು ಸಾಕ್ಷರಸ್ಥರಾಗಿಸಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದುಕೋರಿದರು.ವಿಶೇಷವಾಗಿ ಮಹಿಳೆಯರು ಶಿಕ್ಷಣದಿಂದ ವಂಚಿತರಾಗದಂತೆ ಸಾಕ್ಷರರನ್ನಾಗಿಸುವ ಹೆಚ್ಚಿನ ಕಾರ್ಯ ಕ್ರಮಗಳನ್ನು ರೂಪಿಸಬೇಕು. ಪ್ರತಿ ಮನೆ ಮನೆಗೂ ಅಕ್ಷರ ಕಲಿಸುವ ಕೆಲಸ ಆಗಬೇಕು ಎಂದರು..
ಜಿಲ್ಲೆಯಲ್ಲಿ ಸಾಕ್ಷರತೆಯ ಪ್ರಮಾಣ ಹೆಚ್ಚಳವಾಗಲು ಕೈಜೋಡಿಸ ಬೇಕೆಂದರು. ಜಿಲ್ಲಾ ಶಿಕ್ಷಣ ಮತ್ತುತರಬೇತಿ ಸಂಸ್ಥೆಯ ಹಿರಿಯ ಉಪನ್ಯಾಸಕ ಎನ್. ವಿ. ಸ್ವಾಮಿ, ತಾಲೂಕು ಸಂಯೋಜಕರಾದ ಪಿ. ಸೋಮಪ್ಪ, ಸಿ. ಮಂಜುನಾಥ್, ವೈ. ಗಿರಿರಾಜ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.