ತೈಲ ಬೆಲೆ ಇಳಿಕೆಗೆ ಲಾರಿ ಮಾಲೀಕರ ಆಗ್ರಹ
Team Udayavani, Feb 27, 2021, 12:38 PM IST
ಚಾಮರಾಜನಗರ: ಇಂಧನ ಬೆಲೆ ಏರಿಕೆ, ಹಳೆ ವಾಹನಗಳ ಗುಜರಿ ನೀತಿ ಹಾಗೂ ಫಾಸ್ಟ್ ಟ್ಯಾಗ್ ಬೆಲೆ ಏರಿಕೆ ಖಂಡಿಸಿ ಲಾರಿ ಮತ್ತು ಟೆಂಪೊ ಮಾಲೀಕರು ಕೇಂದ್ರ ಸರ್ಕಾರದ ವಿರುದ್ಧ ದೇಶಾದ್ಯಂತ ನಡೆಸುತ್ತಿರುವ ಮುಷ್ಕರ ಬೆಂಬಲಿಸಿ ಚಾಮರಾಜನಗರ ಲೋಕಲ್ ಲಾರಿ ಮತ್ತು ಟೆಂಪೊ ಮಾಲೀಕರ ಸಂಘದ ವತಿಯಿಂದ ನಗರದಲ್ಲಿ ಪ್ರತಿಭಟಿಸಲಾಯಿತು.
ನಗರದ ಸುಲ್ತಾನ್ ಷರೀಫ್ ವೃತ್ತದಲ್ಲಿ ಪ್ರತಿಭಟನಾನಿರತರು ಕೆಲಕಾಲ ರಸ್ತೆತಡೆ ನಡೆಸಿ, ಕೇಂದ್ರದ ವಿರುದ್ಧ ಧಿಕ್ಕಾರ ಕೂಗಿದರು.ಈ ವೇಳೆ ಸಂಘದ ಅಧ್ಯಕ್ಷ ಎಂ.ಡಿ. ಜಿಯಾ ಉಲ್ಲಾ ಮಾತನಾಡಿ, ಇಂಧನ ಬೆಲೆ ಏರಿಕೆ, ಹಳೆವಾಹನಗಳ ಗುಜರಿ ನೀತಿ ಹಾಗೂ ಫಾಸ್ಟ್ ಟ್ಯಾಗ್ ಬೆಲೆ ಏರಿಕೆಯಿಂದ ನಮ್ಮ ಲಾರಿ, ಟೆಂಪೋ ಹಾಗೂ ಇತರ ವಾಹನ ಮಾಲೀಕರಿಗೆ ತುಂಬಾ ತೊಂದರಿಯಾಗಿದೆ. ಇಂಧನ ಬೆಲೆ ಏರಿಕೆಯನ್ನು ವಾಪಸ್ ಪಡೆಯಬೇಕು ಎಂದರು.
ಪ್ರತಿಭಟನೆಯಲ್ಲಿ ಸಂಘದ ಉಪಾಧ್ಯಕ್ಷ ನಾಸೀರ್ ಖಾನ್, ಕಾರ್ಯದರ್ಶಿ ಡಿ.ಕೆ.ಇರ್ಷಾದ್, ಖಜಾಂಚಿ ನಯೀಮ್ ಉಲ್ಲಾಖಾನ್, ನಿರ್ದೇಶಕ ರಾದ ಮಹೇಶ್, ಅಸ್ಲಾಂಪಾಷಾ,ಶಕೀಲ್, ಆರೀಫ್, ಆಸೀಫ್ ಉಲ್ಲಾ, ಫಾಜಿಲ್ ಷರೀಫ್ ಇತರರಿದ್ದರು.
ಇಂದು ಲಕ್ಷ್ಮೀವರದರಾಜ ಸ್ವಾಮಿ ರಥೋತ್ಸವ :
ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿಯಪ್ರಸಿದ್ಧ ಲಕ್ಷ್ಮೀ ವರದರಾಜ ಸ್ವಾಮಿದೇವಸ್ಥಾನದಲ್ಲಿ 12ನೇ ವರ್ಷದ ದಿವ್ಯ ರಥೋತ್ಸವವು ಶನಿವಾರ ನಡೆಯಲಿದೆ.
ನಾಡಿನ ವಿವಿಧ ಭಾಗಗಳಿಂದ ಹಾಗೂಹೊರರಾಜ್ಯಗಳಿಂದಸಾವಿರಾರು ಮಂದಿಭಕ್ತಾದಿಗಳು ಆಗಮಿಸುವರು. ರಥೋತ್ಸವ ಪ್ರಯುಕ್ತ ದೇವಾಲಯದಲ್ಲಿ ಏಳು ದಿನಗಳ ಕಾಲ ವಿಶೇಷ ಪೂಜೆಆಯೋಜಿಸಲಾಗಿದೆ. ವಿದ್ಯುತ್ ಕಂಬಗಳಿಗೆ ಧ್ವನಿವರ್ಧಕ ಅಳವಡಿಸಿ ರಸ್ತೆಯಬದಿಗಳಲ್ಲಿ ದೀಪಾಲಂಕಾರಮಾಡಲಾಗಿದೆ. ವಿವಿಧ ವರ್ಣದ ಪತಾಕೆಗಳಿಂದ ಬ್ರಹ್ಮ ರಥವನ್ನು ಸಿದ್ಧಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.