New Year: ಹೊಸವರ್ಷ ಸ್ವಾಗತಿಸಲು ಬೆಟ್ಟಕ್ಟೆ ಲಕ್ಷಾಂತರ ಭಕ್ತರ ಆಗಮನ
Team Udayavani, Jan 1, 2024, 1:07 PM IST
ಚಾಮರಾಜನಗರ: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರು ಸಹಸ್ರಾರು ಸಂಖ್ಯೆಯಲ್ಲಿ ಬರುತ್ತಿದ್ದು, ಭಾನುವಾರ ಮಧ್ಯರಾತ್ರಿ ವೇಳೆಗೆ ಅಂದಾಜು 90 ಸಾವಿರಕ್ಕೂ ಹೆಚ್ಚು ಜನರು ಬೆಟ್ಟದಲ್ಲಿ ಬೀಡು ಬಿಟ್ಟಿದ್ದಾರೆ.
ಮಾದಪ್ಪನ ಭಕ್ತರು ಅನೇಕ ವರ್ಷಗಳಿಂದ ಹೊಸ ವರ್ಷದ ಮುನ್ನಾದಿನ ಬೆಟ್ಟಕ್ಕೆ ಆಗಮಿಸಿ, ವರ್ಷದ ಮೊದಲ ದಿನ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸುವುದು ವಾಡಿಕೆಯಾಗಿದೆ. ಹಾಗೆಯೇ 2024ರ ಮೊದಲ ದಿನವನ್ನು ಮಾದಪ್ಪನ ದರ್ಶನ ದೊಂದಿಗೆ ಶುಭಾರಂಭ ಮಾಡಲು ಭಕ್ತಾದಿಗಳು ಭಾನು ವಾರ ಬೆಳಿಗ್ಗೆಯಿಂದಲೇ ಬೆಟ್ಟಕ್ಕೆ ಆಗಮಿಸುತ್ತಿದ್ದಾರೆ. ಕಾಲ್ನಡಿಗೆಯ ಮೂಲಕ, ಕೆಎಸ್‌ಆರ್‌ಟಿಸಿ ಮತ್ತು ಬೆಟ್ಟದ ಬಸ್‌ಗಳಲ್ಲಿ, ಸ್ವಂತ ವಾಹನಗಳಲ್ಲಿ ಬೆಟ್ಟಕ್ಕೆ ಭಕ್ತಾದಿಗಳು ಆಗಮಿಸಿದ್ದಾರೆ. ಸುಮಾರು 90 ಸಾವಿರದಿಂದ ಒಂದು ಲಕ್ಷದವರೆಗೂ ಭಕ್ತಾದಿಗಳು ಹೊಸ ವರ್ಷದ ದಿನ ಸ್ವಾಮಿಯ ದರ್ಶನ ಪಡೆಯಲಿದ್ದಾರೆ ಎಂದು ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಉದಯವಾಣಿಗೆ ತಿಳಿಸಿದರು.
ಪಾದಯಾತ್ರಿಗಳಿಗೆ ಉಚಿತ ನೇರದರ್ಶನ: ಪಾದಯಾತ್ರೆಯ ಮೂಲಕ ಬೆಟ್ಟಕ್ಕೆ ಬರುವ ಭಕ್ತರಿಗೆ ರಾಜಗೋಪುರ ಮಾರ್ಗದಿಂದ ಪ್ರವೇಶಿಸಿ ಸ್ವಾಮಿಯ ನೇರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಅಲ್ಲದೇ ಅವರಿಗೆ ಉಳಿದುಕೊಳ್ಳಲು ತಾಳಬೆಟ್ಟದ ಯಾತ್ರಿ ನಿವಾಸದಲ್ಲಿ ಬೆಟ್ಟದ ವಸತಿ ಗೃಹಗಳಲ್ಲಿ ಉಚಿತ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.
ಬೆಟ್ಟಕ್ಕೆ ಆಗಮಿಸುವ ಎಲ್ಲ ಭಕ್ತರಿಗೂ ಉಳಿದುಕೊಳ್ಳಲು ವಸತಿ ವ್ಯವಸ್ಥೆ ಇದೆ. ದಾಸೋಹ ವ್ಯವಸ್ಥೆ ಮಾಡಲಾಗಿದೆ. ಭಕ್ತಾದಿಗಳಿಗೆ ಯಾವುದೇ ತೊಂದರೆ ಯಾಗದಂತೆ ಕ್ರಮ ವಹಿಸಲಾಗುತ್ತಿದೆ ಎಂದು ಸರಸ್ವತಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ
Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
MUST WATCH
ಹೊಸ ಸೇರ್ಪಡೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
Aircel-Maxis Case: ಏರ್‌ಸೆಲ್-ಮ್ಯಾಕ್ಸಿಸ್ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ
Bhagyanagar: ಹೈದರಾಬಾದ್ ಅಲ್ಲ, ಭಾಗ್ಯನಗರ: ಆರೆಸ್ಸೆಸ್ ಮತ್ತೆ ಹಕ್ಕೊತ್ತಾಯ
Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್‌ನಲ್ಲಿ ಪೈಪೋಟಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.