LS Polls: ನಮ್ಮ ಗೆಲುವು ನೂರಕ್ಕೆ ನೂರು ಗ್ಯಾರಂಟಿ: ರೋಡ್ ಶೋ ನಡೆಸಿ ಸಿಎಂ ಹೇಳಿಕೆ
Team Udayavani, Apr 3, 2024, 2:02 PM IST
ಚಾಮರಾಜನಗರ: ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ ಬಂದು ಎಲ್ಲಾ ಶಾಸಕರು ಮಾತನಾಡಿದ್ದಾರೆ. ಸುನೀಲ್ ಬೋಸ್ ಸಹ ಎಲ್ಲರನ್ನು ಭೇಟಿ ಮಾಡಿದ್ದಾರೆ. ಚಾಮರಾಜನಗರ ಮತ್ತು ಮೈಸೂರು ಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದು, ಈ ಬಾರಿ ಭಾರಿ ಮಟ್ಟದಲ್ಲಿ ಹುರುಪು ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಚಾಮರಾಜನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಪರ ಭರ್ಜರಿ ರೋಡ್ ಶೋ ನಡೆಸಿ ಮಾತನಾಡಿದ ಅವರು, ಎರಡು ಬಾರಿ ಆರ್.ಧ್ರುವ ನಾರಾಯಣ ಎಂಪಿ ಆಗಿದ್ದರು. ಮೂರನೇ ಬಾರಿ ಕೆಲವೇ ಮತಗಳ ಅಂತರದಲ್ಲಿ ಸೋತಿದ್ದರು. ಇಂದು ಅವರು ನಮ್ಮ ಜೊತೆಗಿಲ್ಲ. ಆದರೆ, ಅವರ ಸ್ಥಾನದಲ್ಲಿ ಸುನೀಲ್ ಬೋಸ್ ಅವರು ಇದ್ದು ಅವರನ್ನು ಎಲ್ಲಾ ಮತದಾರರು ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಎಂಟು ವಿಧಾನಸಭಾ ಕ್ಷೇತ್ರದಲ್ಲಿ 7 ಕಡೆ ನಮ್ಮ ಶಾಸಕರಿದ್ದಾರೆ. ಈ ಬಾರಿ ಹನೂರು ಕ್ಷೇತ್ರದಲ್ಲಿ ಬಹುಮತ ಕೊಡಿಸುವುದಾಗಿ ಆರ್. ನರೇಂದ್ರ ಭರವಸೆ ನೀಡಿದ್ದಾರೆ. 2 ಲಕ್ಷ ಮತಗಳ ಅಂತರದಿಂದ ಸುನೀಲ್ ಬೋಸ್ ಗೆಲುವು ಸಾಧಿಸಲಿದ್ದಾರೆ ಎಂದರು.
ಬಿಜೆಪಿ ಸರ್ಕಾರ ಹತ್ತು ವರ್ಷ ಕೇಂದ್ರದಲ್ಲಿದ್ದರೂ ಕೊಟ್ಟ ಮಾತನ್ನು ಈಡೇರಿಸಿಲ್ಲ. ಮೋದಿ ಸುಳ್ಳನ್ನು ಹೇಳಿ ಜನರನ್ನು ವಂಚಿಸಿದ್ದಾರೆ. ಕಳೆದ ಬಾರಿ ಸಿಎಂ ಆಗಿದ್ದಾಗಲೂ ಈಗ ಸಿಎಂ ಆದ ಮೇಲೂ ಎಲ್ಲ ಭರವಸೆಗಳನ್ನು ಈಡೇರೆಸಿದ್ದು, ಐದು ಗ್ಯಾರೆಂಟಿಗಳನ್ನು ಕೊಟ್ಟಿದ್ದೀನಿ ಎಂದರು.
ಮೋದಿ ಹೇಳಿದ 15 ಲಕ್ಷ ಖಾತೆಗೆ, ಉದ್ಯೋಗ ಸೃಷ್ಟಿ, ಪೆಟ್ರೋಲ್, ಡಿಸೆಲ್, ಗ್ಯಾಸ್ ಬೆಲೆ ಇಳಿಕೆಯಾಯಿತಾ, ಅವರಿಗೆ ಓಟ್ ಹಾಕಬೇಕಾ ಎಂದು ಪ್ರಶ್ನಿಸಿ, ಕೇಂದ್ರ ಸಂಪೂರ್ಣವಾಗಿ ವೈಫಲ್ಯ ಕಂಡಿದೆ. ಅದರ ಬಗ್ಗೆ ಜನರಿಗೆ ತಿಳಿಸಿ, ಅದರೊಂದಿಗೆ ನಮ್ಮ ಗ್ಯಾರಂಟಿ ಗಳನ್ನು ತಿಳಿಸಿ ಎಂದು ಹೇಳಿದರು.
ಬರ ಪರಿಹಾರಕ್ಕೆ ವರದಿ ನೀಡಿಲ್ಲ ಎಂದು ಅಮಿತ್ ಶಾ ಸುಳ್ಳು ಹೇಳುತ್ತಿದ್ದಾರೆ. ನಾನೇ ಸ್ವತಃ ಪ್ರಧಾನಿ ಅವರನ್ನು ಭೇಟಿ ಮಾಡಿ ರೈತರ ಕಷ್ಟದ ಬಗ್ಗೆ ತಿಳಿಸಿದ್ದೇನೆ ಎಂದರು.
ಬರಗಾಲವನ್ನು ನಮ್ಮ ಸಂಪನ್ಮೂಲಗಳಿಂದ ಎದುರಿಸುತ್ತಿದ್ದೇವೆ. ಕೇಂದ್ರದಿಂದ ಒಂದು ರೂ. ಬಂದಿಲ್ಲ. ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದ ಅವರು 3 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ ಎಂದು ಮನವಿ ಮಾಡಿ, ನಮ್ಮ ಗೆಲುವು ನೂರಕ್ಕೆ ನೂರು ಗ್ಯಾರೆಂಟಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ, ಡಾ.ಜಿ ಪರಮೇಶ್ವರ್, ಕೆ.ವೆಂಕಟೇಶ್, ಸತೀಶ್, ಜಾರಕಿ ಹೋಳಿ, ಡಾ.ಎಚ್ .ಸಿ ಮಹದೇವಪ್ಪ, ಯತೀಂದ್ರ, ಶಾಸಕ ಪುಟ್ಟರಂಗಶೆಟ್ಟಿ, ಎಆರ್ ಕೃಷ್ಣಮೂರ್ತಿ ಸೇರಿದಂತೆ ಇತರ ನಾಯಕರ ರೋಡ್ ಶೋ ನಲ್ಲಿ ಭಾಗವಹಿಸಿದ್ದರು.
ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.