ಬೆಂಗಳೂರಿನಲ್ಲಿ ಮಾದಿಗರ ಮಹಾ ಸಮಾವೇಶ: ರಾಜು
ಮಾ.8 ರಂದು ಮಾದಿಗ ವಿರಾಟ್ ಶಕ್ತಿ ಪ್ರದರ್ಶನ
Team Udayavani, Mar 5, 2021, 6:40 PM IST
ಚಾಮರಾಜನಗರ: ನ್ಯಾಯಮೂರ್ತಿ ಸದಾಶಿವ ವರದಿ ಜಾರಿಗಾಗಿ ಮಾದಿಗರ ಮಹಾ ಸಮಾವೇಶ ಹಾಗೂ ಮಾದಿಗ ವಿರಾಟ್ ಶಕ್ತಿ ಪ್ರದರ್ಶನ ಕಾರ್ಯಕ್ರಮವನ್ನು ಮಾ.8 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಆದಿ ದ್ರಾವಿಡ ಮಾದಿಗರ ಸಮಿತಿಯ ಅಧ್ಯಕ್ಷ ಡಿ.ಆರ್.ರಾಜು ತಿಳಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಮಾವೇಶಕ್ಕೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಜನರು ಭಾಗವಹಿಸಬೇಕು. ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳು101 ಇವೆ. ಈ ಸಮುದಾಯಗಳಲ್ಲಿ ಅಭಿವೃದ್ಧಿ ಹೊಂದಲು ಸರ್ಕಾರವು 2005 ರಲ್ಲಿ ನ್ಯಾಯಮೂರ್ತಿ ಸದಾಶಿವ ಆಯೋಗ ರಚಿಸಿತು. ಈ ಆಯೋಗವು ಉಪಜಾತಿಗಳ ಸ್ಥಿತಿಗತಿಗಳ ಬಗ್ಗೆ ಅಧ್ಯಯನ ನಡೆಸಿ 101 ಜಾತಿಗಳಲ್ಲಿ ಶೇ.15 ರ ಮೀಸಲಾತಿಯನ್ನು ನಿಗದಿಪಡಿಸಲಾಗಿದೆ. 101 ಜಾತಿಗಳ ಪೈಕಿ ಬಲಿಷ್ಟವಾದ ಒಂದೆರಡು ಪ್ರಮುಖ ಜಾತಿಗಳು ಮಾತ್ರ ಕಳೆದ 70 ವರ್ಷಗಳಿಂದ ಸೌಲಭ್ಯ ಪಡೆಯುತ್ತಿವೆ ಎಂದರು.
ನ್ಯಾ.ಸದಾಶಿವ ಆಯೋಗದ ವರದಿ ಜಾರಿಯಾದರೆ ಮಾದಿಗ ಆದಿ ದ್ರಾವಿಡ ಒಳಗೊಂಡಂತೆ 47 ಜಾತಿಗಳಶೇ.6 ರಷ್ಟು ಹಾಗೂ ಹೊಲೆಯ, ಚಲವಾದಿ ಸೇರಿದಂತೆ 50 ಜಾತಿಗೆ ಶೇ.5 ರಷ್ಟು, ಲಂಬಾಣಿ, ಬೋವಿಗೆ ಶೇ.3 ಹಾಗೂ ಇತರೆ ಶೇ.1 ರಷ್ಟು ನಿಗದಿಯಾಗುತ್ತದೆ. ಇದನ್ನು ನಿಗದಿ ಮಾಡುವಂತೆ 2012 ರಲ್ಲಿ ರಾಜ್ಯ ಸರ್ಕಾರಕ್ಕೆ ನ್ಯಾ. ಸದಾಶಿವ ಆಯೋಗ ಸಲ್ಲಿಸಿರುವ ವರದಿಯನ್ನು ಜಾರಿಗೊಳಿಸಿಲ್ಲ.ಹೀಗಾಗಿ ಈ ವರದಿ ಅನ್ವಯ ಮೀಸಲಾತಿಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಸಮಾವೇಶ ನಡೆಸಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಆದಿದ್ರಾವಿಡ ಮಾದಿಗರ ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷ ಪಿ.ಮಂಜುನಾಥ, ಜಿ.ಅಶೋಕ್, ಉಪಾಧ್ಯಕ್ಷಎಂ.ಮಹದೇವ್, ಪ್ರಧಾನ ಕಾರ್ಯದರ್ಶಿ ದಿನೇಶ್‌ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.