ಉತ್ತಮ ಆಡಳಿತ ನಡೆಸಿ ಜನಸೇವೆ ಮಾಡಿ
Team Udayavani, Oct 23, 2019, 3:00 AM IST
ಚಾಮರಾಜನಗರ: ಗ್ರಾಪಂಯ ಚುನಾಯಿತ ಮಹಿಳಾ ಸದಸ್ಯರು ತಮಗಿರುವ ಸಂವಿಧಾನಬದ್ಧ ಹಕ್ಕು ಮತ್ತು ಕರ್ತವ್ಯಗಳನ್ನು ತಿಳಿದುಕೊಳ್ಳುವುದು ಬಹಳ ಮುಖ್ಯವಾಗಿದೆ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು. ನಗರದ ತಾಪಂ ಸಭಾಂಗಣದಲ್ಲಿ ಆರ್ಗನೈಸೇಷನ್ ಫಾರ್ ದ ಡೆವಲಪ್‌ಮೆಂಟ್ ಆಫ್ ಪೀಪಲ್ (ಒಡಿಪಿ) ಮೈಸೂರು ಮತ್ತು ದ ಹಂಗರ್ ಪ್ರೊಜೆಕ್ಟ್ ಭಾರತ ಇವರ ಸಹಯೋಗದೊಂದಿಗೆ ಸುಗ್ರಾಮ ಗ್ರಾಪಂ ಚುನಾಯಿತ ಮಹಿಳಾ ಪ್ರತಿನಿಧಿಗಳ ಸಂಘ ಗ್ರಾಪಂ ಚುನಾಯಿತ ಮಹಿಳಾ ಸದಸ್ಯರಿಗೆ ಏರ್ಪಡಿಸಿದ ತಾಲೂಕು ಮತ್ತು ಜಿಲ್ಲಾ ಮಟ್ಟದ ಜನಪ್ರತಿಗಳೊಂದಿಗೆ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಗ್ರಾಪಂ ಚುನಾಯಿತ ಮಹಿಳಾ ಸದಸ್ಯರಿಗೆ ಉತ್ತಮ ಆಡಳಿತ ಹಾಗೂ ಅವರಿಗಿರುವ ಹಕ್ಕು ಮತ್ತು ಕರ್ತವ್ಯಗಳು, ಸರ್ಕಾರದಿಂದ ದೊರೆಯುವ ಸವಲತ್ತುಗಳ ಕುರಿತು ಆರ್ಗನೈಜೇಷನ್ ಫಾರ್ ದ ಡೆವಲಪ್‌ಮೆಂಟ್ ಆಫ್ ಪೀಪಲ್ (ಒಡಿಪಿ) ಮೈಸೂರು ಮತ್ತು ದ ಹಂಗರ್ ಪ್ರೊಜೆಕ್ಟ್ ಭಾರತ ಇವರ ಸಹಯೋಗದೊಂದಿಗೆ ಸುಗ್ರಾಮ ಗ್ರಾಪಂ ಚುನಾಯಿತ ಮಹಿಳಾ ಪ್ರತಿನಿಧಿಗಳ ಸಂಘ ಕರ್ನಾಟಕ ತರಬೇತಿ ಕೊಡುತ್ತಿರುವುದು ಒಳ್ಳೆಯ ಕಾರ್ಯಕ್ರಮವಾಗಿದೆ.
ಇಂಥ ತರಬೇತಿ ಕಾರ್ಯಕ್ರಮವನ್ನು ಶಿಬಿರಾರ್ಥಿಗಳು ಸದುಪಯೋಗಪಡಿಸಿಕೊಂಡು ಗ್ರಾಪಂಯಲ್ಲಿ ಉತ್ತಮ ಆಡಳಿತ ನಡೆಸಿ ಜನಸೇವೆ ಮಾಡಬೇಕು ಎಂದು ಸಲಹೆ ನೀಡಿದರು. ಗ್ರಾಪಂಯಲ್ಲಿ ಒಳ್ಳೆಯ ಅಭಿವೃದ್ಧಿ ಕೆಲಸ ಮಾಡಬಹುದು. ಬಹಳ ಪ್ರಾಮಾಣಿಕವಾಗಿ, ಜವಾಬ್ದಾರಿಯುತವಾಗಿ ಕೆಲಸ ಮಾಡಿದರೆ ಉತ್ತಮ ಜನಪ್ರತಿನಿಧಿಯಾಗಿ ಮುಂದಿನ ಚುನಾವಣೆಗಳಲ್ಲಿ ಸುಲಭವಾಗಿ ಆಯ್ಕೆಯಾಗಬಹುದು ಎಂದರು.
ನಿಮ್ಮ ಗ್ರಾಪಂ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದರೆ ಶಾಸಕರ ಗಮನಕ್ಕೆ ತರಬೇಕು. ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ತಮ್ಮ ಗಮನಕ್ಕೆ ತಂದರೆ ಪರಿಹರಿಸಿಕೊಡುತ್ತೇನೆ. ತಮ್ಮ ಮನವಿಯಂತೆ ಚಾಮರಾಜನಗರದಲ್ಲಿ ಮಹಿಳಾ ಭವನ ನಿರ್ಮಾಣಕ್ಕೆ ಅನುದಾನ ಕೊಡುವುದಾಗಿ ಭರವಸೆ ನೀಡಿದರು. ತಾಲೂಕು ಮಟ್ಟದಲ್ಲಿ ಮಹಿಳಾ ಭವನ ನಿರ್ಮಾಣ ಹಾಗೂ ತಾಲೂಕು ಕೇಂದ್ರಗಳಲ್ಲಿ ಮಹಿಳಾ ಪೊಲೀಸ್ ಠಾಣೆ ತೆರೆಯುವುದು ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ಶಾಸಕ ಸಿ.ಪುಟ್ಟರಂಗಶೆಟ್ಟಿಗೆ ಸುಗ್ರಾಮ ಗ್ರಾಪಂ ಮಹಿಳಾ ಪ್ರತಿನಿಧಿಗಳ ಸಂಘದ ಸದಸ್ಯರು ಮನವಿ ಸಲ್ಲಿಸಿದರು.
ತಾಪಂ ಅಧ್ಯಕ್ಷೆ ದೊಡ್ಡಮ್ಮ, ಉಪಾಧ್ಯಕ್ಷ ಬಸವಣ್ಣ, ಕಾರ್ಯನಿರ್ವಾಹಕ ಅಧಿಕಾರಿ ಪ್ರೇಮ್‌ಕುಮಾರ್, ಸುಗ್ರಾಮ ಅಧ್ಯಕ್ಷೆ ಪದ್ಮಾ, ಉಪಾಧ್ಯಕ್ಷ ಕುಮಾರಿ, ಖಜಾಂಚಿ ಜ್ಯೋತಿ, ನಿರ್ದೇಶಕರಾದ ರಾಜೇಶ್ವರಿ, ಪುಟ್ಟನಂಜಮ್ಮ, ಒಡಿಪಿ ಸಂಸ್ಥೆ ಸಂಯೋಜಕ ಜಿ.ಅಶೋಕ್‌ಕುಮಾರ್, ಕಾರ್ಯಕರ್ತೆಯರಾದ ಭಾಗ್ಯಲಕ್ಷ್ಮಿ, ಸುಶೀಲಾ ಹಾಗೂ 18 ಗ್ರಾಪಂಗಳ 60 ಮಹಿಳಾ ಸದಸ್ಯರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ
MUST WATCH
ಹೊಸ ಸೇರ್ಪಡೆ
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.