ಸಾವಯವ ಕೃಷಿಯಿಂದ ಜಿಲ್ಲೆಯನ್ನು ವಿಷಮುಕ್ತವಾಗಿಸಿ


Team Udayavani, Feb 18, 2020, 3:00 AM IST

savayava

ಯಳಂದೂರು: ಸಾವಯವ ಕೃಷಿ ಪದ್ಧತಿಗೆ ಒತ್ತು ನೀಡಿ ಜಿಲ್ಲೆಯನ್ನು ವಿಷಮುಕ್ತ ಆಹಾರ ಜಿಲ್ಲೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಪಣ ತೊಡಲಾಗಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್‌ ತಿಳಿಸಿದರು. ತಾಲೂಕಿನ ಹೊನ್ನೂರು ಗ್ರಾಮದ ಪ್ರಕಾಶ್‌ ಅವರ ಜಮೀನಿನಲ್ಲಿ ರೈತ ಸಂಘ, ಹಸಿರು ಸೇನೆ, ನಿಸರ್ಗ ನೈಸರ್ಗಿಕ ಸಾಯಯವ ಕೃಷಿಕರ ಸಂಘ ಹಮ್ಮಿಕೊಂಡಿದ್ದ ಸಿರಿಧಾನ್ಯಗಳ ಮೌಲ್ಯವರ್ಧನೆ ಕುರಿತಾಗಿ ಮಹಿಳೆಯರಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಗತ್ಯ ತರಬೇತಿ: ಮಹಿಳೆಯರಿಗೆ ಸಾವಯವ ಕೃಷಿ ಬಗ್ಗೆ ತರಬೇತಿ ನೀಡಲಾಗುತ್ತಿದೆ. ನಾವು ಬೆಳೆಯುವ ಪದಾರ್ಥಗಳಿಗೆ ಮಾರುಕಟ್ಟೆಯನ್ನು ಹೇಗೆ ರೂಪಿಸಿಕೊಳ್ಳಬೇಕು. ಸಿರಿಧಾನ್ಯಗಳ ಬೆಳೆ, ಇವುಗಳ ಮಾರುಕಟ್ಟೆ ಬೆಲೆ, ಇದರಿಂದ ತಯಾರಿಸುವ ಆಹಾರ ಪದಾರ್ಥ ಬಗ್ಗೆ ಮಹಿಳೆಯರಿಗೆ ತರಬೇತಿ ನೀಡಿ ವಿಷಮುಕ್ತ ಆಹಾರ ಜಿಲ್ಲೆಯನ್ನಾಗಿ ರೂಪಿಸಬೇಕೆಂದು ತಿಳಿಸಿದರು.

ಬಳಕೆ ಹೆಚ್ಚಾಗಲಿ: ಕೃಷಿ ವಿಜ್ಞಾನ ಸಂಘದ ಸಂಚಾಲಕಿ ಚಂದ್ರಕಲಾ ಮಾತನಾಡಿ, ಪುರಾತನ ಕಾಲದ ಬೆಳೆಗಳಾದ ಸಿರಿಧಾನ್ಯ ಪೋಷಕಾಂಶಗಳ ಆಹಾರ. ಮನುಷ್ಯ ಮತ್ತೆ ಈ ಆಹಾರ ಪದ್ಧತಿಗೆ ವಾಲಿದ್ದಾನೆ. ಸಿರಿಧಾನ್ಯಗಳಲ್ಲಿ ನಾರು, ಪ್ರೋಟಿನ್‌ ಸೇರಿದಂತೆ ಹಲವು ಮಹತ್ವವಾದ ಪೋಷಕಾಂಶ ಇವೆ. ಇದರ ಬಳಕೆ ಹೆಚ್ಚಾಗಬೇಕು ಎಂದು ಮನವಿ ಮಾಡಿದರು. ಬೇಡಿಕೆಯೂ ಹೆಚ್ಚಾಗಿದ್ದು ಅನೇಕ ಇತರೆ ಪದಾರ್ಥ ತಯಾರಿಸಿ ಮಾರುಕಟ್ಟೆ ಒದಗಿಸಬಹುದು. ಇಂತಹ ಆಹಾರ ಪದಾರ್ಥಗಳನ್ನು ತಯಾರಿಸಲು, ಬೆಳೆಯಲು ಸಂಘದ ವತಿಯಿಂದ ಅನೇಕ ಕಾರ್ಯಕ್ರಮ, ತರಬೇತಿ ನಡೆಯುತ್ತವೆ. ಮಹಿಳೆಯರು ತರಬೇತಿ ಪಡೆದು ಸ್ವಾವಲಂಬಿ ಬದುಕು ಸಾಗಿಸಬೇಕೆಂದರು.

ಭತ್ತ ನಾಟಿ ಮಾಡುವ ಯಂತ್ರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ತಾಲೂಕು ಯೋಜನಾಧಿಕಾರಿ ಸತೀಶ್‌ ಮಾತನಾಡಿ, ನಮ್ಮ ಸಂಸ್ಥೆ ವತಿಯಿಂದ ಮುಂದಿನ ತಿಂಗಳಿಂದ ಯಂತ್ರಶ್ರೀ ಯೋಜನೆಯಡಿ ನಮ್ಮ ತಾಲೂಕಿಗೆ 5 ಭತ್ತ ನಾಟಿ ಮಾಡುವ ಯಂತ್ರ ಇಡಲಾಗುವುದು. ಇದರಿಂದ ಕೂಲಿ ಕಾರ್ಮಿಕರ ಕೊರತೆ ನೀಗಿಸಬಹುದು. ಜೊತೆಗೆ ಯಂತ್ರ ಕಟಾವು ಯಂತ್ರ ಪೂರೈಸಲಾಗುವುದು. ಸಿರಿಧಾನ್ಯ ಬಳಕೆ, ಬೆಳೆಗಳಿಗೆ ನಮ್ಮ ಸಂಸ್ಥೆ ವತಿಯಿಂದಲೂ ಹೆಚ್ಚಿನ ಪ್ರೋತ್ಸಾಹವಿದ್ದು ಇದನ್ನು ಬೆಳೆಯಬೇಕು. ಜೊತೆಗೆ ಸ್ವತಃ ನಾವೇ ಇದನ್ನು ಬಳಸಿ ಆರೋಗ್ಯ ವೃದ್ಧಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಿರಿಧಾನ್ಯ ಖಾದ್ಯ ಘಮಲು: ಇದೇ ಸಂದರ್ಭದಲ್ಲಿ ಕೊರಲೆಯಿಂದ ಮಾಡಿದ 15 ಆಹಾರ ಪದಾರ್ಥ ಗಮನ ಸೆಳೆದವು. ನೈಸರ್ಗಿಕ ಕೃಷಿ, ತೆಂಗಿನ ಎಣ್ಣೆಯಲ್ಲಿ ಕರಿದ ಬಾಳೆಕಾಯಿ ಚಿಪ್ಸ್‌, ಬೇಲದ ಹಣ್ಣಿನ ಪಾನಕ, ಕೊರಲೆ ಪಾಯಸ, ಉದಲಿನ ಪೊಂಗಲ್‌ನ ತಿಂಡಿಯನ್ನು ನೆರೆದಿದ್ದವರಿಗೆ ಬಡಿಸಲಾಯಿತು. ಮೈಸೂರು ನಿಸರ್ಗ ಟ್ರಸ್ಟ್‌ನ ಬಸವರಾಜು, ಬೆಂಗಳೂರು ಸಾವಯವ ಕೃಷಿ ಟ್ರಸ್ಟ್‌ನ ಸಿದ್ಧರಾಮೇಶ್‌, ಅಂಬಳೆ ಶಿವಕುಮಾರ್‌, ಪ್ರವೀಣ್‌, ಶ್ರೀನಿವಾಸ್‌, ಮಹಾದೇವಸ್ವಾಮಿ, ನೂರಾರು ರೈತರು, ರೈತ ಮಹಿಳೆಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.