![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 14, 2021, 7:22 PM IST
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಹೆಡಿಯಾಲ ಉಪ ವಿಭಾಗದ, ಗುಂಡ್ರೆ ವಲಯದ ಆನೆ ತಡೆ ಕಂದಕದ ಪೊದೆಯೊಂದರಲ್ಲಿ ಗಂಡು ಹುಲಿಯ ಕಳೆಬರ ಪತ್ತೆಯಾಗಿದೆ.
ಹುಲಿಗೆ ಸುಮಾರು 5 ರಿಂದ 6 ವರ್ಷ ವಯಸ್ಸಾಗಿದೆ ಎನ್ನಲಾಗಿದ್ದು, ಮೃತ ದೇಹ ಪರಿಶೀಲಿಸಿದಾಗ 3-4 ದಿನಗಳ ಹಿಂದೆ ಮುಳ್ಳು ಹಂದಿಯನ್ನು ತಿನ್ನಲು ಹೋಗಿ ಅದರ ಜೊತೆ ಕಾದಾಡಿ, ಹುಲಿಯ ಮುಂಗಾಲಿನಲ್ಲಿ ಹಂದಿಯ ಮುಳ್ಳುಗಳು ಚುಚ್ಚಿಕೊಂಡಿದೆ. ನಂತರ ಹೊರಬಂದು ಅದು ಸಣ್ಣ-ಪುಟ್ಟ ಪ್ರಾಣಿಗಳನ್ನು ಸುಲಭವಾಗಿ ಬೇಟೆಯಾಡಲು ಕಂದಕದ ಪೊದೆಯೊಂದರಲ್ಲಿ ಪ್ರಯತ್ನಿಸುತ್ತಿದ್ದಾಗ ಉರುಳಿಗೆ ಸಿಲುಕಿ ಒದ್ದಾಡಿ ಮೆದುಳಿನ ರಕ್ತಸ್ರಾವವಾಗಿ ಮೃತಪಟ್ಟಿದೆ ಎಂದು ಬಂಡೀಪುರ ಹುಲಿ ಯೋಜನೆ ನಿರ್ದೇಶಕ ನಟೇಶ್ ಮಾಹಿತಿ ನೀಡಿದ್ದಾರೆ.
ಪ್ರಕರಣದ ಕುರಿತು ಗುಂಡ್ರೆ ವಲಯದಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದ್ದು, ಸ್ಥಳಕ್ಕೆ ರಾಣ ಸೇರಿದಂತೆ ಇಲಾಖಾ ಶ್ವಾನವನ್ನು ಕರೆಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಹೆಚ್ಚಿನ ಮಾಹಿತಿಗೆ ಮೃತ ಗಂಡು ಹುಲಿಯ ವಿವಿಧ ಅಂಗಾಂಗಗಳನ್ನು ಪರೀಕ್ಷೆಗಾಗಿ ಕಳುಹಿಸಲಾಗಿದೆ.
ಮರಣೋತ್ತರ ಪರೀಕ್ಷೆ ನಡೆಸಿ ನಂತರ ನಿಯಮದ ಪ್ರಕಾರ ಹುಲಿ ಮೃತ ದೇಹವನ್ನು ಸುಡಲಾಗಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.