Gundlupete ಕೊಳೆತ ಸ್ಥಿತಿಯಲ್ಲಿ ಗಂಡು ಕಾಡಾನೆ ಮೃತದೇಹ ಪತ್ತೆ
Team Udayavani, Oct 3, 2023, 8:02 PM IST
ಗುಂಡ್ಲುಪೇಟೆ(ಚಾಮರಾಜನಗರ): 35 ವರ್ಷದ ಗಂಡು ಕಾಡಾನೆ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ತಾಲೂಕಿನ ಬಂಡೀಪುರ ಅಭಯಾರಣ್ಯ ಗುಂಡ್ಲುಪೇಟೆ ಉಪ ವಿಭಾಗದ ಓಂಕಾರ ವನ್ಯಜೀವಿ ವಲಯ ವ್ಯಾಪ್ತಿಯ ಕುರುಬರಹುಂಡಿ ಶಾಖೆಯ ನಾಗಣಾಪುರ ಬ್ಲಾಕ್ 2ರ ಆಲದ ಮರದ ಹಳ್ಳ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಕಾಡಾನೆಯು ಮತ್ತೊಂದು ಕಾಡಾನೆಯ ಜೊತೆ ಕಾದಾಟ ನಡೆಸಿ ಮೃತಪಟ್ಟಿರುವುದಾಗಿ ಅರಣ್ಯ ಅಧಿಕಾರಿಗಳು ದೃಢಪಡಿಸಿದ್ದಾರೆ.
ಕಾಡಾನೆಯ ಕಣ್ಣಿನ ಕೆಳಭಾಗದಲ್ಲಿ ಎದುರಾಳಿ ಕಾಡಾನೆಯ ದಂತ ಚುಚ್ಚಿರುವುದು ಕಂಡು ಬಂದಿದ್ದು, ರಕ್ತಸ್ರಾವ ಹಾಗೂ ನಿತ್ರಾಣದಿಂದ ಮೃತಪಟ್ಟಿದೆ ಎನ್ನಲಾಗುತ್ತಿದೆ. ಎದುರಾಳಿ ಕಾಡಾನೆಯ ದಂತ ಚುಚ್ಚಿ ದಂತವು ಮೃತ ಕಾಡಾನೆಯ ಮೇಲ್ದವಡೆಯವರೆಗೆ 30 ಸೆ.ಮೀ ಆಳದವರೆಗೆ ಹೊಳಹೊಕ್ಕಿದ್ದು, ದವಡೆಯ ಒಳಗೆ ದಂತವು ಮುರಿದಿರುವುದರಿಂದ ಕಾಡಾನೆಯು ಸಾವನ್ನಪ್ಪಿದೆ ಎಂದು ಬಂಡೀಪುರ ಹುಲಿ ಯೋಜನೆಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪಿ.ರಮೇಶ್‍ಕುಮಾರ್ ಮಾಹಿತಿ ನೀಡಿದ್ದಾರೆ.
ಎದುರಾಳಿ ಆನೆಯ ಮುರಿದ ದಂತದ ಭಾಗ ಹಾಗೂ ಮೃತ ಕಾಡಾನೆಯ ಎರಡು ದಂತಗಳನ್ನು ಇಲಾಖಾ ಪರ ವಶಪಡಿಸಿಕೊಂಡು ಮೃತ ಕಾಡಾನೆಯ ಶವವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕಳೆಬರವನ್ನು ನಿಯಮಾನುಸಾರ ಕಾಡಾನೆ ಮೃತಪಟ್ಟ ಅರಣ್ಯ ಪ್ರದೇಶದಲ್ಲೆ ಬಿಡಲಾಯಿತು.
ಈ ಸಂಧರ್ಭದಲ್ಲಿ ಬಂಡೀಪುರ ಹುಲಿ ಯೋಜನೆ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪಿ.ರಮೇಶ್ ಕುಮಾರ್, ಗುಂಡ್ಲುಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ರವೀಂದ್ರ, ಓಂಕಾರ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಕೆ.ಪಿ.ಸತೀಶ್ ಕುಮಾರ್, ಇಲಾಖಾ ಪಶುವೈದ್ಯಾಧಿಕಾರಿ ಡಾ.ಮಿರ್ಜಾ ವಾಸಿ, ಗಸ್ತು ವನಪಾಲಕ ಸಂತೋಷ್ ಸೇರಿದಂತೆ ಅರಣ್ಯ ವೀಕ್ಷಕ ಹಾಗೂ ಇಲಾಖಾ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.