ವಿಷ ಪ್ರಸಾದ ಬಾಧಿತರಿಗೆ ಹಲವು ಯೋಜನೆ ಘೋಷಣೆ
Team Udayavani, Dec 26, 2018, 6:58 AM IST
ಹನೂರು(ಚಾಮರಾಜನಗರ)/ವಿಜಯಪುರ: ಸುಳ್ವಾಡಿ ಗ್ರಾಮದ ಕಿಚ್‌ಗುತ್ ದೇಗುಲದಲ್ಲಿ ನಡೆದ ವಿಷ ಪ್ರಾಷನ ಘಟನೆಯಿಂದ ಬಾಧಿತರಾಗಿರುವ 98 ಕುಟುಂಬಗಳ 405 ಸದಸ್ಯರಿಗೆ ಸರ್ಕಾರ ವಿವಿಧ ಸವಲತ್ತುಗಳನ್ನು ಕಲ್ಪಿಸಲಿದ್ದು ಯಾರೂ ಧೃತಿಗೆಡಬಾರದು ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಧೈರ್ಯ ತುಂಬಿದರು. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಬಿದರಹಳ್ಳಿಯಲ್ಲಿ ಮಂಗಳವಾರ ನಡೆದ, ವಿಷಪೂರಿತ ಪ್ರಸಾದ ಸೇವನೆಯಿಂದಾಗಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಭೆ ಮತ್ತು ಸಂತ್ರಸ್ತರಿಗೆ ಸಾಂತ್ವನ ಸಭೆಯಲ್ಲಿ ಅವರು ಮಾತನಾಡಿದರು.
ದೇವರ ಪ್ರಸಾದದಲ್ಲಿ ವಿಷ ಮಿಶ್ರಣ ಮಾಡಿರುವುದು ಅತ್ಯಂತ ಅಮಾನವೀಯ ಕೃತ್ಯ. ಘಟನೆಯ ಆರೋಪಿಗಳನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆ ಖಂಡಿತವಾಗಿಯೂ ಆಗುತ್ತದೆ. ಬಾಧಿತರಾಗಿ ಭೂಮಿ ಇಲ್ಲದವರಿಗೆ ಸರ್ಕಾರದ ವತಿಯಿಂದಲೇ ಜಮೀನು ಖರೀದಿಸಿ, ಗಂಗಾಕಲ್ಯಾಣ ಯೋಜನೆಯಡಿ ಬೋರ್‌ವೆಲ್ ಕೊರೆಸಿ ಕೊಡಲು ಕ್ರಮ ಕೈಗೊಳ್ಳಲಾಗಿದೆ. ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ 30 ಮಂದಿ ನಿವೇಶನರಹಿತ ಕುಟುಂಬಗಳಿಗೆ ಸರ್ಕಾರದ ವತಿಯಿಂದಲೇ ನಿವೇಶನ ನೀಡಿ, 88 ಜನರಿಗೆ ಮನೆ ನಿರ್ಮಾಣ ಮಾಡಿಕೊಡಲು ಕ್ರಮ ವಹಿಸಲಾಗಿದೆ. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಮಹರ್ಷಿ ವಾಲ್ಮೀಕಿ ನಿಗಮ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ಬಾಧಿತರಿಗೆ 2 ಲಕ್ಷ ರೂ. ಮತ್ತು ಹಿಂದುಳಿದ ವರ್ಗಗಳ ಬಾಧಿತರಿಗೆ 1 ಲಕ್ಷ ರೂ. ಗಳ ಸಾಲ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿ, ಸ್ಥಳದಲ್ಲಿಯೇ ಮಂಜೂರಾತಿ ಪತ್ರ ನೀಡಿದರು.
ಗುಡಿ ಕೈಗಾರಿಕೆಗೆ ಸರ್ಕಾರದಿಂದಲೇ ವಿಶೇಷ ತರಬೇತಿ: ಭೀಕರ ಬರ ಹಾಗೂ ಇತರ ಕಾರಣಗಳಿಗೆ ಗುಳೆ ಹೋಗುವ ದುಃಸ್ಥಿತಿಗೆ ಕಡಿವಾಣ ಹಾಕಲು ತಮ್ಮ ಸರ್ಕಾರ ಚಿಂತನೆ ನಡೆಸಿದೆ. ಇದಕ್ಕಾಗಿ ಗ್ರಾಮೀಣ ಜನರು ಸ್ವಗ್ರಾಮದಲ್ಲೇ ಗುಡಿ ಕೈಗಾರಿಕೆ ಮೂಲಕ
ಬದುಕು ಕಟ್ಟಿಕೊಳ್ಳಲು ವಿಜಯಪುರ ತಾಲೂಕಿನ ಮದಭಾವಿ ತಾಂಡಾದಲ್ಲಿ ರಾಜ್ಯಕ್ಕೆ ಮಾದರಿ ಆಗುವ ಪೈಲಟ್ ಯೋಜನೆ ರೂಪಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಿಸಿದ್ದಾರೆ. ಮಂಗಳವಾರ ವಿಜಯಪುರ ತಾಲೂಕಿನ ಮದಭಾವಿ ತಾಂಡಾ-1ಕ್ಕೆ ಭೇಟಿ ನೀಡಿ, ಗುಳೆ ಹೋಗಿ ಅಪಘಾತದಲ್ಲಿ ಮೃತಪಟ್ಟಿದ್ದ 17 ಜನರ ಕುಟುಂಬಗಳಿಗೆ ಸಾಂತ್ವನ ಹೇಳಿದ ಬಳಿಕ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದರು.
ಗುಳೆ ದುಃಸ್ಥಿತಿಗೆ ಶಾಶ್ವತ ಪರಿಹಾರ ನೀಡಲು ಮದಭಾವಿ ಗ್ರಾಮದಲ್ಲಿ ಮಹಿಳೆಯರು, ಯುವಕರಿಗೆ ಸ್ಥಳೀಯವಾಗಿಯೇ ಗುಡಿ ಕೈಗಾರಿಕೆ, ಸ್ವಯಂ ಉದ್ಯೋಗಕ್ಕೆ ಅಗತ್ಯ ಕೌಶಲ್ಯ ತರಬೇತಿ ನೀಡಿ, ಉದ್ಯೋಗಿಗಳ ಸಂಘಗಳನ್ನು ಸ್ಥಾಪಿಸಿ ಸರ್ಕಾರವೇ ಬಡ್ಡಿ ರಹಿತ ಹಾಗೂ ರಿಯಾಯ್ತಿ ಸಾಲ ಸೌಲಭ್ಯ ಕಲ್ಪಿಸುತ್ತದೆ. ಇಂತಹ ಸಂಸ್ಥೆಗಳು ಉತ್ಪಾದಿಸುವ ಉತ್ಪನ್ನಗಳಿಗೆ ಸ್ಥಳೀಯವಾಗಿಯೇ ಮಾರುಕಟ್ಟೆ
ಕಲ್ಪಿಸುವ ಯೋಜನೆಯನ್ನು ಕೂಡ ಸರ್ಕಾರವೇ ಮಾಡಲಿದೆ ಎಂದರು. ತಾಂಡಾ ಮಾತ್ರವಲ್ಲದೆ ಈ ಭಾಗದ ಹಳ್ಳಿಗಳ ಜನರಿಗೆ ಅವರ ಉದ್ಯೋಗದ ಆಸಕ್ತಿಗೆ ಅನುಗುಣವಾಗಿ ಕೌಶಲ್ಯ ತರಬೇತಿ ನೀಡಿ ಉದ್ಯೋಗ ಕಲ್ಪಿಸುವ ಈ ಯೋಜನೆಯನ್ನು ಯಶಸ್ವಿಗೊಳಿಸಲು ನೀವೆಲ್ಲ ಶ್ರಮಿಸಬೇಕಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.