ಮತ್ಸ್ಯ ಸಂಪದ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಡೀಸಿ
Team Udayavani, Aug 22, 2020, 12:40 PM IST
ಸಾಂದರ್ಭಿಕ ಚಿತ್ರ
ಚಾಮರಾಜನಗರ: ಜಿಲ್ಲೆಯ ಸಂಪನ್ಮೂಲ ಬಳಸಿಕೊಂಡು ಮತ್ಸ್ಯ ಸಂಪದ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಸೂಚಿಸಿದರು.
ಮತ್ಸ್ಯ ಸಂಪದ ಯೋಜನೆ ಕುರಿತ ಸಂಬಂಧ ಗೂಗಲ್ ಮೀಟ್ ಮೂಲಕ ಮೀನುಗಾರಿಕೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. ಮೀನುಗಾರಿಕೆ ಇಲಾಖೆ ಮತ್ಸ್ಯ ಉದ್ಯಮಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಲು, ಮೀನುಗಾರರಲ್ಲಿ ನವತಂತ್ರಜ್ಞಾನದ ಬಗ್ಗೆ ಅರಿವು ಮೂಡಿಸಬೇಕು. ಮೀನು ಸಾಕಾಣಿಕೆಯಲ್ಲಿ ಪ್ರಗತಿ ಸಾಧಿಸಲು ವೈಜ್ಞಾ ನಿಕ ವಾದ ತಂತ್ರಜ್ಞಾನ ಅನುಸರಿಸಬೇಕು. ಮೀನು ಪರಿಪಾಲನಾ ಕೇಂದ್ರ ಸೂಕ್ತ ರೀತಿಯಲ್ಲಿ ಮೀನು ಮರಿ, ಮೊಟ್ಟೆಗಳನ್ನು ಒದಗಿಸಬೇಕು ಎಂದರು.
ತಿ.ನರಸೀಪುರ, ನಂಜನಗೂಡು, ಬೇಗೂರು ಮತ್ತು ಪುಣಜೂರು ರಸ್ತೆ ಭಾಗದಲ್ಲಿ ಮೀನಿನ ಅಂಗಡಿ ಮತ್ತು ಮಾರುಕಟ್ಟೆ ಸ್ಥಾಪಿಸಬೇಕು. ಈ ಸಂಬಂಧ ಗ್ರಾಮ, ತಾಲೂಕು ಮಟ್ಟದಲ್ಲಿ ಸಭೆ ನಡೆಸಬೇಕು ಎಂದು ಹೇಳಿದರು. ಅಲಂಕಾರಿಕ ಮೀನುಗಳ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಮೀನು ಮಾರಾಟ ಗಾರರಿಗೆ, ಮಹಿಳಾ ಮೀನುಗಾರರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಬೇಕು ಎಂದರು. ಮೀನುಗಾರಿಕೆ ಇಲಾಖೆ ಹಿರಿಯ ನಿರ್ದೇಶಕ ಕೆ.ಎಸ್.ರೆಡ್ಡಿ ಪ್ರಶಾಂತ್‌ರೆಡ್ಡಿ, ಮೀನುಗಾರಿಕೆ ಪ್ರೊಫೆಸರ್ ಶಿವಕುಮಾರ್ ಮಗದ ಇದ್ದರು.
50 ಅಡಿ ಆಳದ ಬಾವಿಗೆ ಹಸು ರಕ್ಷಣೆ :
ಹನೂರು: ಆಯ ತಪ್ಪಿ 50 ಅಡಿ ಆಳದ ತೆರೆದ ಬಾವಿಗೆ ಬಿದ್ದಿದ್ದ ಹಸುವನ್ನು ರಕ್ಷಿಸುವಲ್ಲಿ ಅಗ್ನಿಶಾಮಕ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ಕೌದಳ್ಳಿ ಸಮೀಪದ ಎಂ.ಜಿ.ದೊಡ್ಡಿ ಗ್ರಾಮದ ಶಾಂತರಾಜು ಎಂಬವರು ತಮ್ಮ ಹಸುವನ್ನು ಶುಕ್ರವಾರ ಬೆಳಗ್ಗೆ ಜಮೀನಿನಲ್ಲಿ ಮೇಯಲು ಬಿಟ್ಟಿದ್ದರು. ಈ ವೇಳೆ ಮೇಯುತ್ತಿದ್ದ ಹಸು ಆಯತಪ್ಪಿ ಪಕ್ಕದಲ್ಲಿ ಇದ್ದ 50 ಅಡಿ ಆಳದ ತೆರೆದ ಬಾವಿಗೆ ಬಿದ್ದಿದೆ. ಇದನ್ನು ಗಮನಿಸಿದ ಸಾರ್ವಜನಿಕರು ಕೂಡಲೇ ಹನೂರು ಪಟ್ಟಣದ ಅಗ್ನಿಶಾಮಕ ಇಲಾಖಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ಇಲಾಖೆ ಠಾಣಾಧಿಕಾರಿ ಶೇಷ ಮತ್ತು ಸಿಬ್ಬಂದಿ ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿ ಹಸುವನ್ನು ಸುರಕ್ಷಿತವಾಗಿ ಮೇಲೆತ್ತಿದ್ದಾರೆ. ಅದೃಷ್ಟವಶಾತ್ ಹಸುವಿಗೆ ಯಾವುದೇ ತೊಂದರೆಯಾಗಿಲ್ಲ. ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಗಿರೀಶ್, ನಾಗೇಶ್, ಜಯಪ್ರಕಾಶ್, ಆನಂದ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ
Kollegala: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ
New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.