ಚಾ.ನಗರ ದಸರಾ ಮಹೋತ್ಸವ ಯಶಸ್ವಿಯಾಗಲಿ
Team Udayavani, Oct 3, 2019, 3:00 AM IST
ಚಾಮರಾಜನಗರ: ನಮ್ಮ ಸಂಸ್ಕೃತಿ ಹಾಗೂ ಪರಂಪರೆಯ ದ್ಯೋತಕವಾಗಿ ದಸರಾ ಕಾರ್ಯಕ್ರಮ ಆಚರಿಸಿಕೊಂಡು ಬರಲಾಗುತ್ತಿದೆ. ಚಾಮರಾಜನಗರ ದಸರಾ ಮಹೋತ್ಸವ ಕಾರ್ಯಕ್ರಮವು ಯಶಸ್ವಿಯಾಗಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್‌ಕುಮಾರ್ ಹಾರೈಸಿದರು.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಭಾಗವಾಗಿ ನಗರದಲ್ಲೂ ಹಮ್ಮಿಕೊಳ್ಳಲಾಗಿರುವ ನಾಲ್ಕು ದಿನಗಳ ಚಾಮರಾಜನಗರ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿರುವ ವೇದಿಕೆಯಲ್ಲಿ ನಗಾರಿ ಬಾರಿಸುವ ಮೂಲಕ ಅವರು ಚಾಲನೆ ನೀಡಿದರು.
ಮಹೋತ್ಸವವನ್ನು ಸಂಭ್ರಮಿಸಿ: ಇತಿಹಾಸ ಪ್ರಸಿದ್ಧ ಚಾಮರಾಜನಗರ ದಸರಾ ಮಹೋತ್ಸವವನ್ನು ಉದ್ಘಾಟಿಸಿರುವುದು ನನ್ನ ಪುಣ್ಯ. ಈ ಬಾರಿ ದಸರಾ ಕಾರ್ಯಕ್ರಮಗಳನ್ನು ಎಲ್ಲಾ ವಯೋಮಾನದವರಿಗೂ ಇಷ್ಟವಾಗುವ ಮಾದರಿಯಲ್ಲಿ ಏರ್ಪಡಿಸಲಾಗಿದೆ. ಜನರು ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ದಸರಾ ಮಹೋತ್ಸವವನ್ನು ಸಂಭ್ರಮಿಸಬೇಕು ಎಂದರು.
ವಿಶೇಷ ವಿದ್ಯುತ್ ದೀಪಾಲಂಕಾರ: ದಸರಾ ಸಮಿತಿ ಉಪಾಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಿರಂಜನಕುಮಾರ್ ಮಾತನಾಡಿ, ಈ ಬಾರಿಯ ದಸರಾ ಮಹೋತ್ಸವದಲ್ಲಿ ವಿವಿಧ, ವಿಶಿಷ್ಟ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಆಹಾರ ಮೇಳವನ್ನು ಪ್ರಪ್ರಥಮ ಬಾರಿಗೆ ಏರ್ಪಡಿಸಲಾಗಿದೆ. ಜತೆಗೆ ಮಹಿಳಾ ದಸರಾ, ನಾಟಕೋತ್ಸವ ಹಾಗೂ ವಸ್ತುಪ್ರದರ್ಶನದಂತಹ ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ವಿಶೇಷವಾಗಿ ವಿದ್ಯುತ್ ದೀಪಾಲಂಕಾರವನ್ನು ಸಹ ನಗರದಲ್ಲಿ ಮಾಡಲಾಗಿದೆ ಎಂದರು. ಶಾಸಕ ಎನ್. ಮಹೇಶ್ ಮಾತನಾಡಿ, ಚಾಮರಾಜನಗರ ದಸರಾ ಮಹೋತ್ಸವ ಈ ಬಾರಿ ವೈವಿಧ್ಯತೆಯಿಂದ ಕೂಡಿದೆ. ಇದು ನಾಡಹಬ್ಬ. ದಸರಾ ನಮ್ಮ ನಾಡಿನ ಪರಂಪರೆಯಾಗಿದೆ. ಅದನ್ನು ನಾವು ಮುಂದುವರೆಸಿಕೊಂಡು ಹೋಗಬೇಕು ಎಂದರು.
ದಸರಾ ನಮ್ಮ ಸಂಸ್ಕೃತಿಯ ಪರಂಪರೆ: ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, ದಸರಾ ನಮ್ಮ ಸಂಸ್ಕೃತಿಯ ಪರಂಪರೆಯಾಗಿದೆ. ಅದನ್ನು ಜನರ ಆಶಯ, ಅಭಿರುಚಿಗೆ ತಕ್ಕಂತೆ ನಡೆಸಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಕೆ.ಎಸ್.ಮಹೇಶ್, ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಜಿ. ಬಸವಣ್ಣ, ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ ಆನಂದ್‌ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎಚ್. ನಾರಾಯಣ್‌ರಾವ್, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್. ಆನಂದ್ ಇತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಚಂದನ್‌ಶೆಟ್ಟಿ ಗಾಯನ: ದಸರಾ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆಯ ಬಳಿಕ ನಡೆದ ಕನ್ನಡದ ರ್ಯಾಪ್ ಗಾಯಕ ಚಂದನ್‌ಶೆಟ್ಟಿ ಅವರ ಗಾಯನ ಕಾರ್ಯಕ್ರಮ ಜನರನ್ನು ರಂಜಿಸಿತು. ಕಿರುತೆರೆ ನಿರೂಪಕಿ ಅನುಶ್ರೀ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navratri Special: ರಕ್ಕಸಿ ಹಿಡಿಂಬೆಯ ನಿಷ್ಕಲ್ಮಶ ಪ್ರೀತಿಗೆ ಯಾವ ಹೆಸರು ಕೊಡಲಿ
Navratri Special: ತಾಯ್ತನದ ಭಾವ ಎನ್ನುವುದು ಹೆಣ್ಣಿಗೆ ಮಾತ್ರ ಸೀಮಿತವೇ?
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?
Navaratri Special: ನಮ್ಮೊಳಗಿನ ರಾವಣನ ಸುಡುವುದೆಂತು…?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.