ವೈದ್ಯಕೀಯ ಸುಧಾರಣೆಗೆ ನಾಂದಿ ಹಾಡಿದ ಕೋವಿಡ್


Team Udayavani, Aug 23, 2021, 6:30 PM IST

cAz

ಚಾಮರಾಜನಗರ: ಕೋವಿಡ್‌ನಿಂದ ನೆಗೆಟಿವ್‌ ಅಂಶ ಹೆಚ್ಚಿದಾಗೆಲ್ಲಾ ಆರೋಗ್ಯ ವ್ಯವಸ್ಥೆಗೆ ಅದರಿಂದ ಪಾಸಿಟಿವ್‌ ಕೂಡ ಆಗಿದೆ. ಕೋವಿಡ್‌ ಕಾಲಿರಿಸಿದ ಈ ಒಂದೂವರೆ ವರ್ಷದ ಅವಧಿಯಲ್ಲಿ ಜಿಲ್ಲೆಯ ಆರೋಗ್ಯ ಇಲಾಖೆ ವ್ಯವಸ್ಥೆಯಲ್ಲಿ ಅನೇಕ ಗಮನಾರ್ಹ ಬದಲಾವಣೆಗಳಾಗಿವೆ.

ಜಿಲ್ಲೆಗೆ ಪ್ರತ್ಯೇಕ ಆರ್‌ಟಿಪಿಸಿಆರ್‌ ಪ್ರಯೋಗಾಲಯ, ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಯಲ್ಲಿ ಪ್ರಮುಖವಾಗಿ ಐಸಿಯು ಹಾಸಿಗೆ, ವೆಂಟಿಲೇಟರ್‌ ಸ್ಥಾಪನೆಯಾಗಿವೆ. ತಜ್ಞವೈದ್ಯರು, ವೈದ್ಯರು, ಸಿಬ್ಬಂದಿಯೂ ಹೆಚ್ಚಳವಾಗಿದ್ದಾರೆ.

ಆಕ್ಸಿಜನ್‌ ಘಟಕ ನಿರ್ಮಾಣ: ಕಳೆದ 2ನೇ ಅಲೆಯಲ್ಲಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಲಿಕ್ವಿಡ್‌ ಮೆಡಿಕಲ್‌ ಆಕ್ಸಿಜನ್‌ಪ್ಲಾಂಟ್‌ ಸ್ಥಾಪಿಸಲಾಯಿತು. ಈಗ ಆಕ್ಸಿಜನ್‌ ಜನರೇಷನ್‌ ಯೂನಿಟ್‌ ಸ್ಥಾಪಿಸಲಾಗುತ್ತಿದೆ. ಸಿಸಿ ಟಿವಿ ವ್ಯವಸ್ಥೆ ಕಲ್ಪಿಸಲಾಗಿದೆ. ಜಿಲ್ಲಾ ಕೋವಿಡ್‌ ಆಸ್ಪತ್ರೆ ಮಾತ್ರವಲ್ಲದೇ, 3 ತಾಲೂಕು ಆಸ್ಪತ್ರೆ ಹಾಗೂ 3 ಸಮುದಾಯ ಆರೋಗ್ಯಕೇಂದ್ರಗಳಲ್ಲಿ ಮೆಡಿಕಲ್‌ ಗ್ಯಾಸ್‌ ಪೈಪ್‌ ಲೈನ್‌, ಮ್ಯಾನಿಫೋಲ್ಡ್‌ ವ್ಯವಸ್ಥೆ ಮಾಡಲಾಗಿದೆ. ತಾಲೂಕು ಆಸ್ಪತ್ರೆಗಳಲ್ಲೂ ತಲಾ 3 ವೆಂಟಿಲೇಟರ್‌, ಐಸಿಯು ಬೆಡ್‌ಗಳಿವೆ.ಸಂತೆ ಮರಹಳ್ಳಿ ತಾಯಿ ಮಕ್ಕಳ ಆಸ್ಪತ್ರೆ ಹಾಗೂ ಯಳಂದೂರು ತಾಲೂಕು ಆಸ್ಪತ್ರೆಗಳಲ್ಲಿ ಖನಿಜ ಪ್ರತಿಷ್ಠಾನದ ಅನುದಾನದಿಂದ ಮೆಡಿಕಲ್‌ ಗ್ಯಾಸ್‌ಪೈಪ್‌ಲೈನ್‌ ಆಗಿದೆ. ನವೀಕರಣ ಕಾಮಗಾರಿ ಮಾಡಲಾಗಿದೆ.

ಸರ್ಕಾರಿ ಮೆಡಿಕಲ್‌ ಕಾಲೇಜಿನಲ್ಲಿ 20 ಕಿಲೋ ಲೀಟರ್‌ಎಲ್‌ಎಂಒ ಪ್ಲಾಂಟ್‌ ನಿರ್ಮಿಸಲಾಗುತ್ತಿದೆ.ನ್ಯಾಚುರಲ್‌ ಆಕ್ಸಿಜನ್‌ ಜನರೇಟರ್‌ಗಳನ್ನು ಜಿಲ್ಲಾಸ್ಪತ್ರೆ, ನೂತನ ವೈದ್ಯಕೀಯ ಕಾಲೇಜು ಆಸ್ಪತ್ರೆ, ರಾಮಾಪುರ, ಕೊಳ್ಳೇಗಾಲ, ಯಳಂದೂರು, ಗುಂಡ್ಲುಪೇಟೆ ಆಸ್ಪತ್ರೆಗಳಲ್ಲಿ ಸ್ಥಾಪಿಸಲಾಗುತ್ತದೆ. ಇದಲ್ಲದೆ ಜಿಲ್ಲೆಯ ವಿವಿಧೆಡೆಗೆ 12 ಮಂದಿ ತಜ್ಞ ವೈದ್ಯರನ್ನುನೇಮಕ ಮಾಡಿಕೊಳ್ಳಲಾಗಿದೆ.

20 ಮಂದಿ ಎಂಬಿಬಿಎಸ್‌ವೈದ್ಯರ ನೇಮಕಾತಿ ಮಾಡಿಕೊಳ್ಳಲಾಗಿದೆ. ಖಾಲಿ ಹುದ್ದೆಭರ್ತಿಯಾಗಿವೆ. ಒಟ್ಟಾರೆ ಸಮುದಾಯ ಆರೋಗ್ಯಕೇಂದ್ರ, ತಾಲೂಕು ಆರೋಗ್ಯ ಕೇಂದ್ರಗಳು ಈಗಉನ್ನತೀಕರಣಗೊಂಡಿವೆ.

3ನೇ ಅಲೆ ಎದುರಿಸಲು ಸಿದ್ಧತೆ: ಸಂಭವನೀಯ ಕೋವಿಡ್‌ 3ನೇ ಅಲೆ ಎದುರಿಸಲು ಈಗಿರುವ ವ್ಯವಸ್ಥೆ ಬಲಪಡಿಸಲಾಗುತ್ತಿದೆ. ಬೆಂಗಳೂರಿನ ಆಸ್ಪತ್ರೆಗಳಿಂದ ಬಂದ ತಜ್ಞರಿಂದ ತರಬೇತಿ ನೀಡಲಾಗುತ್ತಿದೆ. ವೈದ್ಯರಿಗೆದಾದಿಯರಿಗೆ ತರಬೇತಿ ನೀಡಲಾಗುತ್ತಿದೆ. ನೂತನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ 100 ಹಾಸಿಗೆಗಳ ಮಕ್ಕಳ ವಿಭಾಗ ತೆರೆಯಲಾಗುತ್ತಿದೆ. ಕೋವಿಡ್‌ 3ನೇಅಲೆ ಭೀತಿ ಹಿನ್ನೆಲೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಜಿಲ್ಲಾಡಳಿತದಿಂದ ತೀವ್ರ ಮುನ್ನೆಚ್ಚರಿಕಾ ಕ್ರಮಕೈಗೊಳ್ಳಲಾಗಿದೆ.

ಕೇರಳ ರಾಜ್ಯದಿಂದ ಬಸ್‌, ವೈಯಕ್ತಿಕ ಸಾರಿಗೆ ಮೂಲಕ ಕರ್ನಾಟಕ ಪ್ರವೇಶಿಸುವವರು 2ನೇ ಡೋಸ್‌ ಕೋವಿಡ್‌ ಲಸಿಕೆ ಪಡೆದಿದ್ದರೂ, 72 ಗಂಟೆ ಒಳಗೆಮಾಡಿಸಿದ ಆರ್‌ಟಿಪಿಸಿಆರ್‌ ಪರೀಕ್ಷಾ ನೆಗೆಟಿವ್‌ಪ್ರಮಾಣ ಪತ್ರ ಹೊಂದುವುದು ಕಡ್ಡಾಯ. ಜಿಲ್ಲಾವ್ಯಾಪ್ತಿಯ ಎಲ್ಲಾ ಮುಜರಾಯಿ, ಖಾಸಗಿ ದೇವಾಲಯಗಳಲ್ಲಿ, ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿಪ್ರಾಧಿಕಾರದ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ, ದೇವರದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಎಲ್ಲಾಉತ್ಸವ, ಸೇವೆ, ತೀರ್ಥ, ಪ್ರಸಾದ, ದಾಸೋಹ,ಮುಡಿಸೇವೆ ನಿರ್ಬಂಧಿಸಲಾಗಿದೆ. ಶನಿವಾರ ಮತ್ತುಭಾನುವಾರ ಭಕ್ತಾದಿಗಳಗೆ ದರ್ಶನಕ್ಕೆ ಅವಕಾಶ ಇಲ್ಲ.ಜಿಲ್ಲೆಯ ವ್ಯಾಪ್ತಿಗೆ ಬರುವ ಎಲ್ಲಾ ರೆಸಾರ್ಟ್‌, ಲಾಡ್ಜ್,ಹೋಂ ಸ್ಟೇ, ವಸತಿ ಗೃಹ, ಅರಣ್ಯ ವಸತಿ ಗೃಹಗಳಲ್ಲಿ ಪ್ರವಾಸಿಗರು ತಂಗಲು ಮತ್ತು ಸಫಾರಿಯಲ್ಲಿಭಾಗವಹಿಸಲು, 72 ಗಂಟೆ ಒಳಗೆ ಮಾಡಿಸಿದ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಕಡ್ಡಾಯ. ಅರಣ್ಯಇಲಾಖೆ ಸಫಾರಿಯನ್ನು ವಾರಾಂತ್ಯದಲ್ಲಿ ನಿರ್ಬಂಧಿಸಿದೆ.ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳಾದ ಭರಚುಕ್ಕಿ,ಹೊಗೇನಕಲ್‌ ಜಲಪಾತ ಪ್ರದೇಶಗಳಲ್ಲಿ ವಾರಾಂತ್ಯಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ.

ಜಿಲ್ಲಾಸ್ಪತ್ರೆ ನವೀಕರಿಸಿ ಅಗತ್ಯ ಸೌಲಭ್ಯ

ಪ್ರಮುಖವಾಗಿ ಜಿಲ್ಲಾಸ್ಪತ್ರೆಯ ಹಳೆಕಟ್ಟಡವನ್ನು ಕೋವಿಡ್‌ ಹಿನ್ನೆಲೆ ನವೀಕರಣಗೊಳಿಸಲಾಯಿತು.ಜಿಲ್ಲಾಸ್ಪತ್ರೆಯಲ್ಲಿ ಐಸಿಯು ಸೌಕರ್ಯವೇ ಇರಲಿಲ್ಲ.ಕೋವಿಡ್‌ ಬಳಿಕ ಇಲ್ಲಿ50 ಹಾಸಿಗೆಗಳ ಐಸಿಯು ವ್ಯವಸ್ಥೆ ಕಲ್ಪಿಸಲಾಗಿದೆ.25 ವೆಂಟಿಲೇಟರ್‌ ಅಳವಡಿಸಲಾಗಿದೆ. ಮೊದಲು55 ಆಕ್ಸಿಜನ್‌ ಬೆಡ್‌ಗಳಿದ್ದವು. ಈಗ155ಆಕ್ಸಿಜನ್‌ ಬೆಡ್‌ಗಳಿವೆ.

8 ಬೆಡ್‌ಗಳಿಗೆ ಹೈ ಫ್ಲೋ ಆಕ್ಸಿಜನ್‌ ಪೂರೈಕೆ ವ್ಯವಸ್ಥೆ ಇದೆ.8 ಬೈ ಪ್ಯಾಪ್‌ ಮೆಷಿನ್‌ಗಳಿವೆ.ಕೋವಿಡ್‌ ಬಳಿಕ ಜಿಲ್ಲಾಸ್ಪತ್ರೆಗೆ 70 ಮಂದಿ ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗಿದೆ. ಇವರಲ್ಲಿ 35 ಮಂದಿ ತಜ್ಞವೈದ್ಯರಿದ್ದಾರೆ. 50 ಮಂದಿ ಪ್ರಯೋಗಾಲಯ ತಂತ್ರಜ್ಞರು, ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗಿದೆ.

450 ಜಂಬೋ ಆಕ್ಸಿಜನ್‌ ಸಿಲಿಂಡರ್‌ ವ್ಯವಸ್ಥೆ ಇದೆ. ಮಕ್ಕಳ ಚಿಕಿತ್ಸೆಗಾಗಿ 4 ವೆಂಟಿಲೇಟರ್‌ ಸಿದ್ಧಗೊಳ್ಳುತ್ತಿವೆ.1.79ಕೋಟಿ ರೂ.ವೆಚ್ಚದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಆರ್‌ಟಿಪಿಸಿಆರ್‌, ಮಾಲಿಕ್ಯುಲರ್‌ ಲ್ಯಾಬ್‌ ಸ್ಥಾಪಿಸಲಾಗಿದೆ. ಇದರಲ್ಲಿ ಕೋವಿಡ್‌ ಟೆಸ್ಟ್‌ ಮಾತ್ರವಲ್ಲ, ಇನ್ನುಳಿದ ಗಂಭೀರ ಕಾಯಿಲೆಗಳ ಪತ್ತೆಗಾಗಿಯೂ ಬಳಕೆಯಾಗಲಿದೆ. ಅರಣ್ಯ, ತೋಟಗಾರಿಕೆ ಇಲಾಖೆಯೂ ಈ ಲ್ಯಾಬ್‌ ಬಳಸಿಕೊಳ್ಳಬಹುದಾಗಿದೆ. ಅಗತ್ಯಬಿದ್ದಾಗ ಹೊರ ಜಿಲ್ಲೆಗಳ ಆರ್‌ಟಿಪಿಸಿಆರ್‌ ಪರೀಕ್ಷೆಗಳನ್ನೂ ಈ ಲ್ಯಾಬ್‌ನಿಂದ ಮಾಡಲಾಗುತ್ತಿದೆ.

ಕೆ.ಎಸ್‌. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

10

Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು

9-kollegala

Kollegala: ಕಲುಷಿತ ನೀರು ಸೇವಿಸಿ ನಾಲ್ವರು ಆಸ್ಪತ್ರೆಗೆ ದಾಖಲು

Elephanat-1

Chamarajanagara: ವಕ್ರದಂತ ಹೊಂದಿದ್ದ ಕಾಡಾನೆ ಸ್ವಾಭಾವಿಕ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.