ವೈದ್ಯಕೀಯ ತ್ಯಾಜ್ಯ ಸೂಕ್ತ ವಿಲೇವಾರಿಯಾಗಲಿ

Team Udayavani, Aug 3, 2018, 12:23 PM IST

Kalladka-School-2.jpg

ಸಂತೆಮರಹಳ್ಳಿ: ಜೈವಿಕ ವೈದ್ಯಕೀಯ ತ್ಯಾಜ್ಯವನ್ನು ಸಮರ್ಪಕ ವಿಲೇವಾರಿ ಮಾಡಿ ಆಸ್ಪತ್ರೆಯಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕು ಎಂದು ಆರ್‌ಸಿಎಚ್‌ ಅಧಿಕಾರಿ ಡಾ.ವಿಶ್ವೇಶ್ವರಯ್ಯ ಹೇಳಿದರು.

ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯೋಜಿಸಿದ್ದ ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ತ್ಯಾಜ್ಯ ವಿಲೇವಾರಿ ಜಾಗತಿಕ ಸಮಸ್ಯೆಗಳಲ್ಲಿ ಒಂದಾಗಿದೆ. ಇದರ ನಿರ್ವಹಣೆ ಕಷ್ಟವಾಗಿದೆ.

ಇದಕ್ಕೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಪ್ರಮುಖವಾಗಿದೆ. ಮಾಹಿತಿ ಕೊರತೆಯಿಂದ ಎಲ್ಲೆಂದರಲ್ಲಿ ಕಸ ಬಿಸಾಡುವ ಸಂಸ್ಕೃತಿ ನಮ್ಮದಾಗಿದೆ. ಅದರಲ್ಲೂ ವೈದ್ಯಕೀಯ ತ್ಯಾಜ್ಯ ಅಪಾಯಕಾರಿಯಾಗಿದೆ. ಇದನ್ನು ನಿರ್ದಿಷ್ಟ ವಿಲೇವಾರಿ ಮಾಡದಿದ್ದರೆ ಅಪಾಯ ಎದುರಿಸಬೇಕಿದೆ ಎಂದರು. 

ಇದಕ್ಕಾಗಿಯೇ ಕೇಂದ್ರ ಪರಿಸರ ಸಚಿವಾಲಯವು ಜೈವಿಕ ವೈದ್ಯಕೀಯ ತ್ಯಾಜ್ಯ ವಿಲೇವಾರಿ ಬಗ್ಗೆ ನೂತನ ನಿಯಮಾವಳಿ ರೂಪಿಸಿದೆ. ಎಲ್ಲಾ ವೈದ್ಯಕೀಯ, ಅರೆ ವೈದ್ಯಕೀಯ ಹಾಗೂ ವೈದ್ಯಕೀಯೇತರ ಸಿಬ್ಬಂದಿ ವರ್ಗದವರು ತರಬೇತಿ ಪಡೆಯಬೇಕು ಎಂದರು. 

ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ.ಶ್ರೀನಿವಾಸ್‌ ಮಾತನಾಡಿ, ಆಸ್ಪತ್ರೆಯಲ್ಲಿ ಉತ್ಪತ್ತಿಯಾಗುವ ವೈದ್ಯಕೀಯ ಕಸವನ್ನು ಸಮರ್ಪಕವಾಗಿ ವಿಲೇವಾರಿ ಮಾಡಬೇಕು. ಇಲ್ಲದಿದ್ದಲ್ಲಿ ಅನೇಕ ಜನರ ಪ್ರಾಣಕ್ಕೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ. ಇದರ ಬಗ್ಗೆ ಸಿಬ್ಬಂದಿ ಸದಾ ಜಾಗೃತರಾಗಿರಬೇಕು. ರೋಗಿಗಳಲ್ಲಿಯೂ ಇದರ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಮಾಹಿತಿ ನೀಡಿದರು.

ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ದೇವರಾಜು, ಡಾ. ಪ್ರಭಾಕರ್‌, ಡಾ. ಸುನೀಲ್‌ಚಂದ್ರ, ಡಾ.ಹೇಮಾ, ಡಾ.ಮೀನಾಕ್ಷಿ, ತ್ಯಾಜ್ಯ ನಿರ್ವಹಣೆ ಸಂಪನ್ಮೂಲ ವ್ಯಕ್ತಿ ಶ್ರೀನಾಥ್‌ನಾಯಕ್‌, ಆರೀಫ್, ಇಂದಿರಮ್ಮ, ಪೂರ್ಣಿಮಾ, ಮಲ್ಲಯ್ಯ ಹಾಜರಿದ್ದರು.

ಟಾಪ್ ನ್ಯೂಸ್

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

16-onion

Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.