ಋತು ಚಕ್ರದ ಬಗ್ಗೆ ಹೆಣ್ಣು ಮಕ್ಕಳಿಗೆ ಅರಿವು ಮೂಡಿಸಿ

Team Udayavani, May 29, 2022, 1:09 PM IST

ಋತು ಚಕ್ರದ ಬಗ್ಗೆ ಹೆಣ್ಣು ಮಕ್ಕಳಿಗೆ ಅರಿವು ಮೂಡಿಸಿ

ಚಾಮರಾಜನಗರ: ಋತುಚಕ್ರದ ಬಗ್ಗೆ ತಾಯಂದಿರು ತಮ್ಮ ಹೆಣ್ಣು ಮಕ್ಕಳಿಗೆ ಅರಿವು ಮೂಡಿಸುವುದು ಅಗತ್ಯ ಎಂದು ಜಿಪಂ ಉಪಕಾರ್ಯದರ್ಶಿ ಗುಡೂರ್‌ ಭೀಮಸೇನ್‌ ಸಲಹೆ ನೀಡಿದರು.

ತಾಲೂಕಿನ ಹರವೆ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಆಯೋಜಿಸಿದ್ದ ಮಹಿಳೆಯರಿಗೆ ಋತುಚಕ್ರ ನಿರ್ವಹಣೆ ಕುರಿತ ಜಿಲ್ಲಾ ಮಟ್ಟದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬಾಲ್ಯಾವಸ್ಥೆಯಿಂದ ಪ್ರೌಢಾವಸ್ಥೆಗೆ ಬಂದಾಗಋತುಚಕ್ರ ಎಂಬುದು ಪ್ರತಿಯೊಬ್ಬ ಹೆಣ್ಣುಮಕ್ಕಳಲ್ಲಿ ಕಾಣಿಸಿಕೊಳ್ಳುತ್ತದೆ. ಈ ಸಂದರ್ಭದಲ್ಲಿಭೌತಿಕ ಬದಲಾವಣೆಗಳಾಗುತ್ತವೆ. ಋತುಚಕ್ರದಬಗ್ಗೆ ಮೌಡ್ಯ ಮನೆ ಮಾಡಿಕೊಂಡಿದೆ. ಋತುಚಕ್ರ ಯಾಕೆ ಬರುತ್ತದೆ. ಬಂದಾಗ ಏನೆಲ್ಲ ಬದಲಾವಣೆಗಳಾಗುತ್ತವೆ. ಇದನ್ನು ಹೇಗೆನಿರ್ವಹಣೆ ಮಾಡಬೇಕು ಎಂಬುದರ ಕುರಿತುತಾಯಂದಿರು ಮುಕ್ತವಾಗಿ ತಮ್ಮ ಹೆಣ್ಣು ಮಕ್ಕಳಿಗೆಹೇಳಿಕೊಡಬೇಕು. ಶಾಲೆಗಳಲ್ಲೂ ಸಹ ಶಿಕ್ಷಕಿಯರು ಇದನ್ನು ಹೇಳಿಕೊಡಬೇಕು ಎಂದರು.

ಋತುಚಕ್ರ ದೈಹಿಕ ಬೆಳವಣಿಗೆಯಾಗುತ್ತದೆ. ನಾವು ಸೇವಿಸುವ ಆಹಾರದಲ್ಲಿಬದಲಾವಣೆಗಳಾದಾಗ ಋತುಚಕ್ರದಲ್ಲಿಯೂ ಬದಲಾವಣೆಯಾಗುತ್ತದೆ.  ಕೆಲವು ಬಾರಿ ಕೆಲ ಮಕ್ಕಳಿಗೆ ಅಧಿಕ ರಕ್ತಸ್ರಾವವಾಗಬಹುದು. ಋತುಚಕ್ರದ ಬಗ್ಗೆ ಮಕ್ಕಳಿಗೆ ಮುಕ್ತವಾಗಿಹೇಳಿಕೊಡದಿದ್ದರೆ ಬಹಳಷ್ಟು ಮಕ್ಕಳು ಖನ್ನತೆಗೆಒಳಗಾಗುತ್ತಾರೆ. ಎಷ್ಟೋ ಮುಗ್ಧಮಕ್ಕಳು ಬೇರೆ ಬೇರೆ ರೀತಿಯಲ್ಲಿ ಶೋಷಣೆಗೆ ಒಳಪಡುತ್ತಾರೆ. ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ಕೊಡದಿದ್ದರೆ ಅವರು ತಪ್ಪು ದಾರಿ ಹಿಡಿಯುವ ಸಾಧ್ಯತೆಯೂ ಇರುತ್ತದೆ ಎಂದು ತಿಳಿಸಿದರು.

ಜಿಲ್ಲಾ ಕಾರ್ಯಕ್ರಮ ಅಧಿಕಾರಿಡಾ.ರವಿಕುಮಾರ್‌ ಮಾತನಾಡಿ, ಋತುಚಕ್ರವುಹೆಣ್ಣು ಮಕ್ಕಳು ಬಾಲ್ಯಾವಸ್ಥೆಯಿಂದ ಪ್ರೌಢಾವಸ್ಥೆಗೆ ಬರುವಾಗ ಆಗುವ ಸಹಜ ದೈಹಿಕಬದಲಾವಣೆಯಾಗಿದೆ. ಹಿಂದಿನ ಕಾಲದಿಂದಲೂ ಕೆಲವು ಆಚರಣೆಗಳನ್ನು ತಪ್ಪು ರೀತಿಯಲ್ಲಿಮಾಡುತ್ತಾ ಬಂದಿದ್ದೇವೆ. ಹಿಂದೆ ಋತುಚಕ್ರದಸಂದರ್ಭದಲ್ಲಿ ಮಹಿಳೆಯರನ್ನು ಮನೆಯಿಂದ ಹೊರಗೆ ಇಡುವ ಪ್ರಕ್ರಿಯೆ ನಡೆಯುತ್ತಿತ್ತು. ಆದರೆ, ಈಗ ಕಾಲ ಬದಲಾಗಿದ್ದು ಪ್ರಸ್ತುತ ಎಲ್ಲರಿಗೂ ಋತುಚಕ್ರದ ಬಗ್ಗೆ ಅರಿವು ಬಂದಿದೆ ಎಂದು ಹೇಳಿದರು.

ಇದಕ್ಕೂ ಮುನ್ನ ಋತುಚಕ್ರ ಸ್ವಚ್ಛತೆ ಬಗ್ಗೆ ಅರಿವು ಜಾಥಾ ನಡೆಯಿತು. ಜಾಥಾವು ಗ್ರಾಮದಪ್ರಮುಖ ಬೀದಿಗಳಲ್ಲಿ ಹೊರಟು ಜನರಲ್ಲಿ ಅರಿವು ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯಕೇಂದ್ರದ ಆರೋಗ್ಯಾಧಿಕಾರಿ ಡಾ.ಸುರೇಶ್‌,ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಡಾ.ಮಮತಾ ಕುಮಾರಿ, ಸಮುದಾಯಅಧಿಕಾರಿ ಶ್ರುತಿ, ಯುನಿಸೆಫ್ ಎಸ್‌ಬಿಐ ಸಿಸಿಜಿಲ್ಲಾ ಸಂಯೋಜಕ ಟಿ.ಜೆ.ಸುರೇಶ್‌, ಗ್ರಾಪಂಕಾರ್ಯದರ್ಶಿ ಮಹದೇವಯ್ಯ,ಉಪಪ್ರಾಂಶುಪಾಲ ಶಿವರಾಮಯ್ಯ, ದಾಖಲಾತಿ ಅಧಿಕಾರಿ ಲತಾ, ಡಿಎಚ್‌ಇಡಿ ದೊರೆಸ್ವಾಮಿ, ಸಿಡಿಪಿಒ ಮುತ್ತು, ಸ್ವಚ್ಛ ಭಾರತ್‌ ಮಿಷನ್‌ನಜಿಲ್ಲಾ ಸಮಾಲೋಚಕರಾದ ಮಹದೇವ್‌, ಜೋಸೆಫ್, ಪ್ರಭುಸ್ವಾಮಿ ಇದ್ದರು.

ಟಾಪ್ ನ್ಯೂಸ್

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.