ಕಪ್ಪು ಪಟ್ಟಿ ಧರಿಸಿ ಸೇನಾಪಡೆ ಪ್ರತಿಭಟನೆ
Team Udayavani, Dec 23, 2017, 2:19 PM IST
ಚಾಮರಾಜನಗರ: ವಿಜಯಪುರ ಬಾಲಕಿ ದಾನೇಶ್ವರಿ ಅತ್ಯಾಚಾರ, ಕೊಲೆ ಮಾಡಿರುವ ಆರೋಪಿಗಳನ್ನು ಶೀಘ್ರದಲ್ಲೇ ಪತ್ತೆಹಚ್ಚಿ ಗಲ್ಲುಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ನಗರದಲ್ಲಿ ಕಣ್ಣಿಗೆ ಕಪ್ಪುಪಟ್ಟಿ ಧರಿಸಿ ವಿನೂತನ ಪ್ರತಿಭಟನೆ ನಡೆಸಿದರು.
ನಗರದ ಚಾಮರಾಜೇಶ್ವರ ಉದ್ಯಾನವನದ ಆವರಣದಲ್ಲಿ ಕರ್ನಾಟಕ ಸೇನಾಪಡೆಯ ರಾಜ್ಯಾಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಜಮಾಯಿಸಿದ್ದ ಪ್ರತಿಭಟನಾನಿತರರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ಕೆಲಕಾಲ ರಸ್ತೆ ತಡೆಸಿ, ಘಟನೆಯನ್ನು ಖಂಡಿಸಿದರು.
ಈ ಸಂದರ್ಭದಲ್ಲಿ ಪ್ರತಿಭಟನೆ ನೇತೃತ್ವ ವಹಿಸಿದ್ದ ಸೇನಾಪಡೆಯ ರಾಜ್ಯಾಧ್ಯಕ್ಷ ಚಾ.ರಂ.ಶ್ರೀನಿವಾಸ ಗೌಡ ಮಾತನಾಡಿ, ದಾನೇಶ್ವರಿ ಅತ್ಯಾಚಾರ, ಕೊಲೆ ಪ್ರಕರಣ ಪೈಶಾಚಿಕ ಕೃತ್ಯವಾಗಿದೆ. ರಾಜ್ಯದ ಜನತೆ ತಲೆತಗ್ಗಿಸುವಂತಾಗಿದೆ. ಇಂತಹ ಪ್ರಕರಣಗಳು ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿದ್ದು, ಇಂತಹ ಪ್ರಕರಣಗಳನ್ನು ತಡೆಗಟ್ಟುವಲ್ಲಿ ಗೃಹ ಇಲಾಖೆ ವಿಫಲವಾಗಿದೆ. ಸರ್ಕಾರ ತಕ್ಷಣ ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚಿ ಅವರನ್ನು ಗಲ್ಲುಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಮುಂಜಾಗ್ರತೆ ಕ್ರಮಕೈಗೊಳ್ಳಬೇಕು ಹಾಗೂ ಮಹಿಳೆಯರು, ಮಕ್ಕಳು ನಿರ್ಭಿತಿಯಿಂದ ಓಡಾಡುವಂತಹ ವಾತಾವರಣ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿದರು.
ಸೇನಾಪಡೆಯ ಗೌರವಾಧ್ಯಕ್ಷ ಶಾ.ಮುರಳಿ ಮಾತನಾಡಿ, ರಾಜ್ಯದಲ್ಲಿ ಇಂತಹ ಪ್ರಕರಣಗಳು ನಡೆಯಬಾರದು. ಪ್ರಕರಣ ತಡೆಯುವಲ್ಲಿ ವಿಫಲರಾಗಿರುವ ವಿಜಯಪುರದ ಎಸ್ಪಿ ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಚಾ.ಗು.ನಾಗರಾಜು, ಚಾ.ಹ.ಶಿವರಾಜ್, ಪಣ್ಯದಹುಂಡಿರಾಜು, ಸ್ವಾಮಿ, ನಾರಾಯಣ್, ನಿಜಧ್ವನಿಗೋವಿಂದರಾಜು, ರವಿಚಂದ್ರಪ್ರಸಾದ್, ನಂಜುಂಡಪ್ಪ, ರೈತ ಸಂಘದ ಸಿದ್ದಶೆಟ್ಟಿ, ಸೋಮವಾರಪೇಟೆ ಮಂಜು, ಶಿವು, ಬಸವರಾಜುನಾಯಕ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.