![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 17, 2020, 5:10 AM IST
ಚಾಮರಾಜನಗರ: ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸುರೇಶ್ ಕುಮಾರ್ ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮಗಳಿಗೆ ಭೇಟಿ ನೀಡಿ ನರೇಗಾ ಕಾಮಗಾರಿಗಳನ್ನು ವೀಕ್ಷಿಸಿ, ಹಾರೆ ಹಿಡಿದು ಗುಂಡಿ ತೋಡಿ ಗಮನ ಸೆಳೆದರು. ಉದ್ಯೋಗ ಖಾತರಿ ಯೋಜನೆಯಲ್ಲಿ ತೊಡಗಿಕೊಂ ಡಿದ್ದ ಕಾರ್ಮಿಕರಿಗೆ ಉತ್ಸಾಹ ತುಂಬಿದರು. ಗುಂಡ್ಲು ಪೇಟೆಯ ಕಲಿಗೌಡನಹಳ್ಳಿ ವ್ಯಾಪ್ತಿಗೆ ಒಳಪಡುವ ಒಗರಕಟ್ಟೆಗೆ ಭೇಟಿ ನೀಡಿ ಕೆರೆ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದರು.
ಬಳಿಕ ಕಾರ್ಮಿಕರನ್ನುದ್ದೇಶಿಸಿ ಮಾತನಾಡಿದ ಸಚಿವರು, ಕಷ್ಟಪಟ್ಟು ದುಡಿದ ಹಣವನ್ನು ಒಳ್ಳೆಯ ಉದ್ದೇಶಕ್ಕೆ ಬಳಸಿ ಕೊಳ್ಳಿ. ಕೆಲಸ ನಿರ್ವಹಿಸುವಾಗ ಭೌತಿಕ ಅಂತರ ಕಾಪಾಡಿಕೊಳ್ಳಿ. ಕಡ್ಡಾಯವಾಗಿ ಮಾಸ್ಕ್ ಧರಿಸಿ ಎಂದು ಸಲಹೆ ನೀಡಿದರು. ಆ ಬಳಿಕ ಹಂಗಳದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಫೀಡರ್ ಕಾಲುವೆ ಬಳಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಬಳಿ ತೆರಳಿ ಅಲ್ಲಿನ ಕಾಮಗಾರಿಯನ್ನು ವೀಕ್ಷಿಸಿದರು.
ಶಿವಪುರ, ಚಾಮರಾಜನಗರ ತಾಲೂಕಿನ ದೇವಲಾ ಪುರ, ದೊಡ್ಡಮೋಳೆಗೆ ಭೇಟಿ ನೀಡಿ ಉದ್ಯೋಗ ಖಾತರಿ ಯೋಜನೆಯಡಿ ನಿರ್ವಹಿಸಲಾಗುತ್ತಿರುವ ಕಾಮಗಾರಿ ಯನ್ನು ಸಚಿವರು ಪರಿಶೀಲಿಸಿದರು. ಉದ್ಯೋಗ ಖಾತರಿ ಯೋಜನೆಯಡಿ ಕಾರ್ಮಿಕರಿಗೆ ಒದಗಿಸಬೇಕಿರುವ ನೆರ ಳಿನ ವ್ಯವಸ್ಥೆ, ಕುಡಿಯುವ ನೀರು ಇನ್ನಿತರ ಸೌಲಭ್ಯ ಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಪ್ರಸ್ತುತ ನರೇಗಾದಡಿ ಹೆಚ್ಚು ಮಂದಿಗೆ ಕೆಲಸ ನೀಡಲಾಗು ತ್ತಿದೆ. ಇದು 5 ಕೋಟಿ ರೂ. ಹಣ ಕೂಲಿ ಕಾರ್ಮಿಕರ ಖಾತೆಗಳಿಗೆ ಜಮೆಯಾಗಿದೆ ಎಂದರು. ಈ ವೇಳೆ ಶಾಸಕ ನಿರಂಜನಕುಮಾರ್, ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ, ಜಿಪಂ ಸಿಇಒ ನಾರಾಯಣರಾವ್, ಎಎಸ್ಪಿ ಅನಿತಾ ಇತರರಿದ್ದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು
Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು
Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ
Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.