ಕೊಳ್ಳೇಗಾಲ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ
Team Udayavani, May 23, 2023, 4:35 PM IST
ಚಾಮರಾಜನಗರ: ಸರ್ಕಾರದಿಂದ ವಿಶೇಷ ಅನುದಾನವನ್ನು ತಂದು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸುವುದಾಗಿ ನೂತನ ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು.
ತಾಲೂಕಿನ ಸಂತೇಮರಹಳ್ಳಿ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕ್ಷೇತ್ರದ ಮತದಾರರು ಹಾಗೂ ಮುಖಂಡರಿಗೆ ಕೃತಜ್ಞತೆ ಸಲ್ಲಿಸಿ ಅವರು ಮಾತನಾಡಿದರು. ಕೊಳ್ಳೇಗಾಲ ಕ್ಷೇತ್ರವು ಮೂರು ತಾಲೂಕುಗಳನ್ನು ಒಳಗೊಂಡಿದೆ.
ಪ್ರಾಮಾಣಿಕ ಪ್ರಯತ್ನ: ಸಂತೆಮರಹಳ್ಳಿ ಭಾಗವು ಚಾ.ನಗರಕ್ಕೆ, ಯಳಂದೂರು ತಾಲೂಕು ಪೂರ್ಣ ಹಾಗೂ ಕೊಳ್ಳೇಗಾಲ ತಾಲೂಕು ಭಾಗಶಃ ಕ್ಷೇತ್ರಕ್ಕೆ ಸೇರಿಕೊಂಡಿದೆ. ಹೀಗಾಗಿ ಆಯಾ ಭಾಗದ ಜನರ ಸಮಸ್ಯೆಗಳನ್ನು ಆಲಿಸಲು ಹಾಗೂ ಕುಂದು-ಕೊರತೆಯನ್ನು ಬಗೆಹರಿಸಲು ಪ್ರತಿ ವಾರ ಜನ ಸಂಪರ್ಕ ಸಭೆಗಳನ್ನು ನಡೆಸಿ, ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಅಧಿಕಾರಿಗಳಿಂದ ಉತ್ತರ ಹಾಗೂ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಕಳೆದ 19 ವರ್ಷಗಳಿಂದ ಅಧಿಕಾರದಿಂದ ವಂಚಿತನಾಗಿದ್ದ ನನಗೆ ಕ್ಷೇತ್ರದ ಜನರು ನಿರೀಕ್ಷೆಗೂ ಮೀರಿ ಪ್ರಚಂಡ ಗೆಲುವು ತಂದು ಕೊಂಡಿದ್ದಾರೆ. ಸುಮಾರು 1 ಲಕ್ಷಕ್ಕೂ ಹೆಚ್ಚು ಮತಗಳನ್ನು ನೀಡಿ, 59 ಸಾವಿರ ಮತಗಳ ಅಂತರದಲ್ಲಿ ಗೆಲ್ಲಿಸಿದ್ದಾರೆ. ಅವರ ಪ್ರೀತಿ ವಿಶ್ವಾಸಕ್ಕೆ ನಾನು ಚಿರಋಣಿಯಾಗಿದ್ದೇನೆ. ಕ್ಷೇತ್ರದ ಜನರ ಸಂಕಷ್ಟಗಳಿಗೆ ಭಾಗಿಯಾಗಬೇಕು. ಅವರಿಗೆ ಸರ್ಕಾರದಿಂದ ದೊರೆಯುವ ಎಲ್ಲಾ ಯೋಜನೆಗಳನ್ನು ತಲುಪಿಸುವ ಜೊತೆಗೆ ಕ್ಷೇತ್ರದಲ್ಲಿ ಆದ್ಯತೆ ಮೇರೆಗೆ ಮೂಲಸೌಲಭ್ಯಗಳನ್ನು ಕಲ್ಪಿಸಿ, ಮಾದರಿ ಕ್ಷೇತ್ರವನ್ನಾಗಿ ಮಾಡುವುದು ನನ್ನ ಗುರಿಯಾಗಿದೆ ಎಂದರು.
ಕ್ಷೇತ್ರದ ಅಭಿವೃದ್ಧಿಯತ್ತ ಕೊಂಡೊಯ್ಯೋಣ: ಕಳೆದ 10 ವರ್ಷಗಳ ಹಿಂದೆ ಕ್ಷೇತ್ರದಲ್ಲಿ 2013ರಲ್ಲಿ ಜಯಣ್ಣ ಅವರು ಶಾಸಕರಾಗಿದ್ದಾಗ ನಡೆದಿದ್ದ ಅಭಿವೃದ್ಧಿ ಪರ್ವ ಈಗ 2023ರ ನಂತರ ಮತ್ತೆ ಆರಂಭವಾಗಲಿದೆ. ಅಂದು ನಮ್ಮ ನಾಯಕರಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದರು. ನಾನು ಶಾಸಕನಾಗಿರುವ ಈ ಅವಧಿಯಲ್ಲಿಯೇ ನಮ್ಮ ಸರ್ಕಾರ ರಚನೆಯಾಗಿ, ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರುವುದು ಕ್ಷೇತ್ರದ ಜನರು ಹಾಗೂ ನನ್ನ ಸೌಭಾಗ್ಯವಾಗಿದೆ. ಕ್ಷೇತ್ರದ ಅಭಿವೃದ್ಧಿಗೆ ಈ ಎಲ್ಲಾ ಅಂಶಗಳು ಪೂರಕವಾಗಿದ್ದು, ಮುಂದಿನ ದಿನಗಳಲ್ಲಿ ಎಲ್ಲರೂ ಒಗ್ಗಟ್ಟಿನಿಂದ ದುಡಿಯುವ ಮೂಲಕ ಕೊಳ್ಳೇಗಾಲ ಕ್ಷೇತ್ರದ ಅಭಿವೃದ್ಧಿಯತ್ತ ಕೊಂಡೊಯ್ಯೋಣ ಎಂದರು.
ಜಿಪಂ ಮಾಜಿ ಉಪಾಧ್ಯಕ್ಷ ಯೋಗೇಶ್, ಯಳಂದೂರು ಬ್ಲಾಕ್ ಅಧ್ಯಕ್ಷ ಹೊಂಗನೂರು ಚಂದ್ರು, ಮುಖಂಡರಾದ ಹೊಂಗನೂರು ಪುಟ್ಟಸ್ವಾಮಿ, ಬಾಗಳಿ ರೇವಣ್ಣ, ಉಮ್ಮತ್ತೂರು ಶಿವಣ್ಣ, ನಾಗಲಿಂಗನಾಯಕ, ಗ್ರಾ.ಪಂ. ಮಾಜಿ ಅಧ್ಯಕ್ಷ ಜಿ. ಎಂ. ರವಿಶಂಕರಮೂರ್ತಿ, ಸಂತೇಮರಹಳ್ಳಿ ಮಹದೇವಪ್ರಸಾದ್ ಫಸಿ, ಎಪಿಎಂಸಿ ಮಾಜಿ ಅಧ್ಯಕ್ಷ ಶಂಕರಮೂರ್ತಿ, ಎಂಡಿಸಿಸಿ ಮಾಜಿ ನಿರ್ದೇಶಕ ಶಿವಶಂಕರ್, ಕೆ.ಎಂ. ನಾಗರಾಜು, ಹೊಮ್ಮ ರಾಮನಾಯಕ, ಉಮ್ಮತ್ತೂರು ಭಾಗ್ಯ, ಜನ್ನೂರು ವೀಣಾ, ಕಾವುದವಾಡಿ ಚಿನ್ನಸ್ವಾಮಿ, ಹೊಂಗನೂರು ಚೇತನ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.