ಪುನರ್ವಸತಿ ಕೇಂದ್ರಕ್ಕೆ ಶಾಸಕ ಮಹೇಶ್ ಭೇಟಿ
Team Udayavani, Aug 14, 2019, 3:00 AM IST
ಕೊಳ್ಳೇಗಾಲ: ಪ್ರವಾಹದಿಂದ ರಕ್ಷಣೆ ಮಾಡಿ ಗ್ರಾಮಸ್ಥರನ್ನು ಪುನರ್ವಸತಿ ಕೇಂದ್ರಕ್ಕೆ ಸೇರಿದ್ದ ಗ್ರಾಮಸ್ಥರನ್ನು ಶಾಸಕ ಎನ್.ಮಹೇಶ್ ಭೇಟಿ ನೀಡಿ ಗ್ರಾಮಸ್ಥರ ಕುಶಲೋಪರಿ ವಿಚಾರಿಸಿದರು. ಮಂಗಳವಾರ ಪಟ್ಟಣದ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ಪುನರ್ವಸತಿ ಕೇಂದ್ರಕ್ಕೆ ಭೇಟಿ ನೀಡಿ ಶಾಸಕರು ಗ್ರಾಮಸ್ಥರಿಂದ ಕುಂದು-ಕೊರತೆಯನ್ನು ಆಲಿಸಿ, ಊಟ, ಉಪಚಾರದ ಬಗ್ಗೆ ವಿಚಾರಣೆ ಮಾಡಿದರು.
ಬೆಳ ಗ್ಗೆ ಪುನರ್ವಸತಿ ಕೇಂದ್ರದಲ್ಲಿ ಉಪಹಾರವನ್ನು ಸೇವಿಸಿದ ಶಾಸಕರು ಉಪಹಾರ ಚೆನ್ನಾಗಿ ತಯಾರಿಸಿದ್ದು, ಅಧಿಕಾರಿಗಳ ಆಡಳಿತ ವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.ನಂತರ ಬಿಸಿಎಂ ವಿದ್ಯಾರ್ಥಿ ನಿಲಯ, ಮುಳ್ಳೂರು ಸರ್ಕಾರಿ ಶಾಲೆ, ಮಹದೇಶ್ವರ ಕಲ್ಯಾಣ ಮಂಟಪಗಳಲ್ಲಿ ಸ್ಥಾಪಿತ ಗೊಂಡಿರುವ ಪುನರ್ವಸತಿ ಕೇಂದ್ರಗಳಿಗೆ ಭೇಟಿ ನೀಡಿ ನೀರು ಸಂಪೂರ್ಣ ಕಡಿಮೆಯಾದ ಬಳಿಕ ಗ್ರಾಮಕ್ಕೆ ಸುರಕ್ಷಿತವಾಗಿ ಹೋಗಬೇಕು.
ಅಲ್ಲಿಯವರೆಗೆ ಪುನರ್ವಸತಿ ಕೇಂದ್ರದಲ್ಲಿ ಇದ್ದು, ಊಟ, ಉಪಚಾರವನ್ನು ಮಾಡಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ಸಲಹೆ ನೀಡಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರು ಪ್ರವಾಹ ನುಗ್ಗಿದ ನಂಜನಗೂಡಿಗೆ ಭೇಟಿ ನೀಡಿ ಪರಿಶೀಲನೆಯ ಬಳಿಕ ಮನೆ ಕಳೆದುಕೊಂಡವರಿಗೆ 5 ಲಕ್ಷ, ಮನೆ ನವೀಕರಣಕ್ಕೆ ಒಂದು ಲಕ್ಷ, ನೊಂದವರಿಗೆ 10 ಸಾವಿರ ಪರಿಹಾರ ಘೋಷಣೆ ಮಾಡಿದ್ದು, ಮುಖ್ಯಮಂತ್ರಿಗಳ ಘೋಷಣೆ ಎಲ್ಲಾ ಪ್ರವಾಹ ಪೀಡಿತ ಪ್ರದೇಶಗಳಿಗೆ ಅನ್ವಯವಾಗಿರುವುದರಿಂದ ನಿರಾಶಿತ್ರರಿಗೆ ಪರಿಹಾರ ದೊರಕಿಸಿಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.
ಕಾವೇರಿ ನದಿಯ ತೀರದ ಗ್ರಾಮಗಳಿಗೆ ಪ್ರವಾಹ ನುಗ್ಗದಂತೆ ತಡೆಗೋಡೆ ಹಾಕಿ ಶಾಶ್ವತ ಪರಿಹಾರ ಕಂಡು ಹಿಡಿಯುವ ಸಲುವಾಗಿ ಅದರ ಅಂದಾಜು ವೆಚ್ಚ ತಯಾರಿಸಿ ಮುಖ್ಯಮಂತ್ರಿಗಳ ಗಮನ ಸೆಳೆದು ಕೂಡಲೇ ತಡೆಗೋಡೆ ನಿರ್ಮಾಣ ಮಾಡಿ ಶಾಶ್ವತ ಪರಿಹಾರ ಕಂಡುಕೊಳ್ಳುವುದಾಗಿ ಹೇಳಿದರು.
ಪ್ರವಾಹದಿಂದ ವಿದ್ಯುತ್ ಸಂಪೂರ್ಣ ಕಡಿತ ಮಾಡಲಾಗಿದೆ. ಇದರಿಂದ ಪಟ್ಟಣ ಪ್ರದೇಶಗಳಿಗೂ ಕುಡಿಯುವ ನೀರಿನ ತೊಂದರೆಯಾಗಿದ್ದು, ಕಾವೇರಿ ನೀರು ಇಳಿಮುಖವಾಗಿದ್ದು, ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸಿ ಕುಡಿಯುವ ನೀರಿನಲ್ಲಿ ಯಾವುದೆ ತರಹದ ಆಡಚಣೆ ಉಂಟಾಗದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು. ಯಳಂದೂರು ತಹಶೀಲ್ದಾರ್ ವರ್ಷ, ಸಮಾಜ ಕಲ್ಯಾಣಾಧಿಕಾರಿ ಜಯಕಾಂತ ಮತ್ತು ಮುಖಂಡರು, ಗ್ರಾಮಸ್ಥರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Police Raid: ಮಾದಕವಸ್ತು, ಅಕ್ರಮ ಮದ್ಯಮಾರಾಟದ ವಿರುದ್ಧ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.