ಪಿಯು ಬಳಿಕ ಆಸಕ್ತ ಕೌಶಲ್ಯ ಕ್ಷೇತ್ರ ಆರಿಸಿಕೊಳ್ಳಲು ಅವಕಾಶ
Team Udayavani, Feb 10, 2021, 2:30 PM IST
ಚಾಮರಾಜನಗರ: ಯುವಜನರು ಖಾಸಗಿ ವಲಯದ ಉದ್ಯೋಗಗಳಿಗೆ ಮುಂದಾಗಬೇಕು. ಸರ್ಕಾರ ಹೊಸ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತಿದೆ. ಪಿಯುಸಿ ನಂತರ ಯುವಕರು ಕೌಶಲ್ಯಾಧಾರಿತ ತರಬೇತಿ ಹೊಂದಿ ಅವರಿಗಿಷ್ಟವಾಗುವ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ನೀಡುತ್ತಿದೆ ಇದು ಉತ್ತಮ ಬೆಳವಣಿಗೆ ಎಂದು ಕೊಳ್ಳೇಗಾಲ ಶಾಸಕ ಎನ್. ಮಹೇಶ್ ತಿಳಿಸಿದರು.
ನಗರದ ಪೇಟೆ ಪ್ರçಮರಿ ಶಾಲಾ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕೈಗಾರಿಕಾ ಮತ್ತು ಉದ್ಯೋಗ ಇಲಾಖೆ ಹಾಗೂ ರಾಷ್ಟ್ರೀಯ ವೃತ್ತಿ ಸೇವಾ (ಎನ್‌ಸಿಎಸ್‌ಪಿ) ಯೋಜನೆಯ ಸಹಯೋಗದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಈ ಹಿಂದಿನಿಂದಲೂ ಉದ್ಯೋಗಮೇಳ ಆಯೋಜಿಸುತ್ತಾ ಬರಲಾಗಿದೆ. ಆದರೂ ಸಾಕಷ್ಟು ಯುವಕರು ದೂರದ ಊರುಗಳಲ್ಲಿ ಕೆಲಸ ಮಾಡಲು ಹಿಂಜರಿಯುತ್ತಿರುವುದು ಕಂಡುಬಂದಿದೆ. ಇದು ಸರಿಯಲ್ಲ. ಇಂದಿನ ಯುವಜನತೆ ಚಲನಶೀಲರಾಗಬೇಕು. ಖಾಸಗಿ ವಲಯ ಇಂದು ಸಾಕಷ್ಟು ವಿಸ್ತರಿಸಿದೆ. ಬೇರೆ ಜಿಲ್ಲೆ, ಬೇರೆ ರಾಜ್ಯಗಳಾದರೂ ಸರಿ ತಮ್ಮ ಜೀವನ ಕಟ್ಟಿಕೊಳ್ಳಲು ಮುಂದಾಗಬೇಕು ಎಂದರು.
ಯುವಜನರು ನಮ್ಮ ಸಂಪನ್ಮೂಲ. ಯುವ ಜನರನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಉದ್ಯೋಗಗಳಿಗೆ ಪೂರಕವಾದ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಖಾಸಗಿ ವಲಯಗಳು ಹೆಚ್ಚಿನ ಉದ್ಯೋಗ ಅವಕಾಶಗಳನ್ನು ಒದಗಿಸುತ್ತಿವೆ. ಜಿಲ್ಲೆಯಲ್ಲಿ ಉದ್ಯೋಗ ಮೇಳಗಳು ತಿಂಗಳಿಗೊಮ್ಮೆ ಆಯೋಜನೆಯಾಗ ಬೇಕು. ಇದರಿಂದ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಸಹಕಾರಿಯಾಗಲಿದೆ. ಅಲ್ಲದೆ ಆರ್ಥಿಕ ಸದೃಢರಾಗಲು ಸಹಾಯಕವಾಗುತ್ತದೆ ಎಂದು ಮಹೇಶ್ ತಿಳಿಸಿದರು.
ಕೌಶಲ್ಯ ತರಬೇತಿ ಪಡೆಯಿರಿ: ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, ಸ್ಪರ್ಧಾತ್ಮಾಕ ಯುಗದಲ್ಲಿ ಯುವಕರು ತರಬೇತಿ ಪಡೆ ಯದಿದ್ದರೆ ಉದ್ಯೋಗ ಕಷ್ಟಸಾಧ್ಯವಾಗಿದೆ. ಅದರಲ್ಲೂ ಕೌಶಲ್ಯಧಾರಿತ ತರಬೇತಿ ಪಡೆಯಬೇಕು. ಜತೆಗೆ ಅನುಭವವು ಬೇಕು. ಇದರಿಂದ ನಿರುದ್ಯೋಗ ಸಮಸ್ಯೆ ಸ್ವಲ್ಪ ಮಟ್ಟಿಗಾದರೂ ಕಡಿಮೆಯಾಗಲಿದೆ. ಈ ಹಿನ್ನೆಲೆಯಲ್ಲಿ ಇಂದಿನ ಯುವಕರು ಕೌಶಲ್ಯಾಭಿ ವೃದ್ಧಿ ತರಬೇತಿ ಪಡೆದು ಉದ್ಯೋಗ ಕಂಡುಕೊಳ್ಳುವಂತೆ ಕಿವಿಮಾತು ಹೇಳಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿ.ಬಿ. ಶಾಂತಮೂರ್ತಿ ಕುಲಗಾಣ ಮಾತನಾಡಿ, ಇಂದು ಎದುರಿಸುತ್ತಿರುವ ಪ್ರಮುಖ ಸಮಸ್ಯೆ ನಿರುದ್ಯೋಗ. ನಮ್ಮ ಜಿಲ್ಲೆ ಕೃಷಿ ಆಧಾರಿತ, ಹಲವಾರು ಹಿಂದುಳಿದ ಸಮುದಾಯಗಳು ವಾಸಿಸುವ ಜಿಲ್ಲೆಯಾಗಿದ್ದು, ಸಹಜವಾಗಿ ಉದ್ಯೋಗ ಅರಸಿ ಬೇರೆ ಜಿಲ್ಲೆಗಳಿಗೆ ಹೋಗುವಪರಿಸ್ಥಿತಿ ಎದುರಾಗಿರುವ ಸಂದರ್ಭದಲ್ಲಿ ಸರ್ಕಾರದ ವತಿಯಿಂದ ಈ ರೀತಿಯ ಉದ್ಯೋಗ ಮೇಳದ ಆಯೋಜನೆ ಶ್ಲಾಘನೀಯವಾಗಿದೆ. ಉದ್ಯೋಗ ಅರಸಿ ಬಂದವರಿಗೆ ಉದ್ಯೋಗಮೇಳ ಸೇತುವೆಯಂತೆ ಕಾರ್ಯನಿರ್ವಹಿಸಲಿದೆ ಎಂದರು.
ಜಿಲ್ಲಾ ಉದ್ಯೋಗಾಧಿಕಾರಿ ಮಹಮದ್ ಅಕºರ್ ಕಾರ್ಯ ಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳಾನ್ನಾಡಿದರು. ನಗರಸಭೆ ಅಧ್ಯಕ್ಷೆ ಎಂ. ಆಶಾ ನಟರಾಜು, ತಾಪಂ ಅಧ್ಯಕ್ಷೆ ಎಚ್.ಎನ್. ಶೋಭಾ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಡಿ.ವೈಎಸ್.ಪಿ. ಪ್ರಿಯದರ್ಶಿನಿ ಸಾಣೆಕೊಪ್ಪ, ಇತರರು ಕಾರ್ಯಕ್ರಮದಲ್ಲಿ ಹಾಜರಿದ್ದರು
ಕೆಲ್ಲಂಬಳ್ಳಿ, ಉತ್ತಂಬಳ್ಳಿಯಲ್ಲಿ ಕೈಗಾರಿಕೆ ಸ್ಥಾಪನೆ: ಶಾಸಕ :
ನಮ್ಮಲ್ಲಿ ಕೈಗಾರಿಕೆಗಳು ಕಡಿಮೆ. ಜಿಲ್ಲೆಯಲ್ಲಿ ಕೈಗಾರಿಕಾ ವಲಯವನ್ನು ಕೆಲ್ಲಂಬಳ್ಳಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ. ಮುಂದಿನ 2-3 ವರ್ಷಗಳಲ್ಲಿ ಕೈಗಾರಿಕೆಗಳು ಆರಂಭವಾದರೆ ಕನಿಷ್ಠ 2 ಸಾವಿರ ಜನರಿಗೆ ಉದ್ಯೋಗ ಲಭಿಸಿ ಜಿಲ್ಲೆಯ ನಿರುದ್ಯೋಗ ಸಮಸ್ಯೆ ಕಡಿಮೆಯಾಗಲಿದೆ. ಕೆಲ್ಲಂಬಳ್ಳಿ ಕೈಗಾರಿಕಾ ವಲಯದಲ್ಲಿ ಅವಶ್ಯವಿರುವ ಇನ್ನಷ್ಟು ಮೂಲಸೌಲಭ್ಯಗಳನ್ನು ಆದ್ಯತೆ ಮೇರೆಗೆ ನೀಡಬೇಕಾಗಿದೆ.ನಗರದ ಹೊರವಲಯದಲ್ಲಿರುವ ಉತ್ತಂಬಳ್ಳಿಯಲ್ಲಿ ತೆರೆಯಲಾಗಿರುವ ಗಾರ್ಮೆಂಟ್ಸ್‌ನಿಂದ ಸಾವಿರಾರು ಮಹಿಳೆಯರಿಗೆ ಉದ್ಯೋಗ ದೊರಕಿದೆ ಎಂದು ಶಾಸಕ ಪುಟ್ಟರಂಗಶೆಟ್ಟಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.