ನನ್ನ ಕ್ಷೇತ್ರದ ಅಭಿವೃದ್ಧಿ ಹೇಗೆ ಮಾಡಬೇಕೆಂದು ನನಗೆ ಗೊತ್ತಿದೆ: ಶಾಸಕ ಪುಟ್ಟರಂಗ ಶೆಟ್ಟಿ
ಬಿಜೆಪಿ ಶಾಸಕ ನಿರಂಜನ್ ಕುಮಾರ್ ಮೇಲೆ ಶಾಸಕ ಪುಟ್ಟರಂಗ ಶೆಟ್ಟಿ ಗರಂ
Team Udayavani, Jul 20, 2020, 9:55 PM IST
ಚಾಮರಾಜನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿದರು.
ಚಾಮರಾಜನಗರ: ಮೂರು ಬಾರಿ ಸತತವಾಗಿ ಶಾಸಕನಾಗಿರುವ ನನಗೆ ನನ್ನ ಕ್ಷೇತ್ರ ಅಭಿವೃದ್ಧಿ ಮಾಡುವುದು ಹೇಗೆಂದು ತಿಳಿದಿದೆ.
ಮತ್ತು ಈ ವಿಚಾರದಲ್ಲಿ ಹಾಗೂ ನನ್ನ ಕ್ಷೇತ್ರದ ವಿಷಯದಲ್ಲಿ ಗುಂಡ್ಲುಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ನಿರಂಜನ್ ಕುಮಾರ್ ತಲೆ ಹಾಕುವ ಅಗತ್ಯವಿಲ್ಲ.
ಹೀಗೆಂದು ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಸಿ. ಪುಟ್ಟರಂಗ ಶೆಟ್ಟಿ ಕಿಡಿಕಾರಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್-19 ವಿಚಾರದಲ್ಲಿ ನಾನು ಯಾವುದೇ ರಾಜಕೀಯ ಮಾಡಿಲ್ಲ. ರಾಜಕೀಯ ಮಾಡುತ್ತಿರುವುದು ಬಿಜೆಪಿಯವರೇ.
ಅದರಲ್ಲೂ ಶಾಸಕ ನಿರಂಜನ್ ಕುಮಾರ್ ಅವರು, ನಾನೂ ಹಾಗೂ ಶಾಸಕ ಆರ್. ನರೇಂದ್ರ ಇಬ್ಬರೂ ಕೋವಿಡ್ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆಂದು ಮಾಡಿರುವ ಆರೋಪ ಸಂಪೂರ್ಣವಾಗಿ ಸತ್ಯಕ್ಕೆ ದೂರವಾದುದು ಮತ್ತು ಇಂತಹ ಸಂಕಷ್ಟದ ಸಂದರ್ಭದಲ್ಲಿ ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಪುಟ್ಟರಂಗಶೆಟ್ಟಿ ಅವರು ಶಾಸಕ ನಿರಂಜನ್ ಕುಮಾರ್ ಮೇಲೆ ಹರಿಹಾಯ್ದರು.
ಮಾತ್ರವಲ್ಲದೇ, ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಕ್ಷೇತ್ರದಲ್ಲಿ ಅನೇಕ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ನಮ್ಮ ಹಕ್ಕನ್ನು ಪ್ರಶ್ನಿಸುವುದು ತಪ್ಪೇ? ಈ ವಿಚಾರವಾಗಿ ನಾವು ಸಚಿವರನ್ನು ಪ್ರಶ್ನಿಸಿದರೆ ಅದಕ್ಕೆ ನಿರಂಜನ್ ಉತ್ತರ ನೀಡುತ್ತಾರೆ ಎಂದರು.
ನಗರ ಸಭಾ ಮಾಜಿ ಅಧ್ಯಕ್ಷ ನಂಜುಂಡ ಸ್ವಾಮಿ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಅವರು ಕೇವಲ ಪ್ರಚಾರಕ್ಕಾಗಿ ಜಿಲ್ಲೆಗೆ ಬರುತ್ತಾರೆ. ಕೆಲಸ ಮಾಡಬೇಕೆಂಬ ಕಾಳಜಿ ಇಲ್ಲ. ಇವರ ಬದಲು ವಿ. ಸೋಮಣ್ಣ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಿದರೆ ಜಿಲ್ಲೆ ಸ್ವಲ್ಪ ಅಭಿವೃದ್ಧಿಯಾದರೂ ಆಗಬಹುದು ಎಂದರು.
ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಬಿ. ಕೆ. ರವಿಕುಮಾರ್ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರಾದ ಸುರೇಶ್ ಕುಮಾರ್ ಅವರು ಜಿಲ್ಲಾಡಳಿತ ಭವನದಲ್ಲಿ ನಡೆಸುವ ಸಭೆಗಳಲ್ಲಿ ಸ್ಥಳೀಯ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರನ್ನು ಆಹ್ವಾನಿಸದೇ ಸಭೆ ನಡೆಸುವ ಮೂಲಕ ಚ್ಯುತಿ ತಂದಿರುವುದು ಖಂಡನೀಯ.
ಮುಂದಿನ ದಿನಗಳಲ್ಲಿ ಸ್ಥಳೀಯ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಸಭೆ ನಡೆಸಿದರೆ ಪಕ್ಷದ ವತಿಯಿಂದ ಹೋರಾಟ ರೂಪಿಸಿ ಸಚಿವರ ವಿರುದ್ದ ಕಪ್ಪು ಬಾವುಟ ಪ್ರದರ್ಶನ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಅಸ್ಗರ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
MUST WATCH
ಹೊಸ ಸೇರ್ಪಡೆ
Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ
Bengaluru: ಅಪರಾಧ, ರೌಡಿಸಂ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಿ: ಡಿಜಿಪಿ ಸೂಚನೆ
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.