ವೈಫ‌ಲ್ಯ ಮುಚ್ಚಿಡಲು ಮೊಟ್ಟೆ ಎಸೆತ

Team Udayavani, Aug 20, 2022, 2:23 PM IST

tdy-5

ಹನೂರು: ಸಿದ್ಧರಾಮಯ್ಯ ಕೊಡಗು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಲ್ಲಿ ಸರ್ಕಾರದ ವೈಫ‌ಲ್ಯಗಳೆಲ್ಲಾ ಬೆಳಕಿಗೆ ಬರುತ್ತದೆ ಎನ್ನುವ ಉದ್ದೇಶದಿಂದ ಈ ರೀತಿಯ ಘಟನೆಗಳಿಗೆ ಕುಮ್ಮಕ್ಕು ನೀಡುತ್ತಿದೆ ಎಂದು ಶಾಸಕ ಆರ್‌.ನರೇಂದ್ರ ಕಿಡಿಕಾರಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ರಾಜಕೀಯ ಕಾರ್ಯಕ್ರಮಕ್ಕಾಗಲಿ, ಕಾಂಗ್ರೆಸ್‌ ಪಕ್ಷದ ಕಾರ್ಯಕ್ರಮಕ್ಕಾಗಲಿ ಕೊಡಗು ಜಿಲ್ಲಾ ಪ್ರವಾಸವನ್ನು ಕೈಗೊಂಡಿರಲಿಲ್ಲ. ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೀಡಾಗಿರುವ ಪ್ರದೇಶಗಳನ್ನು ಪರಿಶೀಲನೆ ನಡೆಸಿ ನೊಂದವರಿಗೆ ಸಾಂತ್ವನ ತಿಳಿಸಲು ಪ್ರವಾಸ ಹಮ್ಮಿಕೊಂಡಿದ್ದರು. ಆದರೆ ಇಂತಹ ವೇಳೆಯಲ್ಲಿ ಈ ರೀತಿಯ ಕೃತ್ಯ ಜರುಗಿರುವುದು ಖಂಡನೀಯ ಮತ್ತು ಸರ್ಕಾ ರದ ವೈಫ‌ಲ್ಯವಾಗಿದೆ ಎಂದು ಕಿಡಿಕಾರಿದರು.

ಹುಳುಕುಗಳನ್ನು ಮುಚ್ಚಿಕೊಳ್ಳುವ ಯತ್ನ: ಧಾರಾಕಾರ ಮಳೆಯಿಂದಾಗಿ ಹಾನಿಗೀಡಾಗಿದ್ದ ಕೊಡಗು ಜಿಲ್ಲೆಯಲ್ಲಿ ಸರ್ಕಾರ ಯಾವುದೇ ಪರಿಹಾರ ಕಾರ್ಯಗಳನ್ನು ಕೈಗೊಂಡಿಲ್ಲ. ಅನಾಹುತಗಳು ಸಂಭವಿಸಿದ ವೇಳೆ ನಿರಾಶ್ರಿತರನ್ನು ಗಂಜಿಕೇಂದ್ರಗಳಿಗೆ ಕರೆದೊಯ್ದು ಅವರಿಗೆ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸದೆ ಎರಡೇ ದಿನಕ್ಕೆ ಮನೆಗಳಿಗೆ ಕಳುಹಿಸಲಾಗಿದೆ. ಮನೆಹಾನಿ ಸಂಭವಿಸಿರುವವರಿಗೆ ಯಾವುದೇ ಪರಿಹಾರ ವನ್ನಾಲಿ, ಮನೆ ನಿರ್ಮಾಣಕ್ಕೆ ಸಹಾಯಧನ ವನ್ನಾಗಲಿ ನೀಡಿಲ್ಲ. ಇದೆಲ್ಲದಕ್ಕಿಂತ ಮಗಿಲಾಗಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕೋಟ್ಯಂತರ ರೂ. ಖರ್ಚು ಮಾಡಿ ನಿರ್ಮಿಸಿರುವ ತಡೆಗೋಡೆಯು ಸಮ ರ್ಪಕವಾಗಿಲ್ಲ, ಒಮ್ಮೆ ಕುಸಿದು ಬಳಿಕ ಲಕ್ಷಾಂತರ ರೂ. ಖರ್ಚು ಮಾಡಿ ತೇಪೆ ಹಾಕಿದರೂ ಪ್ರಯೋಜನವಾಗಿಲ್ಲ. ಸಿದ್ದರಾಮಯ್ಯ ಅವರು ಭೇಟಿ ಮಾಡಿದರೆ ಈ ವೈಫ‌ಲ್ಯಗಳೆಲ್ಲಾ ಬಟಾಬಯಲಾಗುತ್ತದೆ ಎನ್ನುವ ಉದ್ದೇಶದಿಂದ ಈ ರೀತಿಯ ಕೃತ್ಯಗಳನ್ನು ಎಸಗಿಸುವುದರ ಮೂಲಕ ವಿಕೃತಿ ಮೆರೆಯಲಾಗಿದೆ ಎಂದು ಕಿಡಿಕಾರಿದರು.

ಮಲತಾಯ ಧೋರಣೆ ಅನುಸರಿಸುತ್ತಿದ್ದಾರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ. ಕಾಂಗ್ರೆಸ್‌ ಶಾಸಕರಿರುವ ಕ್ಷೇತ್ರಗಳಿಗೆ ಮಲತಾಯಿ ಧೋರಣೆ ಅನುಸರಿ ಸುತ್ತಿದೆ. ಬಿಜೆಪಿ ಶಾಸಕರಿರುವ ಕ್ಷೇತ್ರಗಳಿಗೆ 50 ಕೋಟಿ ವಿಶೇಷ ಅನುದಾನ ನೀಡಿ ನಮಹೆ 25 ಕೋಟಿ ಮಾತ್ರ ನೀಡಿದ್ದಾರೆ, ಆ ಅನುದಾನ ಕೂಡು ಬಿಡುಗಡೆಯಾಗಿಲ್ಲ. ಮುಜರಾಯಿ ಇಲಾಖೆಯಿಂದ ಕೆಲ ಕ್ಷೇತ್ರಗಳ ದೇವಾಲಯದ ಅಭಿವೃದ್ಧಿಗೆ 2 ಕೋಟಿ ಅನುದಾನ ನೀಡಲಾಗಿದೆ. ಆ ಅನುದಾನ ನಮ್ಮ ಕ್ಷೇತ್ರಕ್ಕೆ ನೀಡಿಲ್ಲ. ಕೆಲವು ಕ್ಷೇತ್ರಗಳ ಶಾಲೆಗಳಿಗೆ ನೂತನ ಕೊಠಡಿಗಳನ್ನು ಮಂಜೂರು ಮಾಡಲಾಗಿದೆ, ನಮ್ಮ ಕ್ಷೇತ್ರಕ್ಕೆ ಒಂದೂ ಕೊಠಡಿಯನ್ನು ಮಂಜೂರು ಮಾಡಿಲ್ಲ. ಹಾಗಾದರೆ ಬಿಜೆಪಿ ಶಾಸಕರು ಇರುವ ಕ್ಷೇತ್ರಗಳಲ್ಲಿ ಮಾತ್ರ ದೇವರು, ದೇವಾಲಯ, ಶಾಲೆಗಳಿವೆ. ಕಾಂಗ್ರೆಸ್‌ ಶಾಸಕರಿರುವ ಕ್ಷೇತ್ರಗಳಲ್ಲಿ ಇಲ್ಲವೇ? ಎಂದು ವ್ಯಂಗ್ಯವಾಡಿದರು.

ಜಿ.ಪಂ ಮಾಜಿ ಉಪಾಧ್ಯಕ್ಷ ಬಸವರಾಜು, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ದೇವರಾಜು, ಪ.ಪಂ ಉಪಾಧ್ಯಕ್ಷ ಗಿರೀಶ್‌, ಮುಕಂಡರಾದ ಜವಾದ್‌ ಅಹಮ್ಮದ್‌, ಮಧುವನಹಳ್ಳಿ ಶಿವಕುಮಾರ್‌, ಪಾಳ್ಯ ಕೃಷ್ಣ, ಅಜ್ಜೀಪುರ ನಾಗರಾಜು ಇದ್ದರು.

ಟಾಪ್ ನ್ಯೂಸ್

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.