ಹಲವು ರೋಗಕ್ಕೆ ಸಿರಿಧಾನ್ಯ ರಾಮಬಾಣ


Team Udayavani, Feb 14, 2018, 3:48 PM IST

cham.jpg

ಹನೂರು: ಆಧುನಿಕತೆ ಬೆಳೆದಂತೆಲ್ಲ ಮಾನವ ಹಲವು ರೋಗ ರುಜಿಗಳಿಗೆ ತುತ್ತಾಗುತ್ತಿದ್ದು, ನಿವಾರಣೆಗೆ ಸಿರಿಧಾನ್ಯ ರಾಮಬಾಣ ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರೀಶ್‌ಕುಮಾರ್‌ ತಿಳಿಸಿದರು.

ಕ್ಷೇತ್ರ ವ್ಯಾಪ್ತಿಯ ವಡಕೆಹಳ್ಳ ಗ್ರಾಮದಲ್ಲಿ ವಿಶ್ವ ರೈತ ಚೇತನ ಪ್ರೋ.ಎಂ.ಡಿ.ನಂಜುಂಡಸ್ವಾಮಿ ಅವರ 82ನೇ ಜನ್ಮ ದಿನಾಚರಣೆ ಅಂಗವಾಗಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಹಮ್ಮಿಕೊಂಡಿದ್ದ ಮಹದೇಶ್ವರ ಸಾವಯವ ಸಿರಿಧಾನ್ಯ ಸ್ವ-ಸಹಾಯ ಸಂಘ ಮತ್ತು ಸಿರಿ ಧಾನ್ಯಗಳ ಸಂಸ್ಕರಣಾ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ರಾಜ್ಯದಲ್ಲಿಯೇ ಅತಿ ಹೆಚ್ಚು ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ರೈತರನ್ನು ಜಿಲ್ಲೆ ಹೊಂದಿದೆ. ಆದರೆ, ವ್ಯಾಪಾರೀಕರಣಕ್ಕೆ ಸಿಲುಕಿ ಕಲಬೆರಕೆ ರಾಸಾಯನಿಕ ಸಿಂಪಡಣೆ ಸೇರಿದಂತೆ ಇನ್ನಿತರ ಸಮಸ್ಯೆಗಳಿಗೆ ಸಿಲುಕಿ ರುವುದು ದುರದೃಷ್ಟಕರ. ರೈತರು ಸಾವಯವ ಕೃಷಿ ಮತ್ತು ಸಿರಿಧಾನ್ಯಗಳ ಉತ್ಪಾದನೆಗೆ ಹೆಚ್ಚು ಒತ್ತು ನೀಡಿದರೆ, ಔಷಧೀಯ ಗುಣಗಳುಳ್ಳ ಆಹಾರ ಪದಾರ್ಥಗಳ ಉತ್ಪಾದನೆ ಜೊತೆಗೆ ಆರ್ಥಿಕವಾಗಿಯೂ ಸಬಲರಾಗಬಹುದು. ಈ ರೀತಿಯ ಸಂಸ್ಕರಣಾ ಘಟಕಗಳು ಜಿಲ್ಲಾದ್ಯಂತ ತಲೆ ಎತ್ತುವಂತಾಗಬೇಕು ಎಂದು ಕಿವಿಮಾತು ಹೇಳಿದರು.

ಸಿರಿಧಾನ್ಯ ವರ್ಷ: ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ತಿರುಮಲ್ಲೇಶ್‌ ಮಾತನಾಡಿ, 2018-19ನೇ ಸಾಲನ್ನು ಸಿರಿಧಾನ್ಯಗಳ ವರ್ಷವೆಂದು ಘೋಷಣೆ ಮಾಡಲು ಕ್ರಮವಹಿಸಲಾಗಿದೆ. ಹೀಗಾಗಿ ಜಿಲ್ಲೆಯ ರೈತಪರ ಸಂಘಟನೆಗಳು ಈ ಬಗ್ಗೆ ರೈತರಿಗೆ ಹೆಚ್ಚಿನ ಅರಿವು ಮೂಡಿಸಿ ಸಾವಯವ ಕೃಷಿಗೆ ಒತ್ತು ನೀಡುವಂತೆ ಪ್ರೇರೇಪಿಸಬೇಕು.

ಸಾವಯವ ಕೃಷಿ ಮತ್ತು ಸಿರಿಧಾನ್ಯಗಳ ಮಹತ್ವವನ್ನರಿತ ಕೃಷಿ ಸಚಿವ ಕೃಷ್ಣ ಬೈರೇಗೌಡ ರಾಜ್ಯದ ವಿವಿಧ ಜಿಲ್ಲೆ, ತಾಲೂಕು ಮತ್ತು ಹೊರರಾಜ್ಯಗಳಿಗೂ ತೆರಳಿ ಸಿರಿಧಾನ್ಯಗಳ ಮಹತ್ವದ ಬಗ್ಗೆ ಪ್ರಚಾರ ಮಾಡಿದ್ದಾರೆ. ಈ ಹಿನ್ನೆಲೆ ಬೆಂಗಳೂರಿನಲ್ಲಿ ರಾಷ್ಟ್ರಮಟ್ಟದ ಸಾವಯವ ಸಿರಿಧಾನ್ಯ ಮೇಳವನ್ನೂ ಆಯೋಜಿಸಿ ಯಶಸ್ವಿಯಾಗಿದೆ ಎಂದು ತಿಳಿಸಿದರು. 

ಬಿತ್ತನೆ ಬೀಜ ಒದಗಿಸುವುದೇ ಸವಾಲು: ಸಿರಿಧಾನ್ಯ ಹೊರತುಪಡಿಸಿ ಉಳಿದಂತಹ ಬಿತ್ತನೆ ಬೀಜಗಳನ್ನು ಸರ್ಕಾರದಿಂದ ಸಬ್ಸಿಡಿ ದರದಲ್ಲಿ ರೈತ ಸಂಪರ್ಕ ಕೇಂದ್ರಗಳ ಮೂಲಕ ವಿತರಿಸಲಾಗುತ್ತಿದೆ. ಆದರೆ, ಸಿರಿಧಾನ್ಯಗಳ ಉತ್ಪಾದನೆ ಅತ್ಯಲ್ಪ ಪ್ರಮಾಣದಲ್ಲಿದೆ. ಸಾಮೆ, ಜೋಳ, ನವಣೆ, ರಾಗಿ, ಸಜ್ಜೆ, ಆರ್ಕ, ಊದಲು ಬಿತ್ತನೆ ಬೀಜ ರೈತರ ಅವಶ್ಯಕತೆಗೆ ಅನುಗುಣವಾಗಿ ವಿತರಿಸುವುದು ಸವಾಲಾಗಿದೆ. ಈ ಹಿನ್ನೆಲೆ ರೈತರಪರ ಸಂಘಟನೆಗಳು ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಸನ್ಮಾನ: ಜಿಲ್ಲೆಯ ಬೋಗಾಪುರದಲ್ಲಿ ಅಂಧರ ಶಾಲೆ ಆರಂಭಿಸಿ ಪೋಷಣೆ ಮಾಡುತ್ತಿರುವ ದೀಪಾ ಅಕಾಡೆಮಿಯ ಮುಖ್ಯ ಶಿಕ್ಷಕಿ ಶಿಲ್ಪಾಗೆ ರೈತ ಚೇತನ ಪ್ರೋ.ಎಂಡಿಎನ್‌ ಪ್ರತಿಷ್ಠಾನದಿಂದ ನೀಡುವ ಸಾಮಾಜಿಕ ಕಳಕಳಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. 

ಬರಗೂರು ಕೆಳಮಠದ ಸುಬ್ರಹ್ಮಣ್ಯ ರಾಜೇಂದ್ರ ಸ್ವಾಮಿ, ಕೃಷಿ ನಿರ್ದೇಶಕ ಯೋಗೇಶ್‌, ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್‌, ಕಾರ್ಯದರ್ಶಿ ಗುರುಪ್ರಸಾದ್‌, ಚೆಂಗಡಿ ಕರಿಯಪ್ಪ, ಒಬಳಿ ವಿದ್ಯಾಸಂಸ್ಥೆಯ ಗಂಗಾಧರ್‌ ಇದ್ದರು.

ಟಾಪ್ ನ್ಯೂಸ್

10-mambadi

ಮಾಂಬಾಡಿ ಸುಬ್ರಹ್ಮಣ್ಯ ಭಟ್ ಗೆ ಕರ್ನಾಟಕ ಯಕ್ಷಗಾನ ಅಕಾಡಮಿಯ ಪಾರ್ತಿಸುಬ್ಬ ಪ್ರಶಸ್ತಿ ಘೋಷಣೆ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3(2

Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

9-chamarajanagara

Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

10-mambadi

ಮಾಂಬಾಡಿ ಸುಬ್ರಹ್ಮಣ್ಯ ಭಟ್ ಗೆ ಕರ್ನಾಟಕ ಯಕ್ಷಗಾನ ಅಕಾಡಮಿಯ ಪಾರ್ತಿಸುಬ್ಬ ಪ್ರಶಸ್ತಿ ಘೋಷಣೆ

3(2

Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.