ನ್ಯಾ.ನಾಗಮೋಹನ್‌ದಾಸ್‌ ವರದಿ ಜಾರಿಗೆ ಆಗ್ರಹ

ಇಷ್ಟಾದರೂ ರಾಜ್ಯ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ

Team Udayavani, May 21, 2022, 6:07 PM IST

ನ್ಯಾ.ನಾಗಮೋಹನ್‌ದಾಸ್‌ ವರದಿ ಜಾರಿಗೆ ಆಗ್ರಹ

ಚಾಮರಾಜನಗರ: ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ.3ರಿಂದ ಶೇ.7.5 ಕ್ಕೇರಿಸಬೇಕೆಂದು ಶಿಫಾರಸು ಮಾಡಿರುವ ನ್ಯಾಯಮೂರ್ತಿ ನಾಗಮೋಹನ್‌ದಾಸ್‌ ವರದಿ ಜಾರಿ ಮಾಡಬೇಕೆಂದು ಆಗ್ರಹಿಸಿ ನಾಯಕ ಸಮುದಾಯ ನಗರದಲ್ಲಿ ಶುಕ್ರವಾರ ಭಾರೀ ಪ್ರತಿಭಟನೆ ನಡೆಸಿತು.

ನಗರದ ಪ್ರವಾಸಿ ಮಂದಿರ ಆವರಣದಲ್ಲಿ ಸಮಾವೇಶಗೊಂಡ ಸಮುದಾಯದವರು, ಭುವನೇಶ್ವರಿ ವೃತದಲ್ಲಿ ಮಾನವ ಸರಪಳಿ ರಚಿಸಿ ಕೆಲಕಾಲ ರಸ್ತೆತಡೆ ನಡೆಸಿ, ನಂತರ ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿ, ಹೆಚ್ಚುವರಿ ಜಿಲ್ಲಾಧಿಕಾರಿ ಕಾತ್ಯಾಯಿನಿದೇವಿ ಮೂಲಕ ಸರ್ಕಾರಕ್ಕೆ ಹಕ್ಕೊತ್ತಾಯ ಸಲ್ಲಿಸಿದರು.

ಧರಣಿಗೂ ಬಗ್ಗದ ಸರ್ಕಾರ: ಪ್ರತಿಭಟನೆ ನೇತೃತ್ವ ವಹಿಸಿದ್ದ ನಾಯಕ ಸಮಾಜದ ಮುಖಂಡ ಪು.ಶ್ರೀನಿವಾಸನಾಯಕ ಮಾತನಾಡಿ, ನ್ಯಾ.ನಾಗಮೋಹನ್‌ ದಾಸ್‌ ವರದಿ ಜಾರಿಗೊಳಿಸುವಂತೆ 100 ದಿನಗಳಿಂದಲೂ, ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯ ವಾಲ್ಮೀಕಿ ಮಠದ ಶ್ರೀಪ್ರಸನ್ನಾನಂದಪುರಿ ಸ್ವಾಮೀಜಿ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಇಷ್ಟಾದರೂ ರಾಜ್ಯ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ ಎಂದು ದೂರಿದರು.

ಜಾನುವಾರುಗಳ ಜತೆ ಪ್ರತಿಭಟನೆ: ಸೌಜನ್ಯಕ್ಕಾದರೂ ಮುಖ್ಯಮಂತ್ರಿಯವರು ಧರಣಿ ಸ್ಥಳಕ್ಕೆ ಭೇಟಿ ನೀಡಿಲ್ಲ, ಶ್ರೀಗಳ ಹೋರಾಟ ಬೆಂಬಲಿಸಿ ರಾಜ್ಯಾದ್ಯಂತ ಎಲ್ಲಾ ತಾಲೂಕು ಕಚೇರಿ, ಡೀಸಿ ಕಚೇರಿ ಮುಂದೆ ಪ್ರತಿಭಟನೆ ನಡಸಲಾಗುತ್ತಿದ್ದು, ಚಾಮರಾಜನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತಿದೆ. ಸರ್ಕಾರ ನ್ಯಾ.ನಾಗಮೋಹನ್‌ ದಾಸ್‌ ವರದಿ ಜಾರಿಗೆ ತರದಿದ್ದರೆ ಜನ, ಜಾನುವಾರುಗಳೊಂದಿಗೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ರಾಜೀನಾಮೆ ನೀಡಲಿ: ಚಾಮರಾಜನಗರ ಮತ್ತು ಮೈಸೂರು ಜಿಲ್ಲಾ ನಾಯಕರ ಸಂಘದ ಅಧ್ಯಕ್ಷ ಕೆಲ್ಲಂಬಳ್ಳಿ ಸೋಮನಾಯಕ ಮಾತನಾಡಿ, ಸಮುದಾಯದ ಮೀಸಲಾತಿಯಡಿಯಲ್ಲಿ ಶಾಸಕರು, ಸಚಿವರಾಗಿರುವ ಎಲ್ಲರೂ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ದಲಿತ ಮುಖಂಡ ಅರಕಲವಾಡಿ ನಾಗೇಂದ್ರ ಮಾತನಾಡಿದರು. ಪ್ರತಿಭಟನೆಯಲ್ಲಿ ಜಿಪಂ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ಮಾಜಿ ಸದಸ್ಯರಾದ ಎಸ್‌. ಸೋಮನಾಯಕ, ರಮೇಶ್‌, ತಾಪಂ ಮಾಜಿ ಅಧ್ಯಕ್ಷ ಎಚ್‌ .ವಿ.ಚಂದ್ರು, ಪಾಳ್ಯ ಜಯಸುಂದರ್‌, ನಿವೃತ್ತ ಅಭಿಯಂತರಾದ ರಂಗರಾಮನಾಯಕ, ಯ.ರಾಜುನಾಯಕ, ನಗರಸಭಾ ಸದಸ್ಯರಾದ ಶಿವರಾಜ್‌, ಸುರೇಶ್‌, ಪ್ರಕಾಶ್‌, ಮಾಜಿ ಸದಸ್ಯ ಚೆಂಗುಮಣಿ, ಮುಖಂಡರಾದ ಕಪಿನಿನಾಯಕ, ನಗರಸಭಾ ಮಾಜಿ ಅಧ್ಯಕ್ಷ ಸುರೇಶ್‌ನಾಯಕ, ಚಾ.ಸಿ.ಸೋಮನಾಯಕ, ಕೃಷ್ಣನಾಯಕ, ನಾರಾಯಣ್‌, ಶಿವುವಿರಾಟ್‌, ಬುಲೆಟ್‌ ಚಂದ್ರು, ವರದನಾಯಕ, ನಾಗೇಂದ್ರನಾಯಕ, ಬಂಗಾರು, ಮಣಿಕಂಠನಾಯಕ, ಮಹೇಂದ್ರ, ಜಿ.ಎಂ.ಗಾಡ್ಕರ್‌, ದಲಿತ ಮುಖಂಡ ಸಿ.ಎಂ.ಕೃಷ್ಣಮೂರ್ತಿ, ಬಿಎಸ್ಪಿ ಜಿಲ್ಲಾಧ್ಯಕ್ಷ ಎನ್‌
.ನಾಗಯ್ಯ, ಉಪಾಧ್ಯಕ್ಷ ಬ್ಯಾಡಮೂಡ್ಲು ಬಸವಣ್ಣ, ರಮೇಶ್‌, ಮಾದೇಶ್‌, ರಂಗಸ್ವಾಮಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

RRN-Muni

Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು

Dr.-Singh’s-family

Former Prime Minister: ಮನಮೋಹನ್‌ ಸಿಂಗ್‌ ಕುಟುಂಬದ ಪರಿಚಯ; ನಡೆದು ಬಂದ ಹಾದಿ….

BGV-Congress

Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RRN-Muni

Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು

Dr.-Singh’s-family

Former Prime Minister: ಮನಮೋಹನ್‌ ಸಿಂಗ್‌ ಕುಟುಂಬದ ಪರಿಚಯ; ನಡೆದು ಬಂದ ಹಾದಿ….

BGV-Congress

Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.