2 ಡೋಸ್ ಪಡೆದಿದ್ದರೂ ನೆಗೆಟಿವ್ ವರದಿ ಕಡ್ಡಾಯ
Team Udayavani, Sep 17, 2021, 4:05 PM IST
ಗುಂಡ್ಲುಪೇಟೆ: ತಾಲೂಕಿನ ತಮಿಳುನಾಡು ಗಡಿಭಾಗ ಕೆಕ್ಕನಹಳ್ಳಿ ಚೆಕ್‌ಪೋಸ್ಟ್‌ಗೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಭೇಟಿ ನೀಡಿ ನಿಫಾ ಹಾಗೂ
ಕೋವಿಡ್ ತಪಾಸಣೆ ಕುರಿತು ಪರಿಶೀಲಿಸಿದರು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಎಂ. ಆರ್.ರವಿ, ತಮಿಳುನಾಡಿನಲ್ಲಿ ಪ್ರವಾಸಿ ತಾಣಗಳಿಗೆ ಅವಕಾಶ ನೀಡಿರುವ ಹಿನ್ನೆಲೆ ಬಂಡೀಪುರದ ಕೆಕ್ಕನಹಳ್ಳ ಮಾರ್ಗವಾಗಿ ಸಂಚಾರ ದಟ್ಟಣೆ ಹೆಚ್ಚಿದೆ.
ನಿತ್ಯ ಸಾವಿರಾರು ಮಂದಿ ಬೆಂಗಳೂರು, ಮೈಸೂರು ಸೇರಿದಂತೆ ಇತರೆಡೆಯಿಂದ ಊಟಿಗೆ ತೆರಳಲು ಆಗಮಿಸುತ್ತಿದ್ದಾರೆ. ದ್ವಿಚಕ್ರ ವಾಹನ ಸವಾರರು ಹೆಚ್ಚಿರುವ ಹಿನ್ನೆಲೆ ಪ್ರತಿಯೊಬ್ಬರನ್ನು ಥರ್ಮಲ್ ಸ್ಕ್ಯಾನಿಂಗ್ ಮಾಡಬೇಕು. ಜ್ವರ, ನೆಗಡಿ ಇನ್ನಿತರ ಯಾವುದೇ ಸಮಸ್ಯೆ ಇದ್ದರೂ ರಾಜ್ಯಕ್ಕೆ ಪ್ರವೇಶ ನೀಡದೆ ವಾಪಸ್ ಕಳುಹಿಸಬೇಕು ಎಂದರು.
ಆರ್‌ಟಿಪಿಸಿಆರ್ ವರದಿ ಇಲ್ಲದಿದ್ದರೂ ಎರಡು ಲಸಿಕೆ, ಇ-ಪಾಸ್ ತೋರಿಸಿದರೆ ತಮಿಳುನಾಡು ರಾಜ್ಯ ಪ್ರವೇಶ ನೀಡುತ್ತಿದೆ. ಆದರೆ, ಕೆಕ್ಕನಹಳ್ಳ ಚೆಕ್ ಪೋಸ್ಟ್ ಮೂಲಕ ನಮ್ಮ ತಾಲೂಕಿಗೆ ಪ್ರವೇಶಿಸುವವರು ಕಡ್ಡಾಯವಾಗಿ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ತರಬೇಕು ಎಂದು ಸೂಚಿಸಿದರು.
ಇದನ್ನೂ ಓದಿ:ಸರ್ಕಾರಿ ಪಿಯು ಕಾಲೇಜು ಪ್ರವೇಶಕ್ಕೆ ದುಬಾರಿ ಶುಲ್ಕ ವಸೂಲಿ ಸರಿನಾ?
ತಹಶೀಲ್ದಾರ್ ಸಿ.ಜಿ.ರವಿಶಂಕರ್ ಮಾತನಾಡಿ, ಗಡಿ ಮೂಲಕ ಅಂತರಾಜ್ಯ ಸಂಚಾರ ಮಾಡುವ ಶೇ.80ರಷ್ಟು ಪ್ರವಾಸಿಗರು ನೆಗೆಟಿವ್ ವರದಿ
ತರುತ್ತಿದ್ದಾರೆ. ಮಾಹಿತಿ ಇಲ್ಲದ ಕೆಲವೇ ಮಂದಿ ಮಾತ್ರ ಹಾಗೇ ಬರುತ್ತಿದ್ದಾರೆ. ಇಂತವರನ್ನು ವಾಪಸ್ ಕಳುಹಿಸುತ್ತಿದ್ದೇವೆ ಎಂದು ತಿಳಿಸಿದರು.
ತಾಲೂಕು ಪ್ರಭಾರ ಆರೋಗ್ಯಾಧಿಕಾರಿ ಡಾ.ವೆಂಕಟಸ್ವಾಮಿ, ತಾಪಂ ಇಒ ಶ್ರೀಕಂಠರಾಜೇ ಅರಸು ಸೇರಿದಂತೆ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.