ಕೇರಳದಲ್ಲಿ ನಿಫಾ ಸೋಂಕು: ಜಿಲ್ಲೆಯಲ್ಲಿ ಕಟ್ಟೆಚ್ಚರ

ಕೇರಳದಿಂದ ಬಂದವರ ಬಗ್ಗೆ 21 ದಿನಗಳವರೆಗೆ ನಿಗಾ;  ಶಂಕಿತ ರೋಗಿಗಳನ್ನು ಆಸ್ಪತ್ರೆಯಲ್ಲಿ ಪ್ರತ್ಯೇಕಿಸಿ ಚಿಕಿತ್ಸೆ

Team Udayavani, Sep 11, 2021, 1:43 PM IST

ಕೇರಳದಲ್ಲಿ ನಿಫಾ ಸೋಂಕು: ಜಿಲ್ಲೆಯಲ್ಲಿ ಕಟ್ಟೆಚ್ಚರ

ಚಾಮರಾಜನಗರ: ನೆರೆಯಕೇರಳ ರಾಜ್ಯದಲ್ಲಿ ನಿಫಾ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಯಾದ ಚಾಮರಾಜನಗರದಲ್ಲೂ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ.

ಕೇರಳ ರಾಜ್ಯದಿಂದ ಜಿಲ್ಲೆಗೆ ಪ್ರಯಾಣಿಸುವವರಲ್ಲಿ ನಿಫಾ ರೋಗ ಲಕ್ಷಣಗಳು ಕಂಡು ಬಂದಲ್ಲಿ ಅಂತಹವರ ಪ್ರವೇಶವನ್ನು ನಿರ್ಬಂಧಿ ಸಲಾಗುತ್ತದೆ. ಕೇರಳದಿಂದ ಬಂದವರ ಬಗ್ಗೆ 21 ದಿನಗಳವರೆಗೆ ನಿಗಾವಹಿಸ ಲಾಗುತ್ತದೆ. ಈ ಅವಧಿಯಲ್ಲಿ ರೋಗ ಲಕ್ಷಣಗಳು ಕಂಡು ಬಂದರೆ ಅಂತಹ ಶಂಕಿತರ ಪ್ರಕರಣಗಳನ್ನು ಆಸ್ಪತ್ರೆಯಲ್ಲಿ ಪ್ರತ್ಯೇಕಿಸಿ ಚಿಕಿತ್ಸೆ ಕೊಡಿಸಲಾಗುತ್ತದೆ.

ಕೇರಳ ಗಡಿಯನ್ನು ಗುಂಡ್ಲುಪೇಟೆ ತಾಲೂಕು ಹಂಚಿಕೊಂಡಿದ್ದು, ಅಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಲಾಗಿದೆ. ಅಲ್ಲಿನ ತಾಲೂಕು ಆಸ್ಪತ್ರೆಯಲ್ಲಿ
ಪ್ರತ್ಯೇಕ ಐಸೋಲೇಷನ್‌ ಕೊಠಡಿಯನ್ನು ಸಿದ್ಧವಾಗಿರಿಸಲಾಗಿದೆ. ನಿಫಾ ವೈರಸ್‌ ಬಂದ ರೋಗಿಗಳನ್ನು ಉಪಚರಿಸುವಾಗ ಮಾಸ್ಕ್ ಮತ್ತು ಕೈ ಗವಸು (ಗ್ಲೌಸ್‌)ಗಳನ್ನು ಧರಿಸಬೇಕೆಂದು ಸೂಚಿಸಲಾಗಿದೆ. ಸೋಂಕಿತ ವ್ಯಕ್ತಿಗಳನ್ನು ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿರಿಸಲಾಗುತ್ತದೆ. ಆಶಾಹಾಗೂ ಆರೋಗ್ಯ ಕ್ಷೇತ್ರ ಸಿಬ್ಬಂದಿ ಮೂಲಕ ಸರ್ವೇಕ್ಷಣ ಕಾರ್ಯವನ್ನು ಚುರುಕುಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ವಿಶ್ವೇಶ್ವರಯ್ಯ “ಉದಯವಾಣಿ’ಗೆ ತಿಳಿಸಿದರು.

ಗುಂಡ್ಲುಪೇಟೆ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಈ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಜ್ವರ, ಮೈಕೈ ನೋವು, ಬೆವರುವುದು, ವಾಂತಿ, ತಲೆಸುತ್ತು ನಿಫಾ ವೈರಸ್‌ ಸೋಂಕಿತರ ರೋಗ ಲಕ್ಷಣಗಳಾಗಿದ್ದು, ಇಂಥ ರೋಗಲಕ್ಷಣಗಳಿದ್ದವರ ಮೇಲೆ ತೀವ್ರ ನಿಗಾ ವಹಿಸುವಂತೆ ಸೂಚಿಸಲಾಗಿದೆ ಎಂದರು.

ಇದನ್ನೂ ಓದಿ:ಮುಂಬೈ: ನಿರ್ಭಯಾ ರೀತಿ ಅತ್ಯಾಚಾರಕ್ಕೊಳಗಾಗಿದ್ದ ಮಹಿಳೆ ಸಾವು

ಸಾರ್ವಜನಿಕರಲ್ಲಿ ನಿಫಾಕುರಿತು ಅರಿವು ಮೂಡಿಸಿ ಹೋಟೆಲ್‌ ಮತ್ತು ರೆಸಾರ್ಟ್‌ಗಳಿಗೆ ಭೇಟಿ ನೀಡುವ ಕೇರಳ ಪ್ರವಾಸಿಗರ ಮೇಲೆ ನಿಗಾ ವಹಿಸಲಾಗುತ್ತಿದೆ. ಆಶಾ ಕಾರ್ಯಕರ್ತೆಯರು ಮನೆಗಳಿಗೆ ಭೇಟಿ ನೀಡಿ ಸೋಂಕಿನ ಲಕ್ಷಣ ಇರುವ ವ್ಯಕ್ತಿಗಳಿದ್ದರೆ ಅಂಥವರ ಬಗ್ಗೆ ಮಾಹಿತಿಯನ್ನು ವೈದ್ಯಾಧಿಕಾರಿಗಳಿಗೆ ನೀಡುವಂತೆ ಸೂಚಿಸಲಾಗಿದೆ ಎಂದರು.

ಹಂದಿ, ಕುದುರೆ, ನಾಯಿ, ಬೆಕ್ಕುಗಳಂತಹ ಸೋಂಕಿತ ಜಾನುವಾರುಗಳು ಮಧ್ಯಂತರ ಮೂಲಗಳಾಗಿರುವುದರಿಂದ ಇವುಗಳನ್ನು ಪ್ರತ್ಯೇಕ ವಾಗಿ ಇರಿಸಬೇಕಾಗುತ್ತದೆ. ಶಂಕಿತ ವ್ಯಕ್ತಿಯು ಬಳಸುವ ಬಟ್ಟೆ, ಪಾತ್ರೆಗಳು ಹಾಗೂ ಮುಖ್ಯವಾಗಿ ಸ್ನಾನ ಮತ್ತು ಶೌಚಾಲಯದಲ್ಲಿ ಬಳಸುವ ವಸ್ತುಗಳನ್ನು ಪ್ರತ್ಯೇಕವಾ ಗಿಟ್ಟು ಶುಚಿಗೊಳಿಸಬೇಕು. ಹಸ್ತಲಾಘವ ಮಾಡ ಬಾರದು. ಸೋಂಕಿತರ ಸಂಪರ್ಕಕ್ಕೆ ಬಂದನಂತರ ಕೈಗಳನ್ನು ಸ್ವಚ್ಚವಾಗಿ ತೊಳೆದುಕೊಳ್ಳುವಂತೆ ಸೂಚಿಸಲಾಗಿದೆ.

ನೆರವಿಗೆಕರೆ ಮಾಡಿ ಹಂದಿ ಸಾಕಾಣಿಕಾಕೇಂದ್ರಗಳಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು ಹಾಗೂ ಅಲ್ಲಿನ ಸಿಬ್ಬಂದಿ ವೈಯಕ್ತಿಕ ರಕ್ಷಣಾ ಕ್ರಮಗಳನ್ನು ಅನುಸರಿಸಬೇಕು. (ಮಾಸ್ಕ್, ಗ್ಲೌಸ್‌ ಹಾಗೂ ಪಿಪಿಇ ಕಿಟ್‌ ಧರಿಸುವುದು). ಹಂದಿ ಸಾಕಾಣಿಕಾ ವ್ಯಾಪ್ತಿಯಲ್ಲಿ ಬಾವಲಿಗಳು ಹಂದಿಗಳ ಸಂಪರ್ಕಕ್ಕೆ ಬಾರದಂತೆ ಮುಂಜಾಗ್ರತೆ ವಹಿಸಬೇಕು. ಸೋಂಕಿತ ಪ್ರದೇಶಗಳಿಗೆ ಪ್ರಯಾಣ ಮಾಡುವುದನ್ನು ಮುಂದೂಡಬೇಕು. ನೆರವಿಗಾಗಿ 10 ಕ್ಕೆ ಕೆರೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ ತಿಳಿಸಿದ್ದಾರೆ.

ಹಣ್ಣು ತಿನ್ನುವಾಗ ಎಚ್ಚರವಹಿಸಿ: ಇಲಾಖೆ ಸೂಚನೆ
ಎಲ್ಲ ರೀತಿಯ ಹಣ್ಣುಗಳನ್ನು ಚೆನ್ನಾಗಿ ತೊಳೆದು, ಸಿಪ್ಪೆ ಸುಲಿದು ಅಥವಾ ಬೇಯಿಸಿ ತಿನ್ನಬೇಕು. ಜ್ವರ ರೀತಿಯ ಲಕ್ಷಣಗಳು ಕಂಡುಬಂದರೆ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಬೇಕು. ನಿಫಾ ವೈರಸ್‌ ಸೋಂಕಿತ ಬಾವಲಿಗಳು ಕಚ್ಚಿದ ಹಣ್ಣುಗಳನ್ನು ತಿಂದರೆ ಮನುಷ್ಯರಿಗೂ ಈ ಸೋಂಕು ತಗುಲುವುದರಿಂದ ಪ್ರಾಣಿಗಳು ಮತ್ತು ಪಕ್ಷಿಗಳು ಕಚ್ಚಿರುವ ಹಣ್ಣುಗಳನ್ನು ತಿನ್ನಬಾರದು. ಬಾವಲಿಗಳ ಪ್ರವೇಶ ತಪ್ಪಿಸಲು, ತೆರೆದ ಬಾವಿಗಳಿಗೆ ಜಾಲರಿಯನ್ನು ಅಳವಡಿಸಬೇಕು. ಸೋಂಕಿತ ಪ್ರದೇಶಗಳಿಗೆ ಭೇಟಿ ನೀಡುವಾಗ ಪ್ರತಿಬಂಧಕ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು. ರೋಗಿಯ ಶರೀರ ಸ್ರಾವ (ರಕ್ತ, ಜೊಲ್ಲು, ಮೂತ್ರ ಇತ್ಯಾದಿ) ಸೇರದಂತೆ ನೋಡಿಕೊಳ್ಳಬೇಕು. ಹೋಟೆಲ್‌, ಜ್ಯೂಸ್‌ ಅಂಗಡಿಗಳಲ್ಲಿ ಉಪಯೋಗಿಸುವ ಲೋಟ ಮತ್ತು ತಟ್ಟೆಗಳನ್ನು ಬಿಸಿನೀರಿನಲ್ಲಿ ಶುಚಿಗೊಳಿಸಬೇಕು ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದರು.

ಕೇರಳ ಗಡಿಭಾಗದಲ್ಲಿ ಹೈ ಅಲರ್ಟ್‌ಘೋಷಿಸಲಾಗಿದೆ. ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆ ತನಿಖಾಠಾಣೆಯಲ್ಲಿ ಒಳಬರುವ ಹಾಗೂ ಹೊರ ಹೋಗುವ ಪ್ರಯಾಣಿಕರನ್ನು ತಪಾಸಣೆ ನಡೆಸಲಾಗುತ್ತದೆ. ನಿಫಾ ವೈರಸ್‌ ಜಿಲ್ಲೆಗೆ ಹರಡದಂತೆಕಟ್ಟೆಚ್ಚರ ವಹಿಸಲಾಗಿದೆ.
-ಡಾ. ವಿಶ್ವೇಶ್ವರಯ್ಯ, ಡಿಎಚ್‌ಒ,
ಚಾ.ನಗರ

-ಕೆ.ಎಸ್‌. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

Eshwarappa

Shivamogga; ತುರ್ತಾಗಿ ಬಿಜೆಪಿ ಸೇರುವ ಚಿಂತನೆ ಇಲ್ಲ: ಈಶ್ವರಪ್ಪ

Parameshwar

Guarantee Schemeಗಳ ಬಗ್ಗೆ ಬಿಜೆಪಿ ಅಪಪ್ರಚಾರ: ಗೃಹ ಸಚಿವ ಪರಮೇಶ್ವರ್‌

Siruguppa ಹೊಸ ಪಡಿತರ ಚೀಟಿಗಾಗಿ ಸಾರ್ವಜನಿಕರ ಪರದಾಟ

Siruguppa ಹೊಸ ಪಡಿತರ ಚೀಟಿಗಾಗಿ ಸಾರ್ವಜನಿಕರ ಪರದಾಟ

BRT ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆ ಸಾವು

BRT ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆ ಸಾವು

Nothing CMF ನಿಂದ ಫೋನ್, ವಾಚ್ , ಬಡ್ಸ್ ಬಿಡುಗಡೆ

Nothing CMF ನಿಂದ ಫೋನ್, ವಾಚ್ , ಬಡ್ಸ್ ಬಿಡುಗಡೆ

Russiya-Modi

Modi Russia Visit: ರಷ್ಯಾದ ಮಾಸ್ಕೊಗೆ ಬಂದಿಳಿದ ಪ್ರಧಾನಿ ಮೋದಿ

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BRT ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆ ಸಾವು

BRT ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆ ಸಾವು

Gundlupete: ಅಪರಿಚಿತ ವಾಹನ‌ ಡಿಕ್ಕಿ ಹೊಡೆದು ಇಬ್ಬರ ಮೃತ್ಯು…

Gundlupete: ಅಪರಿಚಿತ ವಾಹನ‌ ಡಿಕ್ಕಿ ಹೊಡೆದು ಇಬ್ಬರ ಮೃತ್ಯು…

1—–wewqewq

Gundlupete; ಅಂತ್ಯಕ್ರಿಯೆಗೆ ತೆರಳಿದ ವೇಳೆ ಹೆಜ್ಜೇನು ದಾಳಿ: 19 ಮಂದಿ ಆಸ್ಪತ್ರೆಗೆ

Road Mishap: ಕೆಎಸ್‌ಆರ್‌ಟಿಸಿ ಬಸ್ -ದ್ವಿಚಕ್ರ ವಾಹನ ಢಿಕ್ಕಿ ; ಇಬ್ಬರ ಸಾವು

Road Mishap: ಕೆಎಸ್‌ಆರ್‌ಟಿಸಿ ಬಸ್ -ದ್ವಿಚಕ್ರ ವಾಹನ ಢಿಕ್ಕಿ; ಇಬ್ಬರ ಸಾವು

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

1-soorya

Tulu Nadu ನಂಟು; ಮಂಗಳೂರಿನಲ್ಲಿ ಸೂರ್ಯಕುಮಾರ್‌ ದಂಪತಿ

Eshwarappa

Shivamogga; ತುರ್ತಾಗಿ ಬಿಜೆಪಿ ಸೇರುವ ಚಿಂತನೆ ಇಲ್ಲ: ಈಶ್ವರಪ್ಪ

1-wddsadas

Shivamogga; ತಳ್ಳುವ ಗಾಡಿಯವನ ಮೇಲೆ ಪೊಲೀಸ್ ಹಲ್ಲೆ ಆರೋಪ: ವರ್ತಕರ ಆಕ್ರೋಶ

Parameshwar

Guarantee Schemeಗಳ ಬಗ್ಗೆ ಬಿಜೆಪಿ ಅಪಪ್ರಚಾರ: ಗೃಹ ಸಚಿವ ಪರಮೇಶ್ವರ್‌

1-honda

Dandeli; ಇದು ಅತ್ಯಧಿಕ ಹೊಂಡಗಳ ದಾಖಲೆಗೆ ಪಾತ್ರವಾಗಬಹುದಾದ ರಸ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.