ಸ್ಥಳೀಯರಲ್ಲಿ ಯಾರಿಗೇ ಟಿಕೆಟ್ ಕೊಟ್ಟರೂ ಒಗ್ಗಟ್ಟಿನಿಂದ ಕೆಲಸ : ಬಿಜೆಪಿ ಆಕಾಂಕ್ಷಿಗಳು

ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಬಿಜೆಪಿಯಲ್ಲಿ ಗೊಂದಲ ಮೂಡಿಸುತ್ತಿದ್ದಾರೆ....

Team Udayavani, Sep 26, 2022, 6:58 PM IST

1-sdsdasd

ಚಾಮರಾಜನಗರ: ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಅನ್ನು ಸ್ಥಳೀಯರಿಗೇ ನೀಡಬೇಕು. ಹೊರಗಿನಿಂದ ಬಂದವರಿಗೆ ನೀಡಬಾರದು. ನಮ್ಮಲ್ಲಿ ಯಾರಿಗೇ ಕೊಟ್ಟರೂ ಅವರ ಗೆಲುವಿಗೆ ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ ಎಂದು ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾದ ಮಲ್ಲೇಶ್, ನಿಜಗುಣರಾಜು, ಎಂ. ರಾಮಚಂದ್ರ, ಡಾ. ಎ.ಆರ್. ಬಾಬು ಹೇಳಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸೋಮವಾರ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ರಾಜ್ಯ ಭೂಸೇನಾ ನಿಗಮದ ಅಧ್ಯಕ್ಷ ರುದ್ರೇಶ್ ಅವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರಕ್ಕೆ ಬಿಜೆಪಿ ಆಕಾಂಕ್ಷಿ ಎಂದು ಹೇಳಿಕೆ ನೀಡುವ ಮೂಲಕ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಜನರ ಬಳಿ ಇಂತಹ ಹೇಳಿಕೆ ನೀಡುತ್ತಿರುವುದು ಖಂಡನೀ ಯ ಈ ಸಂಬಂಧ ಪಕ್ಷದ ವರಿಷ್ಠರನ್ನು ಭೇಟಿಯಾಗಿ ದೂರು ನೀಡಲಾಗುವುದು ಎಂದು ತಿಳಿಸಿದರು.

ಸ್ಥಳೀಯವಾಗಿ 6-7 ಆಕಾಂಕ್ಷಿಗಳಿದ್ದು ಇವರಲ್ಲಿ ಯಾರಿಗೆ ಟಿಕೆಟ್ ನೀಡಿದರೂ ಒಗ್ಗಟ್ಟಿನಿಂದ ಕೆಲಸ ಮಾಡಿ ಗೆಲ್ಲಿಸುತ್ತೇವೆ. ಶಾಸಕರು ಸ್ಥಳೀಯರಿದ್ದರೆ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯ. ರುದ್ರೇಶ್ ಅವರು ರಾಮನಗರದವರಾಗಿದ್ದು ಆ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲ್ಲಲಿ. ಹಣ ಬಲದಿಂದ ಸ್ಪರ್ಧಿಸಿ ಗೆಲ್ಲುತ್ತೇನೆ ಎಂಬ ಮನಸ್ಥಿತಿ ಇದ್ದರೆ ಅದನ್ನು ಬಿಡಬೇಕು ಎಂದರು. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ರುದ್ರೇಶ್ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಲಾಗುವುದು. ರುದ್ರೇಶ್ ಭ್ರಷ್ಟಾಚಾರದಲ್ಲಿ ತೊಡಗಿದ್ದು ಕೂಡಲೇ ಅವರನ್ನು ನಿಗಮ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಬೇಕು ಎಂದು ಹೇಳಿದರು.

ಕಾಡಾ ಅಧ್ಯಕ್ಷ ನಿಜಗುಣರಾಜು ಮಾತನಾಡಿ, ರುದ್ರೇಶ್ ಕಳೆದ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಸ್ಪರ್ಧಿಸಿ ಠೇವಣಿ ಕಳೆದುಕೊಂಡಿದ್ದಾರೆ. ಠೇವಣಿ ಉಳಿಸಿಕೊಂಡು ಆ ನಂತರ ಬೇರೆ ಕ್ಷೇತ್ರಗಳಿಗೆ ಹೋಗಿ ಸ್ಪರ್ಧಿಸಲಿ. ಈ ಸಂಬಂಧ ಈಗಾಗಲೇ ಪಕ್ಷದ ವರಿಷ್ಠರ ಜೊತೆ ಮಾತನಾಡಿದ್ದು ಕೂಡಲೇ ಪಕ್ಷದ ವರಿಷ್ಠರು ರುದ್ರೇಶ್ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಯಾರೋ ಎಲ್ಲಿಗೋ ಬಂದು ತಾವೇ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳುತ್ತಿರುವುದು ಸರಿಯಲ್ಲ. ಪಕ್ಷದ ಮುಖಂಡರು ಜಿಲ್ಲಾ ಬಿಜೆಪಿ ಕಚೇರಿಗೆ ಆಗಮಿಸಬೇಕು. ಜಿಲ್ಲಾಧ್ಯಕ್ಷರು, ಮಂಡಲ ಅಧ್ಯಕ್ಷರನ್ನು ಭೇಟಿಯಾಗಬೇಕು. ಪಕ್ಷದ ಸಂಘಟನೆ ಬಗ್ಗೆ ಚರ್ಚಿಸಬೇಕು ಎಂದರು.

ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ. ರಾಮಚಂದ್ರ ಮಾತನಾಡಿ, ಸ್ಥಳೀಯ ಅಭ್ಯರ್ಥಿಗಳಿಗಿಂತ ಹೊರಗಿನಿಂದ ಬಂದವರು ಪ್ರತಿಭಾವಂತರೇನಲ್ಲ. ಸ್ಥಳೀಯರಾದ ನಾವು ಇಲ್ಲಿನ ಜನರ ಕಷ್ಟಸುಖಗಳಿಗೆ ಸ್ಪಂದಿಸಿ ಕೆಲಸ ಮಾಡುತ್ತಿದ್ದೇವೆ. ಹಾಗಾಗಿ ಸ್ಥಳೀಯರಿಗೆ ಟಿಕೆಟ್ ನೀಡುವುದು ಸೂಕ್ತ. ಹೊರಗಿನವರಿಗೆ ಟಿಕೆಟ್ ನೀಡಬಾರದು ಎಂದು ಒತ್ತಾಯಿಸಿದರು.

ಆಯಿಷ್ ಆಡಳಿತ ಮಂಡಳಿ ಸದಸ್ಯ ಡಾ. ಎ.ಆರ್. ಬಾಬು ಮಾತನಾಡಿ, ಕ್ಷೇತ್ರದಲ್ಲಿ ಬಿಜೆಪಿ ಸಂಘಟನೆ ಮಾಡಿದ್ದೇವೆ. ಪಕ್ಷವನ್ನು ಬಲಪಡಿಸಲು ಶ್ರಮಿಸಿದ್ದೇವೆ. ನಮ್ಮಲ್ಲಿ ಯಾರಿಗೇ ಟಿಕೆಟ್ ಕೊಟ್ಟರೂ ಒಗ್ಗಟ್ಟಿನಿಂದ ಗೆಲುವಿಗೆ ಶ್ರಮಿಸುತ್ತೇವೆ ಎಂದರು. ಸುದ್ದಿಗೋಷ್ಠಿಯಲ್ಲಿ ಜಿ.ಪಂ. ಮಾಜಿ ಸದಸ್ಯ ಸಿ.ಎನ್.ಬಾಲರಾಜ್ ಇದ್ದರು.

ಮಲ್ಲಿಕಾರ್ಜುನಪ್ಪ, ನಾಗಶ್ರೀ ಗೈರು
ಸೋಮವಾರ, ನಗರದಲ್ಲಿ ಬಿಜೆಪಿಯ ಪ್ರಮುಖ ಟಿಕೆಟ್ ಆಕಾಂಕ್ಷಿಗಳು ಕರೆದಿದ್ದ ಸುದ್ದಿಗೋಷ್ಠಿಯ ಆಹ್ವಾನದಲ್ಲಿ ಮುಖಂಡರಾದ ಪ್ರೊ. ಕೆ.ಆರ್. ಮಲ್ಲಿಕಾರ್ಜುನಪ್ಪ ಹಾಗೂ ನಾಗಶ್ರೀ ಪ್ರತಾಪ್ ಅವರ ಹೆಸರಿತ್ತು. ಆದರೆ ಅವರಿಬ್ಬರೂ ಗೈರು ಹಾಜರಾಗಿದ್ದರು.

ಈ ಬಗ್ಗೆ ಪ್ರಶ್ನಿಸಿದಾಗ, ಇಬ್ಬರೂ ಅನಿವಾರ್ಯ ಕಾರಣಗಳಿಂದ ಬಂದಿಲ್ಲ. ಇಬ್ಬರೂ ಊರಿನಲ್ಲಿಲ್ಲ. ಹಾಗಾಗಿ ಬಂದಿಲ್ಲ. ಸುದ್ದಿಗೋಷ್ಠಿಗೆ ತಮ್ಮ ಸಹಮತವಿದೆ ಎಂದು ತಿಳಿಸಿದ್ದಾರೆ ಎಂದು ನಿಜಗುಣರಾಜು ಹೇಳಿದರು.

ಈಗ ಹೊರಗಿನವರಿಗೆ ಟಿಕೆಟ್ ನೀಡುತ್ತಾರೆಂದು ಒಂದಾಗಿದ್ದೇವೆ ಎನ್ನುತ್ತಿದ್ದೀರಿ. ನಾಳೆ ನಿಮ್ಮಲ್ಲೇ ಒಬ್ಬರಿಗೆ ಟಿಕೆಟ್ ನೀಡಿದರೂ ನೀವು ಅವರ ಪರವಾಗಿ ಕೆಲಸ ಮಾಡುವುದಿಲ್ಲ ಎಂಬ ಆರೋಪಗಳಿವೆಯಲ್ಲ? ಎಂದು ಪ್ರಶ್ನಿಸಿದಾಗ, ಪ್ರತಿ ಚುನಾವಣೆಯಲ್ಲೂ ನಾವು ಪಕ್ಷದ ಅಭ್ಯರ್ಥಿಯ ಪರವಾಗಿ ನಮ್ಮ ಹಣ ಹಾಕಿಕೊಂಡು ಕೆಲಸ ಮಾಡಿದ್ದೇವೆ ಎಂದು ಮಲ್ಲೇಶ್ ಹೇಳಿದರು.

ಜನರು ಬದಲಾವಣೆ ಬಯಸಿದ್ದಾರೆ
ಕ್ಷೇತ್ರ ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ಜನರ ಸಮಸ್ಯೆಗೆ ಸ್ಪಂದನೆಯಿಲ್ಲ ಎಂಬ ನೋವಿದೆ. ಹಾಗಾಗಿ ಈ ಬಾರಿ ಬದಲಾವಣೆ ಬಯಸಿದ್ದಾರೆ. ನಾವೆಲ್ಲ ಒಗ್ಗಟ್ಟಾಗಿದ್ದೇವೆ ಎಂದು ಜನರಿಗೆ ತಿಳಿಸುವುದಕ್ಕಾಗೇ ಈ ಸುದ್ದಿಗೋಷ್ಠಿ ಕರೆದಿದ್ದೇವೆ ಎಂದು ಕಾಡಾ ಅಧ್ಯಕ್ಷ ನಿಜಗುಣರಾಜು ತಿಳಿಸಿದರು.

ಟಾಪ್ ನ್ಯೂಸ್

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.