ಹಿರಿಯ ನಾಗರಿಕರ ಬಗ್ಗೆ ನಿರ್ಲಕ್ಷ್ಯ ಬೇಡ
Team Udayavani, Oct 12, 2019, 3:00 AM IST
ಚಾಮರಾಜನಗರ: ಪ್ರಸ್ತುತ ದಿನಗಳಲ್ಲಿ ಹಿರಿಯ ನಾಗರಿಕರು ಹೆಚ್ಚಿನ ನಿರ್ಲಕ್ಷ್ಯಕ್ಕೆ ಒಳಗಾಗುತ್ತಿರುವುದರಿಂದ ಅವರಿಗೆ ಆರ್ಥಿಕ ಭದ್ರತೆ ಹಾಗೂ ಸಾಮಾಜಿಕ ರಕ್ಷಣೆ ಒದಗಿಸುವತ್ತ ಗಮನ ನೀಡಬೇಕಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ಬಸವರಾಜ ಅಭಿಪ್ರಾಯಪಟ್ಟರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ವಿಎಜುಕೇಷನ್ ಸೊಸೈಟಿಯ ಸಹಯೋಗದಲ್ಲಿ ನಗರದ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿರುವ ವ್ಯಾಜ್ಯ ಪೂರ್ವ ಪರ್ಯಾಯ ಪರಿಹಾರ ಕೇಂದ್ರದಲ್ಲಿ ನಡೆದ ಹಿರಿಯ ವಿಶ್ವ ನಾಗರಿಕರ ದಿನಾಚರಣೆ 2019 ಹಾಗೂ ಕಾನೂನು ಅರಿವು ಕಾರ್ಯಕ್ರಮ ಉದ್ಭಾಟಿಸಿ ಮಾತನಾಡಿದರು.
ನ್ಯಾಯಾಲಯಕ್ಕೆ ಹೋಗುವ ಅಗತ್ಯವಿಲ್ಲ: ಮಕ್ಕಳಿಂದ ನಿರ್ಲಕ್ಷ್ಯಕ್ಕೆ ಒಳಗಾಗುವ ಹಿರಿಯ ನಾಗರಿಕರು ನೇರವಾಗಿ ಉಪ ವಿಭಾಗಾಧಿಕಾರಿಯವರಿಗೆ ದೂರು ನೀಡಬಹುದು. ನ್ಯಾಯಾಲಯಕ್ಕೆ ಹೋಗುವ ಅಗತ್ಯವಿರುವುದಿಲ್ಲ. ಉಪ ವಿಭಾಗಾಧಿಕಾರಿಗಳು ಪ್ರಕರಣದ ವಿಚಾರಣೆ ನಡೆಸಿ ಮಕ್ಕಳಿಂದ ಪೋಷಕರಿಗೆ ಜೀವನಾಂಶ ನೀಡುವಂತೆ ಆದೇಶಿಸಲು ಅವಕಾಶವಿದೆ ಎಂದರು.
ಕಾನೂನು ನೆರವು ಪಡೆಯಿರಿ: ಪೋಷಕರ ಹೆಸರಿನಲ್ಲಿದ್ದ ಮನೆ ಅಥವಾ ಆಸ್ತಿಯನ್ನು ಮಕ್ಕಳು ತಮ್ಮ ಹೆಸರಿಗೆ ಮಾಡಿಸಿಕೊಂಡಿದ್ದು, ಅಂತಹ ಮಕ್ಕಳು ಪೋಷಕರನ್ನು ಮನೆಯಿಂದ ಹೊರ ಹಾಕಿದ್ದರೆ, ಮಕ್ಕಳಿಂದ ಆಸ್ತಿಯನ್ನು ಮರಳಿ ಪೋಷಕರ ಹೆಸರಿಗೆ ನೀಡಲು ಅವಕಾಶವಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಹಿರಿಯ ನಾಗರಿಕರು ಕಾನೂನಿನ ಅರಿವು ಮತ್ತು ನೆರವನ್ನು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ದೌರ್ಜನ್ಯಕ್ಕೆ ಕಡಿವಾಣ ಹಾಕಿ: ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಅನಿತಾ .ಬಿ ಹದ್ದಣ್ಣನವರ್ ಮಾತನಾಡಿ, ಭಾರತ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿದ್ದು, ಶೇ.8.5 ರಷ್ಟು ಹಿರಿಯ ನಾಗರಿಕರನ್ನು ಹೊಂದಿದೆ. ಇತ್ತೀಚಿನ ದಿನಗಳಲ್ಲಿ ಹಿರಿಯರು ಖನ್ನತೆ ಹಾಗೂ ದೌರ್ಜನ್ಯಕ್ಕೆ ಒಳಗಾಗುತ್ತಿದ್ದು ಅವರ ರಕ್ಷಣೆಗೆ ನಮ್ಮ ಪೊಲೀಸ್ ಇಲಾಖೆ ಸದಾ ಸಿದ್ಧವಿರುತ್ತದೆ ಎಂದರು.
ಹಿರಿಯರ ಗೌರವಿಸಿ: ಸಂಸ್ಕೃತಿ- ಸಂಪ್ರದಾಯಗಳಿಗೆ ಹೆಚ್ಚು ಬೆಲೆ ಕೊಡುವ ನಮ್ಮ ದೇಶದಲ್ಲಿ ಹಿರಿಯ ನಾಗರಿಕರನ್ನು ನಿರ್ಲಕ್ಷಿಸುವ ಮನೋಭಾವ ತರವಲ್ಲ. ಅನುಭವವಿರುವ ಹಿರಿಯ ನಾಗರಿಕರ ಮಾರ್ಗದರ್ಶನ ನಮಗೆ ಬೇಕಾಗುತ್ತದೆ. ಹೀಗಾಗಿ ಅವರ ಗೌರವಕ್ಕೆ ಧಕ್ಕೆ ಬಾರದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ತಿಳಿಸಿದರು. ವಕೀಲರಾದ ಕೆ.ಪಿ ನಾಗರಾಜು ಮತ್ತು ಎಂ.ಆರ್.ಸವಿತಾ ಹಿರಿಯ ನಾಗರಿಕ ಕಾಯಿದೆ ಕುರಿತು ಉಪನ್ಯಾಸ ನೀಡಿದರು. ಜಿಲ್ಲಾ ವಕೀಲರ ಸಂಫದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ ವಿಶಾಲಾಕ್ಷಿ, ಮಹಿಳಾ ಮತ್ತು ಮಕ್ಕಳ ಅಭಿವೃಧಿœ ಇಲಾಖೆಯ ಉಪ ನಿರ್ದೇಶಕ ಬಸವರಾಜು, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ಸೋಮಶೇಖರ್, ಬಾಲ ನ್ಯಾಯ ಮಂಡಳಿ ಸದಸ್ಯ ಟಿ.ಜೆ ಸುರೇಶ್, ಹಿರಿಯ ನಾಗರಿಕ ಸಹಾಯವಾಣಿಯ ಪ್ರಕಾಶ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.