ಕೇಬಲ್ ನಿಯಮ ಜಾರಿಗೆ ಸೂಚನೆ
Team Udayavani, Dec 7, 2019, 12:24 PM IST
ಚಾಮರಾಜನಗರ: ಕೇಬಲ್ ಟೆಲಿವಿಷನ್ ನೆಟ್‌ವರ್ಕ್ ಅಧಿನಿಯಮವನ್ನು ಪರಿಣಾಮಕಾರಿಯಾಗಿ ಜಿಲ್ಲೆಯಲ್ಲಿ ಜಾರಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಕೇಬಲ್ ಟಿ.ವಿ. ನೆಟ್‌ವರ್ಕ್ ಅಧಿನಿಯಮ ಕುರಿತ ಮೇಲ್ವಿಚಾರಣಾ ಹಾಗೂ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಮಾತನಾಡಿ, ಕೇಬಲ್‌ಟೆಲಿವಿಷನ್ ನೆಟ್‌ವರ್ಕ್ ಅಧಿನಿಯಮ ಗಳಡಿ ನಿಗದಿಪಡಿಸಿದ ಅಂಶಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಸಾರ್ವಜನಿಕ ವ್ಯವಸ್ಥೆ ಅಥವಾ ಯಾವುದೇ ಸಮುದಾಯಕ್ಕೆ ಭಂಗ, ಪ್ರಚೋದನೆ ಮಾಡದಂತೆ ಕೇಬಲ್ ಟೆಲಿವಿಷನ್ ಚಾನಲ್‌ಗಳು ಪ್ರಸರಣವಿರಬೇಕೇದರು.
ಜಿಲ್ಲಾಮಟ್ಟದಲ್ಲಿ ದೂರು ಕೋಶವಾಗಿ ನಿರ್ವಹಣೆ ಮಾಡಬೇಕು. ಈ ಬಗ್ಗೆ ವ್ಯಾಪಕವಾಗಿ ತಿಳಿಸುವಂತಾಗಬೇಕು. ಕೇಬಲ್ ಟಿ.ವಿ ನೆಟ್‌ವರ್ಕ್ ನಿಯಮ ಗಳನ್ನು ಉಲ್ಲಂ ಸಿದ ಪ್ರಕರಣಗಳು, ದೂರುಗಳನ್ನು ಪರಿಶೀಲಿಸಬೇಕು. ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಿ ಪರಿಶೀಲಿಸಬೇಕು ಎಂದು ತಿಳಿಸಿದರು.
ಜಾಹೀರಾತು ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ: ಸ್ಥಳೀಯವಾಗಿ ಪ್ರಸಾರ ಮಾಡಿದ ಕಾರ್ಯಕ್ರಮ, ಜಾಹೀರಾತು ಸಂಬಂಧದ ದೂರುಗಳನ್ನು ಸ್ವೀಕರಿಸ ಬೇಕು. ಕೇಬಲ್ ಟೆಲಿವಿಷನ್ ನೆಟ್‌ವರ್ಕ್ ಆ್ಯಕ್ಟ್ ಅಂಶಗಳ ಬಗ್ಗೆ ಹೆಚ್ಚು ಮನವರಿಕೆ ಮಾಡಬೇಕು. ಕಾರ್ಯಕ್ರಮ ಹಾಗೂ ಜಾಹೀರಾತು ಸಂಹಿತೆ ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ನಿಷ್ಪಕ್ಷಪಾತವಾಗಿ ಕೇಬಲ್ ಟೆಲಿವಿಷನ್ ಚಾನಲ್‌ಗಳು ಪ್ರಸಾರ ಮಾಡುವಂತೆ ನಿಗಾವಹಿಸಬೇಕು. ಯಾವುದೇ ಉಲ್ಲಂಘನೆ, ಗಂಭೀರತೆ ಕಂಡುಬಂದಲ್ಲಿ ಮುಂದಿನ ಕ್ರಮಕ್ಕಾಗಿ ಗಮನಕ್ಕೆ ತರಬೇಕೆಂದು ಹೇಳಿದರು.
ಸಭೆಯಲ್ಲಿ ಡಿವೈಎಸ್‌ಪಿ ಮೋಹನ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಎನ್. ಎಂ.ಸರಸ್ವತಿ, ಬಾಲ ನ್ಯಾಯ ಮಂಡಳಿ ಸದಸ್ಯ ಟಿ.ಜೆ. ಸುರೇಶ್, ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲೆ ಎಂ.ಆರ್.ಸುಮತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕನಿರ್ದೇಶಕ ಆರ್. ರಾಜು, ಸಹಾಯಕ ನಿರ್ದೇಶಕ ಎ.ರಮೇಶ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ
MUST WATCH
ಹೊಸ ಸೇರ್ಪಡೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.