ಶೀಘ್ರ ರಸ್ತೆ ಬದಿ ಅಂಗಡಿಗಳ ತೆರವಿಗೆ ಸೂಚನೆ
Team Udayavani, Dec 13, 2019, 12:32 PM IST
ಹನೂರು: ರಸ್ತೆ ಬದಿ ಮತ್ತು ಅಂಗಡಿ ಮಳಿಗೆಗಳ ಮುಂಭಾಗ ಹೆಚ್ಚಿನ ಸ್ಥಳಾವಕಾಶ ಆಕ್ರಮಿಸಿ ವ್ಯಾಪಾರ ನಡೆಸುತ್ತಿದ್ದ ವ್ಯಾಪಾರಿಗಳಿಗೆ 2 ದಿನಗಳಲ್ಲಿ ಹೆಚ್ಚುವರಿ ಸ್ಥಳ ತೆರವು ಮಾಡುವಂತೆ ಪಪಂ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಹನೂರು ಪಪಂ ವ್ಯಾಪ್ತಿಯ ಖಾಸಗಿ ಬಸ್ ನಿಲ್ದಾಣದ ಸಮೀಪ, ಮಲೆ ಮಹದೇಶ್ವರ ಬೆಟ್ಟ ರಸ್ತೆ ಮತ್ತು ಬಂಡಳ್ಳಿ ರಸ್ತೆಗಳಲ್ಲಿ ಅಕ್ರಮವಾಗಿ ಪೆಟ್ಟಿಗೆ ಅಂಗಡಿ ನಿರ್ಮಾಣ ಮಾಡಿ ವ್ಯಾಪಾರ ಮಾಡುತ್ತಿದ್ದಾರೆ. ಇದರಿಂದ ಪಾದಚಾರಿಗಳು ಮತ್ತು ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು ಕೂಡಲೇ ಕ್ರಮವಹಿಸುವಂತೆ ಹಲವಾರು ದೂರು ಕೇಳಿ ಬಂದಿದ್ದವು
ಈ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಪಪಂ ಅಧಿಕಾರಿಗಳು ಪೊಲೀಸ್ ಬಂದೋಬಸ್ತ್ನಲ್ಲಿ ಪೆಟ್ಟಿಗೆ ಅಂಗಡಿ, ತಳ್ಳುವ ಗಾಡಿ, ಅಂಗಡಿ ಮುಂದೆ ಶೀಟು ಅಳವಡಿಸಿ ವ್ಯಾಪಾರ ಮಾಡುತ್ತಿರುವುದನ್ನು ತೆರವುಗೊಳಿಸಲು ಮುಂದಾಗಿದ್ದರು. ಈ ವೇಳೆ ಬೀದಿಬದಿ ವ್ಯಾಪಾರಿಗಳು ಮತ್ತು ಮಳಿಗೆ ವ್ಯಾಪಾರಿಗಳು ತೀವ್ರ ವಿರೋಧ ವ್ಯಕ್ತಪಡಿಸಿದರು. ಇದರಿಂದ ವಿಚಲಿತರಾದ ಅಧಿಕಾರಿಗಳು, ಮುಂದಿನ 2 ದಿನಗಳಲ್ಲಿ ತೆರವು ಮಾಡುವಂತೆ ಸೂಚನೆ ನೀಡಿ ತೆರಳಿದರು.
ವ್ಯಾಪಾರಸ್ಥರ ಪರ ನಿಂತ ಸದಸ್ಯರು: ಇದೇ ವೇಳೆ ಪಪಂ ಕೆಲ ಸದಸ್ಯರು ವ್ಯಾಪಾರಸ್ಥರ ಪರ ನಿಂತು, ವ್ಯಾಪಾರಿಗಳಿಗೆ ತೊಂದರೆ ನೀಡುವ ಬದಲು ಸಾರ್ವಜನಿಕರಿಗೆ ಅವಶ್ಯಕವಾಗಿರುವ ಇ-ಸ್ವತ್ತು, ಉದ್ದಿಮೆ ಪರವಾನಗಿ, ಖಾತೆ ಬದಲಾವಣೆ, ಜನನ-ಮರಣ ಪ್ರಮಾಣ ಪತ್ರಗಳಂತಹ ಕೆಲಸಕ್ಕೆ ಒತ್ತು ನೀಡಿ ಎಂದು ಕಿಡಿಕಾರಿದರು.
ಎರಡು ವರ್ಷದಿಂದ ಮಳಿಗೆಗಳು ಹರಾಜಾಗದೇ ಹಾಗೇಯೇ ವ್ಯರ್ಥವಾಗಿ ಬಿದ್ದಿವೆ. ಮೊದಲು ಇದಕ್ಕೆ ಕ್ರಮವಹಿಸಿ ಎಂದರು. ಪಪಂ ಸದಸ್ಯರ ಈ ನಡೆಯಿಂದ ಬೇಸತ್ತ ಅಧಿಕಾರಿಗಳು ಬಂದ ದಾರಿಗೆ ಸುಂಕವಿಲ್ಲವೆಂಬಂತೆ ಬರಿಗೈಯಲ್ಲಿ ವಾಪಸ್ಸಾದರು. ಚುನಾವಣೆ ಬಹಿಷ್ಕಾರದ ಎಚ್ಚರಿಕೆ: ಸ್ಥಳೀಯ ಸಂಸ್ಥೆಗಳಲ್ಲಿ ವ್ಯಾಪಾರ ನಡೆಸುವವರ ಸಂರಕ್ಷಣೆ ಮತ್ತು ಹಿತದೃಷ್ಟಿಯಿಂದ ಪಟ್ಟಣದಲ್ಲಿ ಬೀದಿ ಬದಿ ವ್ಯಾಪಾರಿಗಳ ಸಮಿತಿ ರಚಿಸಲು ಸಹಕಾರ ಇಲಾಖೆ ಡಿ.4 ರಂದು ಆದೇಶ ಹೊರಡಿಸಿ ಡಿ.9 ರಿಂದ ಡಿ.11ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಿತ್ತು. ಈ ಹಿನ್ನೆಲೆ ನಾಲ್ಕು ಜನ ನಾಮಪತ್ರ ಸಲ್ಲಿಸಿದ್ದರು. ಆದರೆ, ಪಪಂ ಅಧಿಕಾರಿಗಳ ಈ ದಿಢೀರ್ ನಿರ್ಧಾರದಿಂದಾಗಿ ಕಂಗಾಲಾದ ಬೀದಿಬದಿ ವ್ಯಾಪಾರಿಗಳು ನಮಗೆ ಪುನರ್ವಸತಿ ಕಲ್ಪಿಸಿ ಸೂಕ್ತ ಸ್ಥಳಾವಕಾಶ ಗುರುತಿಸಿ ಕೊಡುವವರೆಗೂ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ನಾಮಪತ್ರ ಹಿಂಪಡೆಯಲು ತೀರ್ಮಾನ ಕೈಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ
Kollegala: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ
New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.