ಕರ್ತವ್ಯಕ್ಕೆ ಅಡ್ಡಿ: ಗ್ರಾಪಂ ಸದಸ್ಯನ ವಿರುದ್ಧ ಪ್ರತಿಭಟನೆ

Team Udayavani, Nov 20, 2021, 2:57 PM IST

15protest

ಪಿರಿಯಾಪಟ್ಟಣ: ತಾಲೂಕು ಆಡಳಿತ ಭವನದ ಶಿರಸ್ತೇದಾರ್‌ ಕಚೇರಿಯಲ್ಲಿ ಗಲಾಟೆ ಮಾಡಿದ ಕಾರಣಕ್ಕೆ ಗ್ರಾಪಂ ಸದಸ್ಯರೊಬ್ಬರ ವಿರುದ್ಧ ತಹಶೀಲ್ದಾರ್‌ ಕಚೇರಿಯ ಸಿಬ್ಬಂದಿ ಹಾಗೂ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಪೊಲೀಸರಿಗೆ ದೂರು ನೀಡಿರುವ ಘಟನೆ ನಡೆಯಿತು.

ಪಟ್ಟಣದ ತಾಲೂಕು ಆಡಳಿತದ ಭವನದಲ್ಲಿ ಶಿರಸ್ತೇದಾರ್‌ ಎನ್‌.ನಂದಕುಮಾರ್‌ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಮುತ್ತಿನಮುಳಸೋಗೆ ಗ್ರಾಮದ ಎಂ.ಬಿ.ಶಿವಕುಮಾರ್‌ ಹಾಗೂ ಆತನ ಬೆಂಬಲಿಗರು ಕರ್ತವ್ಯ ನಿರ್ವಹಿಸುತ್ತಿದ್ದ ಸ್ಥಳದಲ್ಲಿ ಕಡತದ ಬಗ್ಗೆ ವಿಚಾರಿಸಿ ಮಾಹಿತಿ ಕೇಳಿದ್ದಾರೆ. ಈ ವೇಳೆ ಇವರಿಗೆ ವಿನಾಕಾರಣ ಮಾತನಾಡಿ ಕರ್ತವ್ಯಕ್ಕೆ ಅಡಿಪಡಿಸಿದ್ದಲ್ಲದೆ ಟೇಬಲ್‌ ಮೇಲಿದ್ದ ಕಡತಗಳನ್ನು ಬಿಸಾಡಿ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುತ್ತಾರೆ ಎಂದು ಆರೋಪಿಸಿ ಸರಕಾರಿ ನೌಕರರ ಸಂಘದ ಸದಸ್ಯರು ಮತ್ತು ತಾಲೂಕು ಆಡಳಿತ ಭವನದ ನೌಕರರು ಭವನದ ಎದುರು ಪ್ರತಿಭಟಿಸಿದರು.

ಈ ಬಗ್ಗೆ ಶಿರಸ್ತೇದಾರ್‌ ಎನ್.ನಂದಕುಮಾರ್‌, ನೌಕರರ ಸಂಘಕ್ಕೆ ದೂರು ನೀಡಿದ್ದಾರೆ. ಎಂ.ಬಿ.ಶಿವಕುಮಾರ್‌ ಹಾಗೂ ಆತನ ಸಂಗಡಿಗರನ್ನು ಕೂಡಲೇ ಬಂಧಿಸಬೇಕು ಮತ್ತು ಇವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ರಕಾರಿ ನೌಕರರ ಸಂಘದ ಅಧ್ಯಕ್ಷ ಮೋಹನ್‌ಕುಮಾರ್‌ ಮತ್ತು ಖಜಾಂಜಿ ಅಣ್ಣೇಗೌಡ, ಪಿರಿಯಾಪಟ್ಟಣ ಪೊಲೀಸ್‌ ಠಾಣೆಗೆ ದೂರು ನೀಡಿದ್ಧಾರೆ. ತಹಶೀಲ್ದಾರ್‌ ಕೆ.ಚಂದ್ರಮೌಳಿಗೆ ಮನವಿ ಪತ್ರ ನೀಡಿ, ವ್ಯಕ್ತಿಯನ್ನು ಬಂಧಿಸುವವರೆಗೂ ಕಪ್ಪುಪಟ್ಟಿಧರಿಸಿ ಕರ್ತವ್ಯ ನಿರ್ವಹಿಸುವುದಾಗಿ ತಿಳಿಸಿದರು.

ತಾಲೂಕು ಆಡಳಿತ ಭವನದ ಎದುರು ಗ್ರಾಪಂ ಸದಸ್ಯ ಎಂ.ಬಿ.ಶಿವಕುಮಾರ್‌ ಅಸಭ್ಯವರ್ತನೆ ಖಂಡಿಸಿ ನೌಕರರ ಸಂಘದ ಸದಸ್ಯರು ಪ್ರತಿಭಟಿಸಿದರು. ಈ ವೇಳೆ ನೌಕರರ ಸಂಘದ ಮಾಜಿ ಅಧ್ಯಕ್ಷ ಎಂ.ಕೆ.ಪ್ರಕಾಶ, ಉಪತಹಶೀಲ್ದಾರ್‌ ಟ್ರೀಜಾ, ಆಹಾರ ಇಲಾಖೆ ಶಿರಸ್ತೇದಾರ್‌ ಸಣ್ಣಸ್ವಾಮಿ ಇತರರಿದ್ದರು.

ತಮ್ಮ ಜಮೀನಿನಲ್ಲಿ ಸರ್ವೆ ನಡೆಸಿರುವ ಸಂಬಂಧ ಮಾಹಿತಿ ಹಕ್ಕು ಕಾಯಿದೆ ಅಡಿ ಅರ್ಜಿ ಸಲ್ಲಿಸಿ 3 ತಿಂಗಳು ಕಳೆದರೂ ಯಾವುದೇ ಮಾಹಿತಿ ನೀಡದ ಕಾರಣ ಕಚೇರಿಯಲ್ಲಿ ಭೇಟಿ ಮಾಡಿ ಪ್ರಶ್ನೆಮಾಡಿದ್ದೇನೆ ಹೊರತು ಯಾವುದೆ ನಿಂದನೆಯಾಗಲಿ ಮಾಡಲಿಲ್ಲ ಎಂದು ಗ್ರಾಪಂ ಸದಸ್ಯ ಎಂ.ಬಿ.ಶಿವಕುಮಾರ್‌ ತಿಳಿಸಿದ್ಧಾರೆ.

ಟಾಪ್ ನ್ಯೂಸ್

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ: ದಿಲ್ಲಿ ಸರಕಾರ

Delhi Government: ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.