ಅಧಿಕಾರಿಗಳು ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಿ


Team Udayavani, May 7, 2019, 3:00 AM IST

adhikari

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ಪುರಸಭೆ, ಯಳಂದೂರು ಹಾಗೂ ಹನೂರು ಮತ್ತು ಪಟ್ಟಣ ಪಂಚಾಯಿತಿ ಚುನಾವಣೆಯು ಮುಕ್ತ, ನ್ಯಾಯಸಮ್ಮತ, ಪಾರದರ್ಶಕತೆಯಿಂದ ನಡೆಯಲು ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ.ಕಾವೇರಿ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣೆ ಕೆಲಸಗಳಿಗೆ ನಿಯುಕ್ತಿಗೊಂಡಿರುವ ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿ ಮತ್ತು ತಹಶೀಲ್ದಾರ್‌ಗಳಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನೀತಿ ಸಂಹಿತೆ ಜಾರಿ: ರಾಜ್ಯ ಚುನಾವಣಾ ಆಯೋಗವು ನಗರ, ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಿಸಿದ್ದು, ಮೇ 2 ರಿಂದಲೇ ನೀತಿ ಸಂಹಿತೆ ಜಾರಿ ಮಾಡಿದೆ. ಈ ಅವಧಿಯಲ್ಲಿ ಯಾವುದೇ ಲೋಪದೋಷಗಳಿಗೆ ಅಸ್ಪದವಾಗದಂತೆ ಎಚ್ಚರ ವಹಿಸಬೇಕು. ಅಲ್ಲದೆ ಚುನಾವಣಾ ಕೆಲಸಗಳಿಗೆ ನೇಮಕವಾಗುವ ಅಧಿಕಾರಿ, ಸಿಬ್ಬಂದಿ ಆತ್ಮವಿಶ್ವಾಸದಿಂದ ಚುನಾವಣಾ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದ‌ರು.

ಗೊಂದಲಗಳಿಗೆ ಒಳಗಾಗಬೇಡಿ: ಗುಂಡ್ಲುಪೇಟೆ ಪುರಸಭೆ, ಯಳಂದೂರು ಹಾಗೂ ಹನೂರು ಮತ್ತು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮೇ 9 ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತದೆ. ಅಂದಿನಿಂದ ಚುನಾವಣಾ ಪ್ರಕ್ರಿಯೆ ಮುಗಿಯುವ ವರೆಗೆ ಚುನಾವಣೆ ಸಂಬಂಧ ನೇಮಕವಾಗಿರುವ ಎಲ್ಲ ಅಧಿಕಾರಿಗಳು ಯಾವುದೇ ಗೊಂದಲಗಳಿಗೆ ಒಳಗಾಗದೇ ಕಾರ್ಯನಿರ್ವಹಣೆ ಮಾಡಬೇಕು. ಚುನಾವಣೆ ಕುರಿತು ಯಾವುದೇ ಅನುಮಾನಗಳಿದ್ದರೂ ನೇರವಾಗಿ ತಮ್ಮನ್ನೆ ಸಂಪರ್ಕಿಸಿ ಪರಿಹರಿಸಿಕೊಳ್ಳಬಹುದು ಎಂದು ತಿಳಿಸಿದರು.

ಹಗುರವಾಗಿ ಪರಿಗಣಿಸಬೇಡಿ: ಮತಗಟ್ಟೆಗಳ ಮೂಲಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳಬೇಕು. ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿರುವ ಅಧಿಕಾರಿ ಸಿಬ್ಬಂದಿಗಳು ಚುನಾವಣಾ ಕೆಲಸ ಕಾರ್ಯಗಳನ್ನು ಹಗುರವಾಗಿ ಪರಿಗಣಿಸದೆ ಅತ್ಯಂತ ಹೊಣೆಗಾರಿಕೆ ಹಾಗೂ ಸಮನ್ವಯದಿದ ನಿಭಾಯಿಸಬೇಕು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌.ಆನಂದ್‌ ಉಪವಿಭಾಗಾಧಿಕಾರಿ ನಿಖೀತಾ, ಗುಂಡ್ಲುಪೇಟೆ ಪುರಸಭೆ, ಯಳಂದೂರು, ಹನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾ ಅಧಿಕಾರಿಗಳು, ತಹಶೀಲ್ದಾರರು, ಶಿರಸ್ತೆದಾರರು ತರಬೇತಿ ಕಾರ್ಯಕ್ರಮದಲ್ಲಿ ಹಾಜರಿದ್ದರು.

ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿ ಕೃ.ಪ. ಗಣೇಶ್‌ ಅವರು ಪವರ್‌ಪಾಯಿಂಟ್‌ ಮೂಲಕ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಸವಿವರವಾದ ಮಾಹಿತಿಯೊಂದಿಗೆ ತರಬೇತಿ ಕಾರ್ಯಕ್ರಮ ನಡೆಸಿಕೊಟ್ಟರು.

ಟಾಪ್ ನ್ಯೂಸ್

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.