ಚುನಾವಣೆ ಪ್ರಚಾರಕ್ಕೆ ಐವರು ಬೆಂಬಲಿಗರಿಗೆ ಮಾತ್ರ ಅವಕಾಶ
Team Udayavani, Dec 2, 2020, 12:11 PM IST
ಚಾಮರಾಜನಗರ: ಜಿಲ್ಲೆಯ 129 ಗ್ರಾಮ ಪಂಚಾಯಿತಿಗಳ ಒಟ್ಟು823ಕ್ಷೇತ್ರಗಳ 2,157 ಸದಸ್ಯ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದ್ದು ಜಿಲ್ಲಾಡಳಿತ ಇದಕ್ಕಾಗಿ ಎಲ್ಲಾ ಸಿದ್ಧªತೆ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಅವರು, ಚುನಾವಣಾ ಪ್ರಚಾರಕ್ಕೆ ಐವರು ಬೆಂಬಲಿಗರನ್ನುಮಾತ್ರ ಕರೆದೊಯ್ಯಲು ಅವಕಾಶವಿದೆ. ಎಲ್ಲರೂ ಕಡ್ಡಯವಾಗಿ ಮಾಸ್ಕ್ ಧರಿಸಬೇಕು. ಭೌತಿಕ ಅಂತರ ಕಾಯ್ದುಕೊಳ್ಳಬೇಕು, ಕೋವಿಡ್ ಕಾರಣದ ಹಿನ್ನೆಲೆಯಲ್ಲಿ 14 ಮಸ್ಟರಿಂಗ್ ಡಿ ಮಸ್ಟರಿಂಗ್ ಮತ್ತು ಎಣಿಕೆ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಒಟ್ಟಾರೆ ನಿಷ್ಪಕ್ಷಪಾತ, ಪಾರದರ್ಶಕ ಚುನಾವಣೆಗೆ ಎಲ್ಲಾಕ್ರಮ ತೆಗೆದುಕೊಳ್ಳಲಾಗಿದೆ ಎಂದರು.
ಕೋವಿಡ್ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ.ಮತದಾನದಂದುಕೊನೆಯ ಒಂದು ಗಂಟೆ ಅಂದರೆ4 ರಿಂದ5 ಗಂಟೆಯವರೆಗೆಕೋವಿಡ್ ಸೋಂಕಿತರಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಆರೋಗ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸೋಂಕಿತರನ್ನು ಸುರಕ್ಷತಾಸಾಧನಗಳೊಂದಿಗೆ ಕರೆತರಲಿದ್ದಾರೆ. ಮತಗಟ್ಟೆ ಅಧಿಕಾರಿ ಸಿಬ್ಬಂದಿಗೂ ಸುರಕ್ಷತಾ ಕಿಟ್ ಒದಗಿಸ ಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಕೋವಿಡ್ ಹಿನ್ನೆಲೆಯಲ್ಲಿ ಒಂದು ಸಾವಿರಕ್ಕಿಂತ ಹೆಚ್ಚು ಮತದಾರರಿರುವಕಡೆ ಹೆಚ್ಚುವರಿ ಮತಗಟ್ಟೆ ಸ್ಥಾಪಿಸಲಾಗುತ್ತಿದೆ. 25ಕ್ಕಿಂತ ಹೆಚ್ಚು ಸದಸ್ಯ ಸ್ಥಾನಗಳಿರುವ ಗ್ರಾಮ ಪಂಚಾಯಿತಿಗಳಿಗೆ ಇಬ್ಬರು ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿರುತ್ತದೆ. ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ, ಸತ್ತೇಗಾಲ ಹಾಗೂ ಹನೂರು ತಾಲೂಕಿನ ಮಾರ್ಟಳ್ಳಿ ಮತ್ತು ಮಲೈ ಮಹದೇಶ್ವರ ಬೆಟ್ಟದ ಗ್ರಾಮ ಪಂಚಾಯಿತಿಯಲ್ಲಿ 25ಕ್ಕೂ ಹೆಚ್ಚು ಸದಸ್ಯ ಸ್ಥಾನಗಳಿವೆ. 35 ಕ್ಕಿಂತ ಹೆಚ್ಚು ಸದಸ್ಯ ಸ್ಥಾನಗಳಿರುವ ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಇಬ್ಬರು ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದರು.
ಜಿಪಂ ಸಿಇಒ ಹರ್ಷಲ್ ಬೋಯರ್ ನಾರಾಯಣ್ ರಾವ್ ಮಾತನಾಡಿ, ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಿನ ಪಾಲನೆಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ, ಮತಗಟ್ಟೆಗಳಿಗೆ ಅಗತ್ಯ ಮೂಲ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ, ವಿದ್ಯುತ್, ಪೀಠೊಪಕರಣದ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದರು.
ಎಸ್ಪಿ ದಿವ್ಯಾ ಸಾರಾ ಥಾಮಸ್ ಮಾತನಾಡಿ, ಶಾಂತಿಯುತ ಚುನಾವಣೆಗೆ ಅಗತ್ಯವಿರುವಪೊಲೀಸ್ ಬಂದೋಬಸ್ತ್ ಮಾಡಲಾಗುತ್ತದೆ. ಮತದಾನಪೂರ್ವ,ಮತದಾನದ ನಂತರ ಹಾಗೂ ಎಣಿಕೆ ದಿನಗಳಂದು ಕೈಗೊಳ್ಳಬೇಕಿರುವ ಪೊಲೀಸ್ ಭದ್ರತೆಗೆ ಎಲ್ಲಾ ಸಿದ್ಧತೆ ಕೈಗೊಳ್ಳಲಿದ್ದೇವೆ ಎಂದರು. ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್. ಆನಂದ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.