ಸಾವಿನಲ್ಲೂ ಸಾರ್ಥಕತೆ ಮೆರೆದ ರಾಕೇಶ್
Team Udayavani, Jul 31, 2023, 2:58 PM IST
ಗುಂಡ್ಲುಪೇಟೆ: ಪಟ್ಟಣದ 18ನೇ ವಾರ್ಡ್ ನಿವಾಸಿ ಎಚ್.ಆರ್.ರಾಕೇಶ್ ಮೆದುಳು ನಿಷ್ಕ್ರಿಯವಾದ ಹಿನ್ನೆಲೆ ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ಗುಂಡ್ಲುಪೇಟೆ ಪಟ್ಟಣದ 18ನೇ ನಿವಾಸಿಗಳ ರಾಜು ಮತ್ತು ಸುಮಂಗಲ ದಂಪತಿ ಪುತ್ರ ಎಚ್.ಆರ್.ರಾಕೇಶ್‌ಗೆ ದಿಢೀರ್ ಬ್ರೈನ್ ಸ್ಟ್ರೋಕ್ ಆದ ಹಿನ್ನೆಲೆ ಮೈಸೂರಿನ ಅಪೋಲೋ ಆಸ್ಪತ್ರೆಗೆ ಕೂಡಲೇ ದಾಖಲು ಮಾಡಲಾಗಿತ್ತು. ನಂತರ ಆಸ್ಪತ್ರೆಯಲ್ಲಿ ಎರಡು ರೀತಿಯ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿ ಆಗದೇ ಮೆದುಳು ನಿಷ್ಕ್ರೀಯವಾಗಿ ಸಾವನ್ನಪ್ಪಿದರು. ನಂತರ ಪೋಷಕರು ತಮ್ಮ ಪುತ್ರನ ಅಂಗಾಂಗ ದಾನ ಮಾಡಲು ಒಪ್ಪಿಗೆ ಸೂಚಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಈ ಮೂಲಕ ರಾಕೇಶ್ ತನ್ನ ಸಾವಿನಲ್ಲಿ ಅಂಗಾಂಗ ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದು ಇತರರಿಗೆ ಮಾದರಿಯಾಗಿದ್ದಾರೆ.
ಮೈಸೂರಿನ ಅಪೋಲೋ ಆಸ್ಪತ್ರೆಗೆ ರಾಕೇಶ್ ಹೃದಯ ಮತ್ತು ಹೃದಯದ ನಾಳ, ಶ್ವಾಸಕೋಸ ನಾಶಗಳು, ಪಿತ್ತಕೋಂಶ(ಲಿವರ್), ಮೂತ್ರಪಿಂಡ(ಕಿಡ್ನಿ), ಕಣ್ಣು, ಚರ್ಮ(ಸ್ಕೀನ್) ದಾನ ಮಾಡಿದ್ದಾರೆ.
ಶಸ್ತ್ರ ಚಿಕಿತ್ಸೆಗೆ ಸಹಾಯ ಹಸ್ತ: ಎಚ್.ಆರ್.ರಾಕೇಶ್ ಬ್ರೈನ್ ಸ್ಟ್ರೋಕ್ ಆದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಶಸ್ತ್ರಚಿಕಿತ್ಸೆಗೆ ಐದು ಲಕ್ಷ ರೂ. ಹಣ ಅವಶ್ಯಕತೆ ಇರುವುದನ್ನು ಮನಗಂಡ ತಾಲೂಕಿನ ಸಹೃಯಿಗಳು ರಾಕೇಶ್ ಬ್ಯಾಂಕ್ ಖಾತೆ ಹಾಗೂ ಗೂಗಲ್ ಫೇಗೆ ಹಣ ಹಾಕುವ ಮೂಲಕ ಸಹಾಯ ಹಸ್ತ ಚಾಚಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ರಾಕೇಶ್ ಸಾವನ್ನಪ್ಪಿರುವ ಹಿನ್ನೆಲೆ ತಾಲೂಕಿನ ಹಲವು ಮಂದಿಗೆ ನೋವುಂಟಾಗಿದೆ. ಇನ್ನೂ ರಾಕೇಶ್ ಮೃತದೇಹವನ್ನು ಮೈಸೂರಿನಿಂದ ಆ್ಯಂಬುಲೆನ್ಸ್ ಮೂಲಕ ತೆಗೆದುಕೊಂದು ಗುಂಡ್ಲುಪೇಟೆಯಲ್ಲಿ ಅಂತ್ಯ ಕ್ರಿಯೆ ನೆರವೇರಿಸಲಾಯಿತು.
ಈ ವೇಳೆ ಕುಟುಂಬಸ್ಥರು, ಸಾವಿರಾರು ಮಂದಿ ಸ್ನೇಹಿತರ ಆಕ್ರಂದನ ಮುಗಿಲು ಮುಟ್ಟಿತ್ತು. ಮೆದುಳು ನಿಷ್ಕ್ರಿಯವಾಗಿ ರಾಕೇಶ್ ಸಾವನ್ನಪ್ಪಿದ ಹಿನ್ನೆಲೆ ಶಾಸಕ ಎಚ್.ಎಂ.ಗಣೇಶಪ್ರಸಾದ್, ಮಾಜಿ ಶಾಸಕ ಸಿ.ಎಸ್.ನಿರಂಜನ ಕುಮಾರ್, ಪುರಸಭೆ ಸದಸ್ಯ ಶಶಿಧರ್ ದೀಪು ಇನ್ನಿತರರು ಸಂತಾಪ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ
Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
MUST WATCH
ಹೊಸ ಸೇರ್ಪಡೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್.ರೆಹಮಾನ್ ತಂಡದ ಸದಸ್ಯೆ ಮೋಹಿನಿ
Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ
Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!
Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.