JDS ಶಾಸಕ ಮಂಜುನಾಥ್ ಅವರ ಅವಶ್ಯಕತೆ ಪಕ್ಷಕ್ಕಿಲ್ಲ: ಹನೂರು ಕಾಂಗ್ರೆಸ್ ಮುಖಂಡರು

ಅವರು ಆರ್‌ಎಸ್‌ಎಸ್ ಹಿನ್ನೆಲೆಯ ವ್ಯಕ್ತಿ.. ಕಾಂಗ್ರೆಸ್ ಸಿದ್ದಾಂತವೇ ಬೇರೆ...

Team Udayavani, Oct 7, 2023, 4:06 PM IST

1-sadsad

ಹನೂರು: ಕಾಂಗ್ರೆಸ್ ಪಕ್ಷ ಜಾತ್ಯಾತೀತ ತತ್ವ ಸಿದ್ಧಾಂತವನ್ನು ಪ್ರತಿಪಾದಿಸುವ ಪಕ್ಷ, ಶಾಸಕ ಮಂಜುನಾಥ್ ಆರ್‌ಎಸ್‌ಎಸ್‌ನಿಂದ ಬಂದಂತಹ ವ್ಯಕ್ತಿಯಾಗಿದ್ದು ಅವರದು ಆರ್‌ಎಸ್‌ಎಸ್ ಪ್ರವೃತ್ತಿ. ಆದುದರಿಂದ ಯಾವುದೇ ಕಾರಣಕ್ಕೂ ಶಾಸಕ ಮಂಜುನಾಥ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬಾರದು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಈಶ್ವರ್ ಆಗ್ರಹಿಸಿದರು.

ಹನೂರು ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಈಶ್ವರ್ ಕಳೆದ 4-5 ದಿನಗಳಿಂದ ಕ್ಷೇತ್ರದ ಹಾಲಿ ಶಾಸಕ ಮಂಜುನಾಥ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಾರೆ ಎಂಬ ವದಂತಿಗಳು ಹರಡಿವೆ. ಈ ವಿಚಾರವಾಗಿ ಮಂಜುನಾಥ್ ಅವರೇ ಸ್ಪಷ್ಟಪಡಿಸಿದ್ದು ನಾನು ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿದ್ದೇನೆಯೇ ಹೊರತು ಪಕ್ಷ ಸೇರ್ಪಡೆ ವಿಚಾರ ಚರ್ಚೆ ಆಗಿಲ್ಲ ಎಂದು ತಿಳಿಸಿದ್ದಾರೆ. ಆದುದರಿಂದ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಹಾಪೋಹಗಳಿಗೆ ಕಿವಿಗೊಡದೆ ಮುಂಬರುವ ಲೋಕಸಭೆ, ತಾ.ಪಂ, ಜಿ.ಪಂ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.

ಮಾಜಿ ಶಾಸಕರ ಕುಟುಂಬಸ್ಥರ ಶ್ರಮ ಅಪಾರ
ಹನೂರು ಕ್ಷೇತ್ರದ ಅಭಿವೃದ್ಧಿಯಲ್ಲಿ ಮಾಜಿ ಶಾಸಕ ಆರ್.ನರೇಂದ್ರ, ಅವರ ತಂದೆ ಮಾಜಿ ಸಚಿವ ದಿ|ರಾಜೂಗೌಡ, ದೊಡ್ಡಪ್ಪ ದಿ|ವೆಂಕಟೇಗೌಡ ಅವರ ಕೊಡುಗೆ ಅಪಾರವಾದುದು. 1968 ರಿಂದ ಇಲ್ಲಿಯತನಕ ಕಾಂಗ್ರೆಸ್ ಪಕ್ಷಕ್ಕಾಗಿ ಮತ್ತು ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಕಾಂಗ್ರೆಸ್ ಪಕ್ಷ ಟಿಕೆಟ್ ನಿರಾಕರಿಸಿದಾಗಲೂ ಅನ್ಯ ಪಕ್ಷದತ್ತ ಮುಖಮಾಡದೆ ಪಕ್ಷೇತರವಾಗಿ ಗೆಲುವು ಸಾಧಿಸಿ ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ ಪ್ರಸಕ್ತ ಚುನಾವಣೆಯಲ್ಲಿ ಕೆಲ ವ್ಯತ್ಯಾಸಗಳಿಂದಾಗಿ ನರೇಂದ್ರ ಅವರು ಸೋಲು ಕಂಡಿದ್ದರೂ ನಿರಂತರವಾಗಿ ಜನಸಂಪರ್ಕದಲ್ಲಿದ್ದು ಸೇವೆಯಲ್ಲಿ ತೊಡಗಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹನೂರು ಕ್ಷೇತ್ರದಿಮದ 15 ಸಾವಿರಕ್ಕೂ ಹೆಚ್ಚಿನ ಬಹುಮತ ನೀಡಿ ಹನೂರು ಕ್ಷೇತ್ರ ಕಾಂಗ್ರೆಸ್ ನ ಭದ್ರಕೊಟೆ, ಮಾಜಿ ಶಾಸಕ ನರೇಂದ್ರರ ನಾಯಕತ್ವದಲ್ಲಿ ಸದೃಢವಾಗಿದೆ ಎಂಬುದನ್ನು ಸಾಬೀತುಪಡಿಸುತ್ತೇವೆ . ಒಂದೊಮ್ಮೆ ಶಾಸಕ ಮಂಜುನಾಥ್ ಅವರನ್ನು ಪಕ್ಷ ಸೇರ್ಪಡೆ ಮಾಡಿಕೊಳ್ಳಲು ಮುಂದಾದಲ್ಲಿ ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರು ಒಕ್ಕೊರಲಿನಿಂದ ವಿರೋಧಿಸುತ್ತೇವೆ ಎಂದರು.

ಜಿ.ಪಂ ಮಾಜಿ ಉಪಾಧ್ಯಕ್ಷ ಬಸವರಾಜು ಮಾತನಾಡಿ 2008 ರ ಚುನಾವಣೆಯಲ್ಲಿ ಶಾಸಕ ನರೇಂದ್ರ ಅವರು ಮೊದಲ ಬಾರಿ ಜಯಗಳಿಸಿದ್ದರು, 2018 ರಲ್ಲಿ ಸತತವಾಗಿ 3 ನೇ ಬಾರಿಗೆ ಗೆಲುವು ಸಾಧಿಸಿದ್ದರು. ಈ ಎರಡೂ ಸಮಯದಲ್ಲಿಯೂ ಬಿಜೆಪಿ ಪಕ್ಷ ನರೇಂದ್ರ ಅವರನ್ನು ಸೆಳೆಯಲು ಪ್ರಯತ್ನಿಸಿತ್ತು. ಈ ವೇಳೆ ಬೊಜೆಪಿ ನಾಯಕರು 50 ಕೋಟಿ ರೂ. ಹಣ, ಮಂತ್ರಿಸ್ಥಾನ ಮತ್ತು ಉಪಚುನಾವಣೆಯ ಖರ್ಚುವೆಚ್ಚವನ್ನೆಲ್ಲಾ ಭರಿಸುವ ಭರವಸೆ ನೀಡಿದರೂ ಅತ್ತ ಮುಖ ಮಾಡಲಿಲ್ಲ ಇದು ಅವರ ಪಕ್ಷ ನಿಷ್ಠೆಯನ್ನು ತೋರುತ್ತದೆ. ಇನ್ನು 1985ರಲ್ಲಿ ದಿ|ರಾಜೂಗೌಡ ಅವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನಿರಾಕರಿಸಿದಾಗ ಪಕ್ಷೇತರವಾಗಿ ಗೆಲುವು ಸಾಧಿಸಿದ್ದರು. ಈ ಸಂದರ್ಭದಲ್ಲಿ 1986 ರಲ್ಲಿ ಅಂದಿನ ಪಿಡಬ್ಲ್ಯೂಡಿ ಸಚಿವರಾಗಿದ್ದ ಮಾಜಿ ಪ್ರಧಾನಿ ದೇವೇಗೌಡರು ಚಿಕ್ಕಲ್ಲೂರಿಗೆ ಆಗಮಿಸಿದ್ದ ವೇಳೆ ಜನತಾ ಪಕ್ಷಕ್ಕೆ ಆಹ್ವಾನಿಸಿ ಮಂತ್ರಿಸ್ಥಾನದ ಭರವಸೆ ನೀಡಿದ್ದರು. ಆಗಲೂ ರಾಜೂಗೌಡರು ವಿನಯದಿಂದಲೇ ತಿರಸ್ಕರಿಸಿದ್ದರು. ಇದು ಅವರ ಪಕ್ಷ ನಿಷ್ಠೆಯನ್ನು ತೋರುತ್ತಿದ್ದು ಮಾಜಿ ಶಾಸಕ ನರೇಂದ್ರ ನಾಯಕತ್ವದಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಬಲವಾಗಿದ್ದು ಶಾಸಕ ಮಂಜುನಾಥ್ ಅವರ ಅನಿವಾರ್ಯತೆ ನಮಗಿಲ್ಲ ಎಂದರು.

ಮಂಜುನಾಥ್ ಅವರು ಕ್ಷೇತ್ರದ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರೆ ಸ್ವಾಗತ. ಕೂಡಲೇ ಮಂಜುನಾಥ್ ಅವರು ತಾವು ಯಾವುದೇ ಕಾರಣಕ್ಕೂ ಜೆಡಿಎಸ್ ಪಕ್ಷ ತೊರೆಯುವುದಿಲ್ಲ ಎಂದು ಮಾಧ್ಯಮಗಳ ಮುಖಾಂತರ ಸ್ಪಷ್ಟಪಡಿಸಿ ಊಹಾಪೋಹಗಳಿಗೆ ತೆರೆ ಎಳೆಯಬೇಕು ಎಂದು ಕಾಂಗ್ರೆಸ್ ಮುಖಂಡ ಪಾಳ್ಯ ರಾಚಪ್ಪ ಹೇಳಿದರು.

ಒಂದೊಮ್ಮೆ ಮಂಜುನಾಥ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರೆ ಮುಂದಿನ ಪರಿಣಾಮಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ನೇರಹೊಣೆಯಾಗಬೇಕಾಗುತ್ತದೆ ಎಂದು ಪ.ಪಂ ಸದಸ್ಯ ಹರೀಶ್ ಕುಮಾರ್ ಹೇಳಿದರು.

ಈ ಸಂದರ್ಭದಲ್ಲಿ ಮುಖಂಡರಾದ ಚಿಕ್ಕತಮ್ಮಯ್ಯ, ಪೆದ್ದನಪಾಳ್ಯ ಸಿದ್ದರಾಜು, ಪ.ಪಂ ಸದಸ್ಯರಾದ ಸುದೇಶ್, ಮುಖಂಡರಾದ ಬಸವರಾಜು, ಮಾದೇಶ್, ನಟರಾಜು, ಮಂಜು ಹಾಗೂ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!

Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.