ಸರ್ಕಾರ ದಿಂದಲೇ ವೇತನ ವಿತರಣೆ


Team Udayavani, Mar 11, 2018, 2:09 PM IST

cham-2.jpg

ಚಾಮರಾಜನಗರ: ಗ್ರಾಮ ಪಂಚಾಯ್ತಿ ನೌಕರರಿಗೆ ನೇರ ಖಜಾನೆಯಿಂದಲೇ ವೇತನ ನೀಡುವ ಆದೇಶ ಜಾರಿ ಮಾಡಿ ರುವ ರಾಜ್ಯ ಸರ್ಕಾರ ನಿರ್ಧಾರ ಸ್ವಾಗತಿಸಿ ಜಿಲ್ಲಾ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ನಗರದಲ್ಲಿ ವಿಜಯೋತ್ಸವ ಆಚರಣೆ ಮಾಡಲಾಯಿತು.

ಕರ್ನಾಟಕ ರಾಜ್ಯ ಗ್ರಾಪಂ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೊತ್ತಲವಾಡಿ ಮಹದೇವ ಸ್ವಾಮಿ ನೇತೃತ್ವದಲ್ಲಿ ಜಿಲ್ಲೆಯ 142 ಗ್ರಾಮ ಪಂಚಾಯ್ತಿಗಳ ನೌಕರರು ಸಭೆ ಸೇರಿ, ರಾಜ್ಯ ಸಂಘದ ಅಧ್ಯಕ್ಷ ಮಾರುತಿ ಮಾನ್ಪಡೆ ಅವರ ಹೋರಾಟದ ಫ‌ಲವಾಗಿ, ರಾಜ್ಯ ಸರ್ಕಾರ ಮಾರ್ಚ್‌ರಿಂದಲೇ ಅನ್ವಯವಾಗುವಂತೆ ನೌಕರರಿಗೆ ನೇರವಾಗಿ ಸಂಬಳ ನೀಡಲು ತೀರ್ಮಾನಿಸಿದೆ. ಗ್ರಾಮ ಪಂಚಾಯಿತಿ ನೌಕರರು ಸಹ ರಾಜ್ಯ ಸರ್ಕಾರಿ ನೌಕರರು ಎಂದು ಪರಿಗಣಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ಈ ನಿರ್ಧಾರದಿಂದ 52 ಸಾವಿರ ಗ್ರಾಮ ಪಂಚಾಯ್ತಿ ನೌಕರರು ಹಾಗೂ ಅವರ ಕುಟುಂಬ ನೆಮ್ಮದಿಯಿಂದ ಜೀವನ ಮಾಡಲು ಸಹಕಾರಿಯಾಗಿದೆ. ಜಿಲ್ಲೆಯಲ್ಲಿ 1367 ಗ್ರಾಮ ಪಂಚಾಯಿತಿ ನೌಕರರಿದ್ದು, ಈ ಪೈಕಿ 943 ನೌಕರರು ಅನುಮೋದನೆಗೊಂಡಿದ್ದಾರೆ. ಇನ್ನುಳಿದ 424 ನೌಕರಿಗೂ ನೇರ ಸಂಬಳ ದೊರೆಯಲಿದೆ ಎಂದು ಹೇಳಿದರು.

ಈ ಸಂಬಂಧ ಜಿಲ್ಲಾ ಸಮಿತಿ ಮುಖ್ಯ ಅಧಿಕಾರಿಗಳೊಂದಿಗೆ ಮಾತನಾಡಿದೆ. ರಾಜ್ಯಾಧ್ಯಕ್ಷ ಮಾರುತಿ ಮಾನ್ಪಡೆ ಅವರು
ರಾಜ್ಯ ಗ್ರಾಪಂ ನೌಕರರ ಪರ ಹೋರಾಟ ಮಾಡಿದ ಫ‌ಲವಾಗಿ ಇಂದು ಸರ್ಕಾರ ಈ ಅಧಿಸೂಚನೆ ಹೊರಡಿಸಿದೆ ಎಂದರು.
 
ಮಾರ್ಚ್‌ ತಿಂಗಳಲ್ಲಿ ಎಲ್ಲಾ ನೌಕರರಿಗೂ ಸಂಬಳ ನೇರವಾಗಿ ಬರುವಂತಾಗಲು ತಮ್ಮ ಪಂಚಾಯಿತಿಗಳಲ್ಲಿ ಪಿಡಿಒ ಮುಖಾಂತರ ಪೂರ್ಣ ಮಾಹಿತಿಗಳನ್ನು ಜಿಲ್ಲಾ ಪಂಚಾಯ್ತಿಗೆ ನೀಡಬೇಕು. ಮಾ. 20ರೊಳಗೆ ಅಂತಿಮ ಗಡುವು ನೀಡಲಾಗಿದೆ. ಇಲ್ಲಿಯವರಿಗೆ ತಾವುಗಳು ಬ್ಯಾಂಕ್‌ ಖಾತೆಯನ್ನು ಹೊಂದ ಬೇಕು ಎಂದು ತಿಳಿಸಿದರು.

ಸಂಘದ ರಾಜ್ಯಾಧ್ಯಕ್ಷ ಮಾರುತಿ ಮಾನ್ಪಡೆ ಅವರನ್ನು ಜಿಲ್ಲಾ ಸಂಘಟನೆಯಿಂದ ಆಹ್ವಾನಿಸಿ ಅಭಿನಂದಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಎಲ್ಲಾ ನೌಕರರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ತಮ್ಮ ಸಂಘಟಿತ ಹೋರಾಟವನ್ನು ಪ್ರದರ್ಶನ ಮಾಡೋಣ. ಸರ್ಕಾರದಿಂದ ನೇರವಾಗಿ ಸಂಬಳ ಬಂದಾಕ್ಷಣ ತಾವುಗಳು ಸರ್ಕಾರಿ ನೌಕರರಿಗಾಗಿ ಪರಿಗಣಿಸಲ್ಪಡುವುದಿಲ್ಲ. ಇನ್ನು ಬಹಳಷ್ಟು ಹೋರಾಟ ಮಾಡಬೇಕಾಗಿದೆ. ಇಂದಿನ ಜಯ ಮೊದಲ ಮೆಟ್ಟಿಲು ಎಂದರು.

ಪ್ರಧಾನ ಕಾರ್ಯದರ್ಶಿ ಪಿ.ಮಹದೇವ ಸ್ವಾಮಿ, ರಾಜ್ಯ ಸಮಿತಿ ಸದಸ್ಯ ಸಿ.ಗೋವಿಂದ ರಾಜು, ತಾಲೂಕು ಅಧ್ಯಕ್ಷರಾದ ಚಾ.ನಗರ ಸುರೇಶ್‌, ಕೊಳ್ಳೇಗಾಲ ಸಿದ್ದೇಗೌಡ, ಜಿಲ್ಲಾ ಖಜಾಂಚಿ ಯೋಗೇಂದ್ರ, ಯಳಂದೂರು ತಾಲೂಕು ಪ್ರಧಾನ ಕಾರ್ಯದರ್ಶಿ ಕೃಷ್ಣನಾಯಕ, ಪಾಪಣ್ಣ, ನಂಜಪ್ಪ, ಸುಬ್ಬಣ್ಣ, ಡಿ.ಕೆ.ರವಿ, ಚಂದ್ರು, ಸಾಕಮ್ಮ ಇತರರಿದ್ದರು. 

ರಾಜ್ಯ ಸರ್ಕಾರದ ಆದೇಶ ಶೀಘ್ರ ಜಾರಿಯಾಗಬೇಕು. ಜಿಪಂ ಸಿಇಒ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಈ ಕೂಡಲೇ ಗ್ರಾಮ ಪಂಚಾಯ್ತಿಯಲ್ಲಿ ದುಡಿಯುತ್ತಿರುವ ಎಲ್ಲಾ ನೌಕರರ ಬ್ಯಾಂಕ್‌ ಖಾತೆ ವಿವರಗಳನ್ನು ಇ- ಎಫ್ಎಂಎಸ್‌ಗೆ ಅಪಲೋಡ್‌ ಮಾಡಿ ವೇತನವನ್ನು ಅವರ ಖಾತೆಗೆ ಜಮಾ ಮಾಡಬೇಕು. 
 ಮಹದೇವಸ್ವಾಮಿ, ಗ್ರಾಪಂ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ

ಟಾಪ್ ನ್ಯೂಸ್

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-kollegala

Kollegala: ಕಲುಷಿತ ನೀರು ಸೇವಿಸಿ ನಾಲ್ವರು ಆಸ್ಪತ್ರೆಗೆ ದಾಖಲು

Elephanat-1

Chamarajanagara: ವಕ್ರದಂತ ಹೊಂದಿದ್ದ ಕಾಡಾನೆ ಸ್ವಾಭಾವಿಕ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

5

Gundlupete: ಎರಡು ಬೈಕ್ ಗಳ ನಡುವೆ ಅಪಘಾತ; ಇಬ್ಬರು ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.