ನ.2 ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪಿಡಿಒಗಳ ಧರಣಿ
Team Udayavani, Oct 30, 2022, 11:58 AM IST
ಗುಂಡ್ಲುಪೇಟೆ: ಪಂಚಾಯತ್ ಅಭಿವೃದ್ಧಿ ಅಧಿಕಾರಿ(ಪಿಡಿಒ)ಗಳ ವಿವಿಧ ಬೇಡಿಕೆ ಒತ್ತಾಯಿಸಿ ನ.2ರಂದು ಬೆಂಗಳೂರಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಯಲಿದೆ ಎಂದು ಜಿಪಂ ಅಭಿವೃದ್ಧಿ ಅಧಿಕಾರಿಗಳ ಸಂಘದ ಅಧ್ಯಕ್ಷ ಕುಮಾರಸ್ವಾಮಿ ತಿಳಿಸಿದ್ದಾರೆ.
ನ.2ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜಿಲ್ಲೆಯ ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸುತ್ತಿದ್ದು ಹೋರಾಟ ನಿಲ್ಲುವ ತನಕ ಕುಡಿವ ನೀರು ಮತ್ತು ಬೀದಿ ದೀಪ ಸೇವೆಗಳು ಮಾತ್ರ ಸಿಗಲಿವೆ. ಇನ್ನೂಳಿದ ಎಲ್ಲಾ ಸೇವೆ ಸ್ಥಗಿತಗೊಳ್ಳಲಿರುವ ಕಾರಣ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಗ್ರಾಮೀಣ ಭಾಗದ ಶೇ.70ರ ಭಾಗ ಜನತೆಗೆ ಮೂಲಭೂತ ಸೌಕರ್ಯಗಳ ನೀಡುವ ಜೊತೆಗೆ ಕೇಂದ್ರ ಹಾಗು ರಾಜ್ಯ ಸರ್ಕಾರಗಳ ಎಲ್ಲಾ ಯೋಜನೆ ಅನುಷ್ಠಾನ ಮಾಡುತ್ತಿದ್ದೇವೆ. ರಾಜ್ಯ ಸರ್ಕಾರಕ್ಕೆ ಹತ್ತು ಹಲವು ಪ್ರಶಸ್ತಿ ಪಡೆದುಕೊಳ್ಳುವಲ್ಲಿ ಪಿಡಿಒಗಳ ಪಾತ್ರ ಪ್ರಮುಖವಾಗಿದೆ ಎಂದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ 11 ಬೇಡಿಕೆ ಈಡೇರಿಸಬೇಕು ಎಂದು ನಮ್ಮಗಳ ನ್ಯಾಯಯುತ ಬೇಡಿಕೆಗಾಗಿ, ಫ್ರೀಡಂ ಪಾರ್ಕ್ ಬೆಂಗಳೂರು ಚಲೋ ಅನಿರ್ದಿಷ್ಠಾವಧಿ ಧರಣಿ ಸತ್ಯಾಗ್ರಹಕ್ಕೆ ಜಿಲ್ಲೆಯ ಪಿಡಿಒಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.