ಮಾಸ್ಕ್ ಧರಿಸದೆ ಓಡಾಡಿದರೆ ಇಂದಿನಿಂದ ದಂಡ
Team Udayavani, Feb 23, 2021, 1:35 PM IST
ಚಾಮರಾಜನಗರ: ಕೇರಳದಲ್ಲಿ ಕೋವಿಡ್= ಪ್ರಕರಣಗಳು ಹೆಚ್ಚುತ್ತಿರುವಂತೆಯೇ ಅದಕ್ಕೆ ಹೊಂದಿಕೊಂಡಂತಿರುವ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಜಿಲ್ಲಾಡಳಿತ ಮತ್ತು ನಗರಸಭೆ ವ್ಯಾಪಕ ಮುಂಜಾಗ್ರತಾ ಕ್ರಮಕ್ಕೆ ಮುಂದಾಗಿವೆ. ಜಿಲ್ಲಾ ಕೇಂದ್ರದಲ್ಲಿ ಮಂಗಳವಾರದಿಂದ ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲಾಗುತ್ತದೆ. ಇನ್ನೇನು ಕೊರೊನಾ ಹೊರಟೇ ಹೋಯ್ತು ಎಂದು ಸಮಾಧಾನದ ನಿಟ್ಟುಸಿರು ಬಿಡುತ್ತಿದ್ದ ಜನತೆಗೆ, ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಎರಡನೇ ಅಲೆ ಹೆಚ್ಚಾಗುತ್ತಿರುವುದು ಕೊಂಚ ಆತಂಕ ಮೂಡಿಸಿದೆ. ಚಾಮರಾಜನಗರ ಜಿಲ್ಲೆ ಕೇರಳ ಗಡಿಗೆ ಹೊಂದಿಕೊಂಡಿದ್ದು, ಅಲ್ಲಿಂದ ಜಿಲ್ಲೆಗೆ ಬರುವವರಿಗೆ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ತರುವುದನ್ನು ಕಡ್ಡಾಯ ಮಾಡಲಾಗಿದೆ.
ಕೋವಿಡ್ ಹೋಯಿತೆಂದು ಶೇ. 95ರಷ್ಟು ಜನರು ಮಾಸ್ಕ್ ಧರಿಸುವುದನ್ನೇ ಬಿಟ್ಟಿದ್ದಾರೆ. ಈಗ ಕೇರಳದಲ್ಲಿ 2ನೇ ಅಲೆ ಹೆಚ್ಚುತ್ತಿರುವ ಕಾರಣ, ಜನರು ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸುವುದುಕಡ್ಡಾಯ ಎಂದು ನಗರಸಭೆ ಅಧಿಕಾರಿಗಳು ಸೋಮವಾರ ನಗರದ ಪ್ರಮುಖ ಸ್ಥಳಗಳಲ್ಲಿ ಮೈಕ್ ಹಿಡಿದು ಪ್ರಚಾರ ನಡೆಸಿದರು.
ಅಲ್ಲದೇ ಮಂಗಳವಾರದಿಂದ, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಓಡಾಡಿದರೆ 100 ರೂ. ದಂಡ ವಿಧಿಸುವ ಎಚ್ಚರಿಕೆ ನೀಡಲಾಗುತ್ತಿದೆ. ಹಾಗಾಗಿ ಮಂಗಳವಾರದಿಂದ ಸಾರ್ವಜನಿಕರು ಜಿಲ್ಲಾ ಕೇಂದ್ರದಲ್ಲಿ ಮಾಸ್ಕ್ ಧರಿಸದೇ ಓಡಾಡಿದರೆ ದಂಡ ತೆರಲು ಸಿದ್ಧರಾಗಿರಬೇಕಾಗುತ್ತದೆ. ಇದಲ್ಲದೇ ನಗರಸಭೆಯಿಂದ ಈ ಸಂಬಂಧ, ಸಾರ್ವಜನಿಕರಿಗೆ ಕರಪತ್ರಗಳನ್ನೂ ವಿತರಿಸಲಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಬೇಕೆಂದು ಕರಪತ್ರದಲ್ಲಿ ಸೂಚಿಸಲಾಗಿದೆ.
ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಅಂಗಡಿಗಳಲ್ಲಿ ಕಚೇರಿಗಳಲ್ಲಿ, ಖಾಸಗಿ ಸಂಸ್ಥೆಗಳಲ್ಲಿ ಸಾಮಾ ಜಿಕ ಅಂತರ ಕಾಪಾಡಬೇಕು. ಹಸ್ತಲಾಘವ ಮಾಡಬಾರದರು. ಗುಂಪು ಸೇರಬಾರದು. ಸಾರ್ವಜನಿಕ ಸ್ಥಳಗಳಲ್ಲಿ ಉಗುಳಬಾರದು. ಗರ್ಭಿಣಿಯರು, 60 ವರ್ಷ ಮೇಲ್ಪಟ್ಟವರು ಮನೆಯಲ್ಲೇ ಇರುವುದು. ಸ್ಯಾನಿಟೈಸರ್ ಬಳಕೆ ಮಾಡಬೇಕು. ಹೇರ್ ಕಟಿಂಗ್ ಮಾಡಿಸಲು ಹೋಗುವಾಗ ಮನೆಯಿಂದ ಬಟ್ಟೆತೆಗೆದುಕೊಂಡು ಹೋಗಬೇಕು ಎಂಬ ಸೂಚನೆಗಳನ್ನು ನೀಡಲಾಗಿದೆ
ಕೇರಳ, ಮಹಾರಾಷ್ಟ್ರದಲ್ಲಿ ರೂಪಾಂ ತರ ಕೋವಿಡ್ ಪ್ರಕರಣಗಳು ವ್ಯಾಪಕವಾಗಿ ಹೆಚ್ಚುತ್ತಿರುವುದರಿಂದ ಜನರು ಜಾಗರೂಕರಾಗಿರಬೇಕು. ಮಾಸ್ಕ್ ಧರಿಸುವುದರಿಂದ ಸೋಂಕು ಹರಡುವುದನ್ನು ತಡೆಯಬಹುದು. ಹಾಗಾಗಿ ಜನರು ಎಚ್ಚೆತ್ತುಕೊಂಡು ಮಾಸ್ಕ್ ಧರಿಸಬೇಕು. –ಶರವಣ, ಆರೋಗ್ಯ ನಿರೀಕ್ಷಕ, ನಗರಸಭೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.