ಹನೂರು ಪಪಂ ಅಧಿಕಾರಕ್ಕಾಗಿ ಮೈತ್ರಿ ಸಾಧ್ಯತೆ


Team Udayavani, Mar 15, 2020, 3:00 AM IST

hanuru-pp

ಹನೂರು: ಪಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟವಾಗಿದ್ದು, ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮತ್ತು ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ- ಬಿಗೆ ಮೀಸಲಾಗಿದೆ. ಕುಟುಂಬ ರಾಜಕಾರಣಕ್ಕೆ ಹೆಸರಾಗಿರುವ ಹನೂರು ಕ್ಷೇತ್ರದಲ್ಲಿ ಯಾರು ಯಾರ ಜೊತೆ ಮೈತ್ರಿ ಮಾಡಿಕೊಳ್ಳಲಿದ್ದಾರೆ ಎಂಬ ಕುತೂಹಲ ಕೆರಳಿಸಿದೆ.

ಹನೂರು ಪಪಂನಲ್ಲಿ 13 ವಾರ್ಡ್‌ಗಳಿದ್ದು, ಅಧಿಕಾರದ ಚುಕ್ಕಾಣಿ ಹಿಡಿಯಲು 7 ಸ್ಥಾನಗಳ ಅವಶ್ಯವಿದೆ. ಆದರೆ, ಕಳೆದ 2019ರ ಮೇನಲ್ಲಿ ನಡೆದ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್‌-4, ಜೆಡಿಎಸ್‌-6 ಮತ್ತು ಬಿಜೆಪಿ-3 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತವಿಲ್ಲ. ಈ ಹಿನ್ನೆಲೆ ಅತಂತ್ರ ಪಂಚಾಯ್ತಿ ನಿರ್ಮಾಣವಾಗಿತ್ತು. ಇದೀಗ ಸರ್ಕಾರ ಮೀಸಲಾತಿ ನಿಗದಿಪಡಿಸಿದ್ದು, ಪಟ್ಟಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಕುಟುಂಬ ರಾಜಕಾರಣಕ್ಕೆ ಹೆಸರಾದ ಕ್ಷೇತ್ರ: ಹನೂರು ಕ್ಷೇತ್ರವು ಕುಟುಂಬ ರಾಜಕಾರಣಕ್ಕೆ ಹೆಸರಾದ ಕ್ಷೇತ್ರವಾಗಿದೆ. ಇಲ್ಲಿ ಹಿಂದಿನಿಂದಲೂ ಮಾಜಿ ಸಚಿವರಾಗಿದ್ದ ದಿ.ರಾಜೂಗೌಡ ಮತ್ತು ದಿ.ನಾಗಪ್ಪ ಕುಟುಂಬಗಳ ಮಧ್ಯೆಯೇ ನೇರಾ ಹಣಾಹಣಿ ನಡೆದಿತ್ತು. ಆದರೆ, ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ 2018ರ ವಿಧಾನಸಭಾ ಚುನಾವಣೆಯಲ್ಲಿ 3ನೇ ಶಕ್ತಿಯೂ ಕೂಡ ಉದಯವಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಈ ಎರಡೂ ಕುಟುಂಬಗಳಿಗೂ ಸೆಡ್ಡು ಹೊಡೆದು ಜೆಡಿಎಸ್‌ ಅಭ್ಯರ್ಥಿ ಮಂಜುನಾಥ್‌ 54 ಸಾವಿರ ಮತ ಪಡೆದಿದ್ದರು.

ಇದೀಗ 3ನೇ ಶಕ್ತಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಕಾಂಗ್ರೆಸ್‌ – ಬಿಜೆಪಿ ಮೈತ್ರಿ ಮಾಡಿಕೊಳ್ಳಲಿದೆಯೇ ಅಥವಾ ಜೆಡಿಎಸ್‌ ಜೊತೆ ಕಾಂಗ್ರೆಸ್‌ ಅಥವಾ ಬಿಜೆಪಿ ಮೈತ್ರಿ ಮಾಡಿಕೊಳ್ಳಿದೆಯೇ ಎಂಬುದು ಕುತೂಹಲವಾಗಿದೆ. ಆದರೆ, ಶಾಸಕ ನರೇಂದ್ರ ಮತ್ತು ಮಾಜಿ ಶಾಸಕಿ ಪರಿಮಳಾ ನಾಗಪ್ಪ ಅವರು ಜೆಡಿಎಸ್‌ ಪಕ್ಷವನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬದ್ಧ ವೈರಿಗಳ ನಡುವೆಯೇ ಮೈತ್ರಿ ಏರ್ಪಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಕಾಂಗ್ರೆಸ್‌ಗಿಲ್ಲ ಅಧಿಕಾರ ಭಾಗ್ಯ: ಹನೂರು ಪಟ್ಟಣವು ಕಾಂಗ್ರೆಸ್‌ ಭದ್ರಕೋಟೆಯಾಗಿದ್ದು, ಗ್ರಾಪಂ ಕೇಂದ್ರ ಸ್ಥಾನವಾದಾಗಿನಿಂದಲೂ ಕಾಂಗ್ರೆಸ್‌ ಅಧಿಕಾರ ನಡೆಸುತ್ತಾ ಬಂದಿತ್ತು. ಆದರೆ, 2019ರ ಮೇನಲ್ಲಿ ನಡೆದ ಚುನಾವಣೆಯಲ್ಲಿ ಪಕ್ಷದಲ್ಲಿ ಉಂಟಾದ ಟಿಕೆಟ್‌ ಹಂಚಿಕೆ ಗೊಂದಲ, ಇನ್ನಿತರ ಕಾರಣಗಳಿಂದ ಕೇವಲ 4 ಸ್ಥಾನಗಳನ್ನಷ್ಟೇ ಗಳಿಸಿತ್ತು.

ಇದೀಗ ಉಂಟಾಗಿರುವ ಅತಂತ್ರ ಪರಿಸ್ಥಿತಿಯ ಲಾಭ ಪಡೆದು, ಯಾವ ಪಕ್ಷ ತಮ್ಮೊಂದಿಗೆ ಕೈ ಜೋಡಿಸಿ ಮೊದಲ ಅವಧಿಗೆ ನಮಗೆ ಅಧ್ಯಕ್ಷ ಸ್ಥಾನ ಬಿಟ್ಟುಕೊಡುತ್ತದೆಯೋ ಆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಲೆಕ್ಕಾಚಾರವಾಗಿತ್ತು. ಬದಲಾದ ಮೀಸಲಾತಿ ಅನ್ವಯ ಅಧ್ಯಕ್ಷ ಹುದ್ದೆ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ. ಆದರೆ, ಕಾಂಗ್ರೆಸ್‌ನಿಂದ ಗೆಲುವು ಸಾಧಿಸಿರುವ ಎಲ್ಲರೂ ಪುರುಷ ಸದಸ್ಯರೇ ಆಗಿರುವುದರಿಂದ ಕಾಂಗ್ರೆಸ್‌ ಪಕ್ಷಕ್ಕೆ ಅಧಿಕಾರ ದೊರಕದಂತಾಗಿದೆ.

ಜೆಡಿಎಸ್‌ ಜೊತೆ ಮೈತ್ರಿಗೆ ಒಲವಿಲ್ಲ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಫರ್ಧಿಸಿ ಹಾಲಿ ಮತ್ತು ಮಾಜಿ ಶಾಸಕರು ಇಬ್ಬರಿಗೂ ನಿದ್ದೆಗೆಡಿಸಿದ್ದ ಜೆಡಿಎಸ್‌ ಪಕ್ಷವನ್ನು ಅಧಿಕಾರದಿಂದ ದೂರವಿಡಬೇಕು ಎಂಬುದು ಹಾಲಿ ಶಾಸಕ ನರೇಂದ್ರ ಮತ್ತು ಮಾಜಿ ಶಾಸಕಿ ಪರಿಮಳಾ ನಾಗಪ್ಪ ನಿರ್ಧಾರವಾಗಿದೆ. ಒಂದು ಹಂತದಲ್ಲಿ ಶಾಸಕ ನರೇಂದ್ರರಿಗಿಂತ ಮಾಜಿ ಶಾಸಕಿ ಪರಿಮಳಾ ನಾಗಪ್ಪ ಅವರಿಗೆ ಜೆಡಿಎಸ್‌ ಮೇಲೆ ಅಸಮಾಧಾನವಿದೆ ಎನ್ನಲಾಗಿದ್ದು,

ತಮ್ಮ ಪುತ್ರ ಪ್ರೀತನ್‌ ನಾಗಪ್ಪ ಅವರ ಸೋಲಿಗೆ ಅವರೇ ಕಾರಣ ಎಂಬ ಕೋಪವಿದೆ. ಈ ಹಿನ್ನೆಲೆ ಪರಿಮಳಾ ನಾಗಪ್ಪ ಅವರು ಜೆಡಿಎಸ್‌ ಜೊತೆ ಮೈತ್ರಿಗೆ ಸಿದ್ಧರಿಲ್ಲ. ಜೆಡಿಎಸ್‌ಗೆ ಅಧಿಕಾರ ನೀಡಿದಲ್ಲಿ ಮುಂದೆ ಆಗಬಹುದಾದ ಅಡೆ-ತಡೆಗಳನ್ನು ಗಮನದಲ್ಲಿಟ್ಟುಕೊಂಡು ಕುಟುಂಬ ರಾಜಕಾರಣ ಉಳಿಸಿಕೊಳ್ಳಲು ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆಯೇ ಮೈತ್ರಿ ಸಾಧ್ಯತೆಗಳಿವೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

ಐವರು ಮಹಿಳಾ ಸದಸ್ಯರು ಆಯ್ಕೆ: ಹನೂರು ಪಪಂ 13 ಸ್ಥಾನಗಳಲ್ಲಿ ಹಾಲಿ 5 ಸ್ಥಾನಗಳಲ್ಲಿ ಮಹಿಳಾ ಸದಸ್ಯರು ಆಯ್ಕೆಯಾಗಿದ್ದಾರೆ. ಇದರಲ್ಲಿ ಬಿಜೆಪಿಯಿಂದ 12 ವಾರ್ಡ್‌ ಸದಸ್ಯೆ ಚಂದ್ರಮ್ಮ, 5ನೇ ವಾರ್ಡ್‌ನ ರೂಪ ಆಯ್ಕೆಯಾಗಿದ್ದು, ಜೆಡಿಎಸ್‌ನಿಂದ 1ನೇ ವಾರ್ಡ್‌ನ ಮುಮ್ತಾಜ್‌ಭಾನು, 4ನೇ ವಾರ್ಡ್‌ನ ಮಂಜುಳಾ, 7ನೇ ವಾರ್ಡ್‌ನ ಪವಿತ್ರಾ ಆಯ್ಕೆಯಾಗಿದ್ದಾರೆ. ರೂಪ ಮತ್ತು ಮಂಜುಳಾ ಪ.ಜಾ ಮೀಸಲು ಕ್ಷೇತ್ರದಿಂದ, ಮುಮ್ತಾಜ್‌ ಭಾನು ಹಿಂದುಳಿದ ವರ್ಗ ಮೀಸಲು ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ಸಾಮಾನ್ಯ ವರ್ಗದಿಂದ ಬಿಜೆಪಿಯ ಚಂದ್ರಮ್ಮ ಮತ್ತು ಜೆಡಿಎಸ್‌ನ ಪವಿತ್ರಾ ಆಯ್ಕೆಯಾಗಿದ್ದಾರೆ.

ಆದ್ದರಿಂದ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಿರುವುದರಿಂದ ಬಿಜೆಪಿಯಿಂದ ಚಂದ್ರಮ್ಮ ಮತ್ತು ಜೆಡಿಎಸ್‌ನಿಂದ ಪವಿತ್ರಾ ಮಧ್ಯೆ ಪೈಪೋಟಿ ಏರ್ಪಟ್ಟಿದೆ ಎನ್ನಲಾಗುತ್ತಿದೆ. ಒಂದೊಮ್ಮೆ ಕಾಂಗ್ರೆಸ್‌ ಪಕ್ಷ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಲ್ಲಿ 12ನೇ ವಾರ್ಡ್‌ನ ಸದಸ್ಯೆ ಚಂದ್ರಮ್ಮ ಅಧ್ಯಕ್ಷರಾಗಲಿದ್ದಾರೆ. ಅಥವಾ ಬದಲಾದ ಪರಿಸ್ಥಿತಿಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ನಡುವೆ ಮೈತ್ರಿ ಏರ್ಪಟ್ಟಲ್ಲಿ ಅಧಿಕಾರ ಹಂಚಿಕೆಯಾಗುವ ಸಾಧ್ಯತೆಗಳಿವೆ. ಒಟ್ಟಾರೆ ಹನೂರು ಪಪಂ ಚುಕ್ಕಾಣಿ ಹಿಡಿಯಲು ಬದ್ಧವೈರಿಗಳಂತೆ ಕಾದಾಡುತ್ತಿದ್ದ ಎರಡೂ ಕುಟುಂಬಗಳು ಮೈತ್ರಿ ಮಾಡಿಕೊಳ್ಳಲಿದೆಯೇ ಅಥವಾ 3ನೇ ಶಕ್ತಿಯೊಂದಿಗೆ ಕೈ ಜೊಡಿಸಲಿದ್ದಾರೆಯೇ ಎಂಬುದು ಕುತೂಹಲ ಕೆರಳಿಸಿದೆ.

ಅಧ್ಯಕ್ಷ- ಉಪಾಧ್ಯಕ್ಷ ಚುನಾವಣೆಗೆ ಮೀಸಲಾತಿ ಪ್ರಕಟಗೊಂಡಿದ್ದು, ದಿನಾಂಕ ಇನ್ನೂ ನಿಗದಿಯಾಗಿಲ್ಲ. ದಿನಾಂಕ ನಿಗದಿಯಾದ ಬಳಿಕ ಪಕ್ಷದ 4 ಸದಸ್ಯರು, ಮುಖಂಡರು, ಕಾರ್ಯಕರ್ತರ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು.
-ಆರ್‌. ನರೇಂದ್ರ, ಶಾಸಕರು, ಹನೂರು ಕ್ಷೇತ್ರ

ನಾವು ಯಾವ ಪಕ್ಷದೊಂದಿಗೂ ಮೈತ್ರಿಗೆ ಸಿದ್ಧವಿಲ್ಲ. ಆದ್ದದರಿಂದ ನಾವು ವಿರೋಧ ಪಕ್ಷದಲ್ಲಿಯೇ ಕುಳಿತುಕೊಳ್ಳಲು ಸಿದ್ಧರಿದ್ದೇವೆ.
-ಪರಿಮಳಾ ನಾಗಪ್ಪ, ಮಾಜಿ ಶಾಸಕಿ

* ವಿನೋದ್‌ ಎನ್‌ ಗೌಡ

ಟಾಪ್ ನ್ಯೂಸ್

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-kollegala

Kollegala: ಕಲುಷಿತ ನೀರು ಸೇವಿಸಿ ನಾಲ್ವರು ಆಸ್ಪತ್ರೆಗೆ ದಾಖಲು

Elephanat-1

Chamarajanagara: ವಕ್ರದಂತ ಹೊಂದಿದ್ದ ಕಾಡಾನೆ ಸ್ವಾಭಾವಿಕ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

5

Gundlupete: ಎರಡು ಬೈಕ್ ಗಳ ನಡುವೆ ಅಪಘಾತ; ಇಬ್ಬರು ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

8(1)

Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

7(1)

Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!

21-bng

Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.