ಕೋವಿಡ್ 19 ತಡೆ ಮಾಹಿತಿಗೆ ಭಿತ್ತಿಪತ್ರ
Team Udayavani, May 16, 2020, 5:26 AM IST
ಚಾಮರಾಜನಗರ: ಜಿಲ್ಲಾಡಳಿತ ಕೋವಿಡ್-19 ವೈರಾಣು ತಡೆಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಾಗೂ ಯೋಜನೆಗಳ ಮಾಹಿತಿ ಭಿತ್ತಿ ಪತ್ರವನ್ನು ಜಿಲ್ಲಾ ಧಿಕಾರಿ ಡಾ. ಎಂ.ಆರ್.ರವಿ ಬಿಡುಗಡೆ ಮಾಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಜಿಲ್ಲಾಡಳಿತ, ಜಿಪಂ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಕಲ್ಯಾಣ ಮಂಡಳಿ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಕಾರ್ಮಿಕ ಅಧಿಕಾರಿ ಕಚೇರಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಚಾಮರಾಜನಗರ ಶಾಖೆ ಸಹ ಯೋಗದಲ್ಲಿ ರೂಪಿಸಿರುವ ಆರೋಗ್ಯ ಸಂಬಂಧಿ ಮಾಹಿತಿಯನ್ನು ಪ್ರಚುರ ಪಡಿಸುವ ಭಿತ್ತಿಪತ್ರ ಬಿಡುಗಡೆಗೊಳಿಸಿದರು.
ಆರೋಗ್ಯ ಸೇತು ಆ್ಯಪ್, ಔಷಧ ಮಿತ್ರ, ಆಯುಷ್ ಪದ್ಧತಿಯಿಂದ ವೈರಾಣು ತಡೆ ಗಟ್ಟುವ ವಿಧಾನ, ಹಿರಿಯ ನಾಗರಿಕರ, ಮಹಿಳೆ ಯರ, ಮಂಗಳಮುಖೀ ಯರ ಕೌಟುಂಬಿಕ ಹಾಗೂ ಮಾನಸಿಕ ಒತ್ತಡಗಳ ನಿವಾರಣೆಯ ಆಸರೆ ಸಹಾಯವಾಣಿಗಳ ಸಮಗ್ರ ಮಾಹಿತಿ ಯನ್ನು ಭಿತ್ತಿಪತ್ರದಲ್ಲಿ ಅಳವಡಿಸಲಾಗಿದೆ.
ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಮಾತ ನಾಡಿ, ಜಿಲ್ಲೆಯ ಜನತೆಗೆ ಆರೋಗ್ಯ ಪೂರಕ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ವಿವಿಧ ಕಾರ್ಯಕ್ರಮ ರೂಪಿಸಿ ಅನುಷ್ಠಾನ ಮಾಡ ಲಾಗುತ್ತಿದೆ ಎಂದರು. ಈ ವೇಳೆ ಡಾ.ಮಹೇಶ್, ವಾರ್ತಾ ಮತ್ತು ಸಾರ್ವ ಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ರಮೇಶ್, ಜಿಲ್ಲಾ ಕಾರ್ಮಿಕಾಧಿಕಾರಿ ಮಹದೇವಯ್ಯ, ನಿರೀಕ್ಷಕಿ ಗೀತಾ, ಜಿಲ್ಲಾ ಕಾರ್ಮಿಕ ಯೋಜನಾ ಸೊಸೈಟಿ ಮಹೇಶ್, ಡಾ.ಗಿರೀಶ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.