ಕೊರೊನಾ ಹರಡದಂತೆ ಮುಂಜಾಗ್ರತಾ ಕ್ರಮ


Team Udayavani, Mar 5, 2020, 3:00 AM IST

corona-harada

ಚಾಮರಾಜನಗರ: ಕೇರಳ ಮತ್ತು ತಮಿಳುನಾಡಿಗಳನ್ನು ಹಂಚಿಕೊಂಡಿರುವ ಜಿಲ್ಲೆಯಲ್ಲಿ ಕೊರೊನಾ ವೈರಸ್‌ ಹರಡದಂತೆ ಜಿಲ್ಲಾಡಳಿತ, ಜಿಪಂ ಮತ್ತು ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿವೆ.

ನೆರೆಯ ಕೇರಳ ಜಿಲ್ಲೆಯಲ್ಲಿ ಕೊರೊನಾ ವೈರಸ್‌ ಪ್ರಕರಣಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಕೇರಳ ಗಡಿಯಾದ ಮೂಲೆಹೊಳೆ ಚೆಕ್‌ಪೋಸ್ಟ್‌ ಹಾಗೂ ತಮಿಳುನಾಡು ಊಟಿಯಿಂದ ಪ್ರವಾಸಿಗರು ಬರುವ ಹಿನ್ನೆಲೆಯಲ್ಲಿ ಬಂಡೀಪುರ ಚೆಕ್‌ಪೋಸ್ಟ್‌ನಲ್ಲಿ ಆರೋಗ್ಯ ಸಿಬ್ಬಂದಿ ನಿಯೋಜಿಸಲಾಗಿದೆ. ಈ ಸಿಬ್ಬಂದಿ ನೆರೆ ರಾಜ್ಯದಿಂದ ಬರುವ ವಾಹನಗಳ ಪ್ರಯಾಣಿಕರನ್ನು ತಪಾಸಣೆಗೊಳಪಡಿಸುತ್ತಿದ್ದಾರೆ.

ವಿದೇಶಿ ಪ್ರವಾಸಿಗರ ಮೇಲೆ ನಿಗಾ: ಬಂಡೀಪುರಕ್ಕೆ ವಿದೇಶಿ ಪ್ರವಾಸಿಗರು ಭೇಟಿ ನೀಡುವುದರಿಂದ ಅವರ ಪ್ರಯಾಣಿಸುವ ವಾಹನಗಳನ್ನು ಹಾಗೂ ಸಾರ್ವಜನಿಕ ಸಾರಿಗೆ ಬಸ್‌ಗಳನ್ನು ತಪಾಸಣೆಗೊಳಪಡಿಸಲಾಗುತ್ತಿದೆ. ವಿದೇಶಿ ಪ್ರವಾಸಿಗರು ಹಾಗೂ ಪ್ರಯಾಣಿಕರನ್ನು ಥರ್ಮಲ್‌ ಸ್ಕ್ಯಾನಿಂಗ್‌ಗೆ ಒಳಪಡಿಸಲಾಗುತ್ತಿದೆ. ವಿಶೇಷವಾಗಿ ದೇಹದಲ್ಲಿ ಉಷ್ಣಾಂಶ ಹೆಚ್ಚಾಗಿರುವವರನ್ನು ಕೂಲಂಕಷವಾಗಿ ಪರೀಕ್ಷೆ ಮಾಡಲಾಗುತ್ತಿದೆ.

ವಿಶೇಷ ವಾರ್ಡ್‌ಗಳ ಸ್ಥಾಪನೆ: ಕೊಳ್ಳೇಗಾಲ, ಹನೂರು, ಯಳಂದೂರು, ಗುಂಡ್ಲುಪೇಟೆ ನಾಲ್ಕು ತಾಲೂಕು ಕೇಂದ್ರಗಳಲ್ಲಿ ಹಾಗೂ ಜಿಲ್ಲಾ ಕೇಂದ್ರದ ಆಸ್ಪತ್ರೆಯಲ್ಲಿ ತಲಾ ಐದು ಹಾಸಿಗೆಗಳ ವಿಶೇಷ ಕೊರೊನಾ ವೈರಸ್‌ ವಾರ್ಡ್‌ಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯ ಆರೋಗ್ಯ ಸಿಬ್ಬಂದಿಗೆ ಕೊರೊನಾ ವೈರಸ್‌ ಬಗ್ಗೆ ಮಾಹಿತಿ ನೀಡಿ ವಿಶೇಷ ತರಬೇತಿ ನೀಡಲಾಗಿದೆ.

ಜಿಲ್ಲಾದ್ಯಂತ ಆರೋಗ್ಯ ಸಿಬ್ಬಂದಿ ಬಸ್‌ ನಿಲ್ದಾಣಗಳಲ್ಲಿ ಕರಪತ್ರಗಳನ್ನು ಹಂಚಿ ಸಾರ್ವಜನಿಕರಿಗೆ ಕೊರೊನಾ ವೈರಸ್‌ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಜ್ವರ ಮತ್ತು ಶೀತದ ಲಕ್ಷಣಗಳು ಕಂಡು ಬಂದಾಗ, ಕೆಮ್ಮುವಾಗ, ಸೀನುವಾಗ ಕರವಸ್ತ್ರವನ್ನು ಅಡ್ಡಹಿಡಿಯಿರಿ. ಆಗಾಗ ಸೋಪಿನಿಂದ ಕೈತೊಳೆಯಿರಿ. ಸಾರ್ವಜನಿಕ ಸ್ಥಳಗಳಲ್ಲಿ ಕೆಮ್ಮುವವರು, ಜ್ವರದ ಲಕ್ಷಣ ಇರುವವರ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಮಾಹಿತಿ ನೀಡಲಾಗುತ್ತಿದೆ.

ತೀವ್ರ ಮುನ್ನೆಚ್ಚರಿಕೆ ವಹಿಸಿದ್ದೇವೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ.ರವಿ ಉದಯವಾಣಿಯೊಂದಿಗೆ ಮಾತನಾಡಿ, ನಮ್ಮದು ಗಡಿ ಜಿಲ್ಲೆಯಾದ್ಯರಿಂದ ಕೊರೊನಾ ವೈರಸ್‌ ಹರಡದಂತೆ ತೀವ್ರ ಮುನ್ನೆಚ್ಚರಿಕೆ ವಹಿಸಲಾಗಿದೆ. ಮಲೆ ಮಹದೇಶ್ವರ ಬೆಟ್ಟಕ್ಕೆ ತಮಿಳುನಾಡಿನಿಂದ ಭಕ್ತಾದಿಗಳು ಬರುವುದರಿಂದ ಅಲ್ಲಿಯೂ ಆರೋಗ್ಯ ಸಿಬ್ಬಂದಿ ತಪಾಸಣೆ ನಡೆಸುತ್ತಿದ್ದಾರೆ ಎಂದರು.

ಜಿಲ್ಲೆ ಮತ್ತು ತಾಲೂಕು ಕೇಂದ್ರಗಳ ಆಸ್ಪತ್ರೆಗಳಲ್ಲಿ ಸ್ಥಾಪಿಸಲಾಗಿರುವ ವಿಶೇಷ ವಾರ್ಡ್‌ಗಳಲ್ಲಿ ಔಷಧಿಗಳ ದಾಸ್ತಾನು ಮಾಡಲಾಗಿದೆ. ಶೀತ, ಕೆಮ್ಮು, ಜ್ವರಕ್ಕೆ ನೀಡಲಾಗುವ ಔಷಧಿಗಳನ್ನೇ ಆರಂಭಿಕ ಚಿಕಿತ್ಸೆಗೆ ಬಳಸಲಾಗುತ್ತದೆ. ಮಾಸ್ಕ್ಗಳು ಸಾಕಷ್ಟು ಸಂಖ್ಯೆಯಲ್ಲಿ ಲಭ್ಯವಿದೆ ಎಂದರು.

ವೈದ್ಯಕೀಯ ಸಿಬ್ಬಂದಿಗೆ ತರಬೇತಿ ನೀಡಲು ಸಜ್ಜಾಗಿ: ಜಿಲ್ಲೆಯಲ್ಲಿ ಕೊರೊನಾ ವೈರಸ್‌ ಹರಡದಂತೆ ಮುಂಜಾಗ್ರತೆ ವಹಿಸಬೇಕಿರುವ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ ಅವರು ಸಭೆ ನಡೆಸಿದ್ದಾರೆ. ಜಿಲ್ಲಾ ಕೇಂದ್ರ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಕೊರೊನಾ ವೈರಸ್‌ ಸೋಂಕಿತರ ಚಿಕಿತ್ಸೆಗಾಗಿಯೆ ಪ್ರತ್ಯೇಕ ವಾರ್ಡ್‌ಗಳನ್ನು ಸ್ಥಾಪಿಸಬೇಕು.

ಮಾಸ್ಕ್, ಔಷಧ ಉಪಚಾರ ದಾಸ್ತಾನು ಮಾಡಿಕೊಂಡಿರಬೇಕು. ಪ್ರತಿ ಅಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಗೆ ಕೊರೊನಾ ವೈರಸ್‌ ಲಕ್ಷಣಗಳ ಚಿಕಿತ್ಸೆ ಹಾಗೂ ಶುಶ್ರೂಷೆಗೆ ಅಗತ್ಯ ಮಾರ್ಗದರ್ಶನ, ತರಬೇತಿ ನೀಡಿ ಸಜ್ಜಾಗಬೇಕು ಎಂದು ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದ್ದಾರೆ.

ಕಟ್ಟೆಚ್ಚರ ವಹಿಸಿ: ಅಂತರರಾಜ್ಯ ಸಂಪರ್ಕಿಸುವ ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ವ್ಯಾಪಕವಾಗಿ ನಿಗಾ ವಹಿಸಬೇಕು. ಈಗಾಗಲೇ ಗುಂಡ್ಲುಪೇಟೆ ಭಾಗದ ಮೂಲೆಹೊಳೆ, ಬಂಡೀಪುರ, ಮಲೆ ಮಹದೇಶ್ವರ ಬೆಟ್ಟ, ಕೊಳ್ಳೇಗಾಲ ಬಸ್‌ ನಿಲ್ದಾಣದಂತಹ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯಕೀಯ ತಂಡಗಳು ಕಟ್ಟೆಚ್ಚರ ವಹಿಸಿ ಹೊರರಾಜ್ಯ, ಪ್ರದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ಗಮನ ಹರಿಸಬೇಕು ಎಂದು ಸಭೆಯಲ್ಲಿ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ.

ವಿದೇಶಿಯರ ಪ್ರವಾಸದ ಮಾಹಿತಿ ನೀಡಿ: ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಹೊರ ಭಾಗಗಳಿಂದ ಬರುವವರ ಮೇಲೆ ನಿಗಾ ಇರಿಸಬೇಕು. ಜಿಲ್ಲೆಯ ಜನರು ಸೋಂಕು ಕಂಡುಬಂದಿರುವ ದೇಶಗಳಿಗೆ ಭೇಟಿ ನೀಡುವುದನ್ನು ಮುಂದೂಡಬೇಕು. ಹೊರದೇಶಗಳಿಂದ ಜಿಲ್ಲೆಗೆ ಆಗಮಿಸಿರುವವರು ಮಾಹಿತಿ ನೀಡಬೇಕು. ಜಿಲ್ಲೆಯ ಜನತೆ ಸಹ ತಮ್ಮ ನೆರೆಹೊರೆಯಲ್ಲಿ ಹೊರದೇಶಗಳಿಂದ ಬಂದಿರುವವರ ಕುರಿತು ಮಾಹಿತಿ ಇದ್ದಲ್ಲಿ ಸ್ಥಳೀಯ ಆಸ್ಪತ್ರೆ ಅಧಿಕಾರಿಗಳಿಗೆ ತಿಳಿಸಬೇಕು ಎಂದು ಸೂಚನೆ ನೀಡಿದ್ದಾರೆ.

ಹೋಟೆಲ್‌, ವಸತಿ ಗೃಹಗಳಲ್ಲಿ ವಿದೇಶಿಗರು ವಾಸ್ತವ್ಯ ಹೂಡಿದ್ದಲ್ಲಿ ಅದರ ಮಾಹಿತಿಯನ್ನು ನೀಡಬೇಕು. ಪ್ರತಿ ಹೋಟೆಲ್‌, ರೆಸ್ಟೋರೆಂಟ್‌ ಸೇರಿದಂತೆ ಎಲ್ಲೆಡೆ ಶುಚಿತ್ವ ಕಾಪಾಡಿಕೊಳ್ಳಬೇಕು. ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಅಧಿಕಾರಿಗಳು ನೈರ್ಮಲ್ಯ ಕ್ರಮಗಳಿಗೆ ವಿಶೇಷ ಗಮನ ನೀಡಿ ಪರಿಶೀಲನೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಸ್ವಚ್ಛತೆಗೆ ಜಾಗೃತಿ ಮೂಡಿಸಿ: ವೈಯಕ್ತಿಕ ಸ್ವಚ್ಚತೆಗೆ ಜಾಗೃತಿ ಮೂಡಿಸಬೇಕು. ಕರಪತ್ರ, ಧ್ವನಿಮುದ್ರಿಕೆ, ಬ್ಯಾನರ್‌ ಇನ್ನಿತರ ವಿಧಾನಗಳ ಮೂಲಕ ರೋಗ ಲಕ್ಷಣಗಳು ಹಾಗೂ ಹರಡುವಿಕೆ ತಡೆಯುವ ಕುರಿತು ಪರಿಣಾಮಕಾರಿಯಾಗಿ ಜನರಲ್ಲಿ ಅರಿವು ಮೂಡಿಸಬೇಕು. ನರ್ಸಿಂಗ್‌ ಕಾಲೇಜು, ಇತರೆ ವೈದ್ಯಕೀಯ ಸಿಬ್ಬಂದಿ ನೆರವಿನೊಂದಿಗೆ ವ್ಯಾಪಕ ಜಾಗೃತಿಗೆ ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಕೊರೊನ ವೈರಸ್‌ ರೋಗದ ಬಗ್ಗೆ ಯಾವುದೇ ಅತಂಕ ಪಡೆದೇ ರೋಗ ಲಕ್ಷಣ ಹಾಗೂ ವಹಿಸಬೇಕಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜಾಗೃತಿ ವಹಿಸಬೇಕು. ಕೊರೊನಾ ವೈರಸ್‌ ಲಕ್ಷಣ ಮತ್ತು ಹರಡುವ ವಿಧಗಳ ಬಗ್ಗೆ ಅರಿವು ಹೊಂದಬೇಕು. ರೋಗ ಲಕ್ಷಣಗಳು ಕಂಡುಬಂದಲ್ಲಿ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಬೇಕು. ಅನಗತ್ಯವಾಗಿ ಯಾವುದೇ ಭೀತಿ, ಅತಂಕ, ವದಂತಿಗಳಿಗೆ ಒಳಗಾಗಬಾರದು. ಅನುಸರಿಸಬೇಕಿರುವ ಮುಂಜಾಗರೂಕತಾ ಕ್ರಮಗಳನ್ನು ಪಾಲನೆ ಮಾಡಬೇಕು.
-ಡಾ.ಎಂ.ಆರ್‌.ರವಿ, ಜಿಲ್ಲಾಧಿಕಾರಿ

ಕೈಗಳ ಶುಚಿತ್ವ, ಮಾಸ್ಕ್ ಧರಿಸುವಿಕೆ, ಕೆಮ್ಮು ಮತ್ತು ಸೀನುವಾಗ ಕೈ ವಸ್ತ್ರ ಬಳಸಬೇಕು. ದೀರ್ಘ‌ಕಾಲ ಜ್ವರ, ನೆಗಡಿ, ಕೆಮ್ಮು ಉಸಿರಾಟದ ತೊಂದರೆ, ಭೇದಿಯಂತಹ ಲಕ್ಷಣಗಳು ಕಂಡು ಬಂದಲ್ಲಿ ಹತ್ತಿರದ ಪ್ರಾಥಮಿಕ ಕೇಂದ್ರ, ಆಸ್ಪತ್ರೆಗೆ ಭೇಟಿ ನೀಡಬೇಕು. ಜನರ ಆರೋಗ್ಯ ಕಾಳಜಿಗಾಗಿ 24*7 ಅವಧಿಯಲ್ಲಿಯೂ ಉಚಿತ ಆರೋಗ್ಯ ವಾಣಿ 104ಕ್ಕೆ ಕರೆ ಮಾಡಬಹುದು.
-ಡಾ.ನಾಗರಾಜು, ಜಿಲ್ಲಾ ಸರ್ವೇಲೆನ್ಸ್‌ ಅಧಿಕಾರಿ

* ಕೆ.ಎಸ್‌. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

Bandipur:  ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ

Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.