ಸ್ಪರ್ಧಾತ್ಮಕ ಪರೀಕ್ಷೆ ಅಧ್ಯಯನ ಕೇಂದ್ರವಿರುವ ಲೈಬ್ರರಿ ಸಿದ್ಧಪಡಿಸಿ
Team Udayavani, Feb 19, 2022, 1:26 PM IST
ಚಾಮರಾಜನಗರ: ಜಿಲ್ಲಾ ಕೇಂದ್ರದಲ್ಲಿ ಓದುಗರಿಗೆ ಹಾಗೂ ಐಎಎಸ್, ಕೆಎಎಸ್ ಸೇರಿದಂತೆ ಎಲ್ಲಾಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಅಭ್ಯರ್ಥಿಗಳಿಗೆನೆರವಾಗುವಂತಹ ಸ್ಪರ್ಧಾತ್ಮಕ ಪರೀಕ್ಷಾ ಅಧ್ಯಯನ ಕೇಂದ್ರವನ್ನೊಳಗೊಂಡ ಸುಸಜ್ಜಿತ ಗ್ರಂಥಾಲಯವನ್ನುಇನ್ನು 5 ರಿಂದ 6 ತಿಂಗಳೊಳಗೆ ಕಲ್ಪಿಸಲು ಜಿಲ್ಲಾಉಸ್ತುವಾರಿ ಸಚಿವ ವಿ. ಸೋಮಣ್ಣ ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರಿನ ವಿಧಾನಸೌಧದಲ್ಲಿರುವ ತಮ್ಮಕಚೇರಿಯಲ್ಲಿ ಶುಕ್ರವಾರ ಗ್ರಂಥಾಲಯ, ಇನ್ನಿತರ ಮೂಲಸೌಕರ್ಯ ಸಂಬಂಧ ಅಧಿಕಾರಿಗಳ ಸಭೆನಡೆಸಿದ ಸಚಿವರು, 10 ಕೋಟಿ ರೂ.ವೆಚ್ಚದಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಗತ್ಯ ಪ್ರಕ್ರಿಯೆಯನ್ನು ತುರ್ತಾಗಿ ಕೈಗೊಳ್ಳುವಂತೆನಿರ್ದೇಶನ ನೀಡಿದರು. ನಗರದಲ್ಲಿ ಐಎಎಸ್, ಕೆಎಎಸ್ ಪರೀಕ್ಷೆಗೆ ಅಣಿಗೊಳ್ಳುವ ಅಭ್ಯರ್ಥಿಗಳುಹಾಗೂ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗಲು ಅಗತ್ಯವಿರುವ ಸ್ಪರ್ಧಾತ್ಮಕ ಪರೀಕ್ಷಾ ಅಧ್ಯಯನ ಕೇಂದ್ರ ಒದಗಿಸಬೇಕಿದೆ. ಡಿಜಿಟಲ್ ಗ್ರಂಥಾಲಯ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಅಧ್ಯಯನ ಕೇಂದ್ರಕ್ಕೆ ಪೂರಕವಾಗಿರುವ ವ್ಯವಸ್ಥೆಗಳು ಗ್ರಂಥಾಲಯ ಕಟ್ಟಡದಲ್ಲಿ ಇರಬೇಕು ಎಂದರು.
ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರದಲ್ಲಿಪರೀಕ್ಷೆಗೆ ಸಿದ್ಧರಾಗುವ ಅಭ್ಯರ್ಥಿಗಳಿಗೆ ವಿಷಯತಜ್ಞರು, ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸಬೋಧನೆ ತರಬೇತಿಗೆ ಅನುಕೂಲವಾಗುವಸಭಾಂಗಣವನ್ನೂ ನಿರ್ಮಿಸಬೇಕು ಎಂದು ಸಚಿವರು ತಿಳಿಸಿದರು.
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಪಡಿಸಲು ನಗರೋತ್ಥಾನ 4ನೇ ಹಂತದ ಯೋಜನೆಯನ್ನು ಸಮರ್ಪಕ ಅನುಷ್ಠಾನಗೊಳಿಸಬೇಕು. ಕಾಮಗಾರಿಯು ಗುಣಮಟ್ಟದ್ದಾಗಿರಬೇಕು. ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ನೋಡಿಕೊಳ್ಳಬೇಕು ಎಂದರು.
ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸರ್ಕಾರದ ಆದೇಶದಂತೆ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರವಿತರಿಸಲು ಕ್ರಮ ಕೈಗೊಳ್ಳಬೇಕು. ಚಾಮರಾಜನಗರ ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣವೇಳೆ ಮನೆ ಕಳೆದುಕೊಂಡಿರುವವರಿಗೆ ನಿವೇಶನನೀಡಲಾಗಿದ್ದು, ಅವರಿಗೆ ಮನೆ ನಿರ್ಮಿಸಲುಮೂಲ ಸೌಕರ್ಯ ಕಲ್ಪಿಸಲು ಮುಂದಾಗುವಂತೆವಿ. ಸೋಮಣ್ಣ ನಿರ್ದೇಶನ ನೀಡಿದರು.
ಸಭೆಯಲ್ಲಿ ಶಾಸಕ ಸಿ.ಎಸ್. ನಿರಂಜನ್‌ಕುಮಾರ್, ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ.ಸತೀಶ್‌ಕುಮಾರ್ ಎಸ್. ಹೊಸಮನಿ, ಜಿಲ್ಲಾನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಕೆ. ಸುರೇಶ್, ವರದರಾಜು, ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಸುರೇಂದ್ರ, ಜಿಲ್ಲಾ ಮುಖ್ಯಗ್ರಂಥಾಲ ಯ ಅಧಿಕಾರಿ ಆರ್. ಶಿವಸ್ವಾಮಿ,ಗುಂಡ್ಲುಪೇಟೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪರಮೇಶ್ ಇತರರಿದ್ದರು.
28ರೊಳಗೆ ವಸತಿ ಪಟ್ಟಿ ಸಲ್ಲಿಸಿ: ಸಚಿವ : ವಸತಿ ಯೋಜನೆಯಡಿ ನೀಡಲಾದ ಗುರಿಗೆ ಅನುಗುಣವಾಗಿ ತುರ್ತಾಗಿ ಫಲಾನುಭವಿಗಳನ್ನುಆಯ್ಕೆ ಮಾಡಿ ಆಧಾರ್ ಪ್ರತಿಯೊಂದಿಗೆ ಫಲಾನುಭವಿಗಳ ಪಟ್ಟಿಯನ್ನು ಫೆ.28ರೊಳಗೆಇಲಾಖೆಗೆ ಸಲ್ಲಿಸಬೇಕೆಂದು ಅಧಿಕಾರಿಗಳಿಗೆ ಸಚಿವ ಸೋಮಣ್ಣ ಸಚಿವರು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.