ಮಹದೇಶ್ವರ ಬೆಟ್ಟದಲ್ಲಿಸಿಎಂ ಆಗಮನಕ್ಕೆ ಸಿದ್ಧತೆ

ಮುಖ್ಯಮಂತ್ರಿ ಬಿಎಸ್‌ವೈ ಭೇಟಿ ಹಿನ್ನೆಲೆಯಲ್ಲಿ ಬೆಟ್ಟದಲ್ಲಿ ಸುರೇಶ್‌ಕುಮಾರ್‌ ಸಿದ್ಧತೆ ಪರಿಶೀಲನೆ

Team Udayavani, Nov 25, 2020, 12:23 PM IST

mahadeshwara-hill

ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಯಾತ್ರಾಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ನೆರವೇರಿಸಲು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಬುಧವಾರ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಸಂಬಂಧ ನಡೆಸಲಾಗಿರುವ ಸಿದ್ಧತೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಸುರೇಶ್‌ಕುಮಾರ್‌ ಮಂಗಳವಾರ ಪರಿಶೀಲನೆ ನಡೆಸಿದರು.

ಸಮಾರಂಭ ನಡೆಯುವ ರಂಗಮಂದಿರಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರು ಅಲ್ಲಿ ನಿರ್ಮಿಸಲಾಗಿರುವ ವೇದಿಕೆ, ಹಾಕಲಾಗಿರುವ ಅಸನಗಳ ಅಳವಡಿಕೆ ಕಾರ್ಯವನ್ನು ವೀಕ್ಷಿಸಿದರು. ವೇದಿಕೆಗೆ ಸಂಬಂಧಿಸಿದ ಪೂರಕವಾದ ಇತರೆ ಸಿದ್ಧತೆಗಳನ್ನು ವ್ಯಾಪಕವಾಗಿ ಪರಿಶೀಲಿಸಿದರು.

ಬಳಿಕ ಮುಖ್ಯಮಂತ್ರಿಯವರು ಹೆಲಿಪಾಪ್ಟರ್‌ ಮೂಲಕ ಆಗಮಿಸಲಿರುವ ಹಿನ್ನೆಲೆಯಲ್ಲಿ ಹೆಲಿಪ್ಯಾಡ್‌ಗೆ ಭೇಟಿ ನೀಡಿ ಅಲ್ಲಿ ಕೈಗೊಂಡಿರುವ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು.

ಇದನ್ನೂ ಓದಿ:ಜೈಲಿನಿಂದಲೇ ಲಾಲೂ ಕುದುರೆ ವ್ಯಾಪಾರ! ಎನ್ ಡಿಎ ಸರ್ಕಾರ ಪತನಕ್ಕೆ ಆರ್ ಜೆಡಿ ಪ್ಲ್ಯಾನ್,

ಉದ್ಘಾಟನೆಗೆ ಸಿದ್ದವಾಗಿರುವ ಅಂತರಗಂಗೆ ಸಮೀಪದ ಕಲ್ಯಾಣಿ, ವಾಣಿಜ್ಯ ಸಂಕೀರ್ಣದಲ್ಲಿ ನಿರ್ಮಿಸಿರುವ ಮಾಹಿತಿಕೇಂದ್ರ, ನಾಗಮಲೆ ಭವನದಲ್ಲಿ ನಿರ್ಮಿಸಿರುವ ವಿಡಿಯೋ ಕಾನ್ಫರೆನ್ಸ್‌ ಹಾಲ್‌, ಆಧುನಿಕ ಶೌಚಾಲಯಗಳ ಕಟ್ಟಡಗಳು ಸೇರಿದಂತೆ ಭಕ್ತಾಧಿಗಳ ಅನುಕೂಲಕ್ಕೆ ನಿರ್ಮಿಸಿರುವ ಸೌಲಭ್ಯಗಳನ್ನು ಪರಿವೀಕ್ಷಣೆ ಮಾಡಿದರು.

ಮುಖ್ಯಮಂತ್ರಿಯವರು ಭೇಟಿ ನೀಡಲಿರುವ  ‌ ಮಲೆ ಮಹದೇಶ್ವರ ಕ್ಷೇತ್ರದ ಸ್ಥಳಗಳಿಗೂ ಜಿಲ್ಲಾ ಉಸ್ತುವಾರಿ ಸಚಿವರು ಬೇಟಿ ನೀಡಿದರು. ಪ್ರಾಧಿಕಾರದ ಸಭೆ ನಡೆಯಲಿರುವ ನಾಗಮಲೆ ಭವನದ ಸಭಾಂಗಣಕ್ಕೂ ಭೇಟಿ ನೀಡಿ ಅಲ್ಲಿ ಕೈಗೊಂಡಿರುವ  ಪೂರ್ವಸಿದ್ದತೆಗಳನ್ನು ಪರಿಶೀಲಿಸಿದರು.

ನಾಗಮಲೆ ಭವನದ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಕಾರ್ಯಕ್ರಮ ಸಂಬಂಧ ಸಮಾಲೋಚನೆ ನಡೆಸಿದ ಜಿಲಾ ಉಸ್ತುವಾರಿ  ಸ‌ಚಿವರು ಮುಖ್ಯಮಂತ್ರಿಯವರ ಭೇಟಿ ಕಾರ್ಯಕ್ರಮ ಸಂಬಂಧ ಕೈಗೊಂಡಿರುವ ಎಲ್ಲಾ ವ್ಯವಸ್ಥೆಗಳ ಸಂಪೂರ್ಣ ವಿವರ‌ ಪಡೆದ ಜಿಲ್ಲಾ ಉಸ್ತುವಾರಿ ಸಚಿವರು ಶಿಷ್ಠಾಚಾರ ಪಾಲನೆಯಾಗಬೇಕು. ಯಾವುದೇ ಲೋಪಕ್ಕೆ ಅವಕಾಶವಾಗದ ‌ ಹಾಗೇ ಅಚ್ಚು ಕಟ್ಟಾಗಿ ಕಾರ್ಯಕ್ರಮ ಯಶಸ್ವಿಗೊಳಿಸಲು ಎಲ್ಲಾ ಅವಶ್ಯ ಸಿದ್ಧತೆಗಳನ್ನು ಕೈಗೊಳ್ಳಲು ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌. ಆನಂದ್‌, ಮಗದೇಶ್ವರ ಬೆಟ್ಟದ ಕ್ಷೇತ್ರಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್‌ ಸುರೇಂದ್ರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜವರೇಗೌಡ ಸೇರಿದಂತೆ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

ಇಂದು ಜಿಲ್ಲೆಗೆ ಸಿಎಂ ಬಿಎಸ್‌ವೈ ಭೇಟಿ

ಚಾಮರಾಜನಗರ: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ  ಅವರು ಬುಧವಾರ, ಗುರುವಾರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ, ವಿವಿಧ ಅಭಿವೃದ್ದಿ ಕಾರ್ಯಕ್ರಮಗಳಿಗೆ  ಚಾಲನೆ ನೀಡಲಿದ್ದಾರೆ.

ಬುಧವಾರ ಸಂಜೆ 4 ಕ್ಕೆ ಮುುಖ್ಯಮಂತ್ರಿಯವರು ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ನಂತರ ಮಲೆ ಮಹದೇಶ್ವರಸ್ವಾಮಿ ದರ್ಶನ ಪಡೆಯುವರು. 4.30 ಕ್ಕೆ ಸಾಲೂರು ಮಠಕ್ಕೆ ಭೇಟಿ ನೀಡುವರು. 5 ಕ್ಕೆ ಮಲೆ ಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿ ವಾಸ್ತವ್ಯ ಹೂಡುವರು.

ಗುರುವಾರ ಬೆಳಗ್ಗೆ 8.30 ಕ್ಕೆ ಮಲೆ ಮಹದೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯುವರು. 9 ಕ್ಕೆ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಸುತ್ತೂರು ಮಠದ ಶಾಖೆಗೆ ಭೇಟಿ ನೀಡುವರು.10.15ಕ್ಕೆ ಪ್ರಾಧಿಕಾರದ ಸಭಾಂಗಣದಲ್ಲಿ ಸಂವಿಧಾನ ದಿನಾಚಾರಣೆ ಅಂಗವಾಗಿ ಭಾರತದ ಸಂವಿಧಾನದ ಪ್ರಸ್ತಾವನೆ ಓದುವುದು ಕಾರ್ಯಕ್ರಮದಲ್ಲಿ ಭಾಗವಹಿಸುವರು.

10.30 ಕ್ಕೆ ಮಹದೇಶ್ವರ ಬೆಟ್ಟದಲ್ಲಿ ಮಲೆ ಮಹದೇಶ್ವರ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದಿಂದ ಆಯೋಜಿಸಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳು, ತಾಳಬೆಟ್ಟದಿಂದ ಮಹದೇಶ್ವರ ಬೆಟ್ಟದವರೆಗೆ ನಿರ್ಮಿಸಲು ಉದ್ದೇಶಿಸಿರುವ ಪಾದಚಾರಿ ಮೆಟ್ಟಿಲುಗಳ ಯೋಜನೆ, ಭಕ್ತಾದಿಗಳ ಕ್ಯೂ ಲೈನ್‌ ನಿರ್ಮಾಣ ಕಾಮಗಾರಿ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ನೆರವೇರಿಸುವರು. ಮಧ್ಯಾಹ್ನ 12ಕ್ಕೆ ಬೆಂಗಳೂರಿಗೆ ತೆರಳುವರು.

ಮುಖ್ಯಮಂತ್ರಿಯವರ ಜತೆ ಉಪಮುಖ್ಯಮಂತ್ರಿ, ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್‌ಕುಮಾರ್‌, ಹಿಂದೂ ಧಾರ್ಮಿಕ ಧರ್ಮಾದಾಯ ದತ್ತಿ ಸಚಿವ ಕೋಟ ಶ್ರೀನಿವಾಸಪೂಜಾರಿ ಸಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು.

ಲೋಕೋಪಯೋಗಿ ಇಲಾಖೆ ಹಾಗೂ ಪ್ರಾಧಿಕಾರದ ವತಿಯಿಂದ1384.10 ಲಕ್ಷ ರೂ. ವೆಚ್ಚದಲ್ಲಿ ಪೂರ್ಣಗೊಂಡು ಲೋಕಾರ್ಪಣೆ ಸಿದ್ಧವಾಗಿದೆ. ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಮಾಸ್ಟರ್‌ ಪ್ಲಾನ್‌ ಆವರಣದಲ್ಲಿ ಪ್ರಾಧಿಕಾರದ ಅನುದಾನದಲ್ಲಿ ಲೋಕೋಪಯೋಗಿ ಇಲಾಖೆ ಹಾಗೂ ಪ್ರಾಧಿಕಾರದ ವತಿಯಿಂದ 10993 ಲಕ್ಷ ರೂ.ಗಳ ವೆಚ್ಚದಲ್ಲಿ ಶಂಕುಸ್ಥಾಪನೆಗೆ ಸಿದ್ಧಗೊಂಡಿವೆ.

ಕೋವಿಡ್‌ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮಗಳಿಗೆ ಆಹ್ವಾನಿತರಿಗೆ ಮಾತ್ರ ಪ್ರವೇಶವಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವ ಸ್ವಾಮಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.