ನನಗೆ ಕರ್ನಾಟಕಕ್ಕೆ ಬರಲು ತುಂಬಾ ಇಷ್ಟ: ಕನ್ನಡದಲ್ಲಿ ಮಾತಾಡಿದ ರಾಷ್ಟ್ರಪತಿ

Team Udayavani, Oct 7, 2021, 8:06 PM IST

fcgdrty5r

ಚಾಮರಾಜನಗರ: ನಮ್ಮ ತಂತ್ರಜ್ಞಾನ, ಮಾನವ ಸಂಪನ್ಮೂಲ ಎರಡೂ ಜೊತೆಯಾಗಿ ಕಾರ್ಯೋನ್ಮುಖವಾದಾಗ ಮಾತ್ರ ನಾವು ಆತ್ಮನಿರ್ಭರ ಭಾರತವನ್ನು ನಿರ್ಮಿಸುವ ಭರವಸೆ ಹೊಂದಬಹುದು ಎಂದು ರಾಷ್ಟ್ರಪತಿ  ರಾಮನಾಥ ಕೋವಿಂದ್ ಹೇಳಿದರು.

ಗುರುವಾರ, ಚಾಮರಾಜನಗರದಲ್ಲಿ ನಿರ್ಮಿಸಲಾಗಿರುವ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಸಿಮ್‌ಸ್) 750 ಹಾಸಿಗೆಗಳ ನೂತನ ಬೋಧನಾ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಹೆಚ್ಚಿದ್ದಾರೆ. ಸಿಮ್ಸ್ ನಲ್ಲಿ ರಾಜ್ಯ ಸರ್ಕಾರವು ಕೈಗೆಟಕುವ ದರದಲ್ಲಿ ಆರೋಗ್ಯ ಸೇವೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳುವಂತೆ ಅವರು ಸಲಹೆ ನೀಡಿದರು. ಎಲ್ಲರಿಗೂ ಸಾರ್ವತ್ರಿಕ ಆರೋಗ್ಯ ಸೇವೆ ಒದಗಿಸುವ ಗುರಿ ತಲುಪಲು ವೈದ್ಯಕೀಯ ಸೇವೆಗಳ ವಿಸ್ತರಣೆಯಾಗುತ್ತಿರುವುದು ಉತ್ತಮ ಅಂಶವಾಗಿದೆ. ಭಾರತ ಸರ್ಕಾರವು ಈಗಾಗಲೇ ಏಮ್ಸ್ ಸಂಖ್ಯೆಯನ್ನು 6 ರಿಂದ 22 ಕ್ಕೆ ಹೆಚ್ಚಿಸಿದೆ ಎಂದು ಅವರು ಹೇಳಿದರು.

ಇಡೀ ದೇಶದಲ್ಲಿ ಆರೋಗ್ಯ ಮೂಲಸೌಕರ್ಯವನ್ನು ಸುಧಾರಿಸಲು ಪ್ರತಿ ಜಿಲ್ಲೆಯಲ್ಲಿ ಹೊಸ ವೈದ್ಯಕೀಯ ಕಾಲೇಜುಗಳನ್ನು ತೆರೆಯಲಾಗುತ್ತಿದೆ. ಹೊಸ ಸ್ನಾತಕೋತ್ತರ ಕಾಲೇಜುಗಳು ಸ್ಥಾಪನೆಯಾಗುತ್ತಿವೆ ಅದರ ಜೊತೆಗೇ, ಈಗಿರುವ ಸ್ನಾತಕೋತ್ತರ ಕೇಂದ್ರಗಳೂ ಉತ್ತಮಗೊಳ್ಳುತ್ತಿವೆ.  ಮಾನವ ಸಂಪನ್ಮೂಲವಿಲ್ಲದೆ ಅದರ ಉದ್ದೇಶವನ್ನು ಪೂರೈಸಲು ಸಾಧ್ಯವಿಲ್ಲ. ನಾವು ನಮ್ಮ ಆರೋಗ್ಯ ಸೇವೆಗಳನ್ನು ನಮ್ಮ ದೇಶದ ದೂರದ ಮೂಲೆಗಳಿಗೆ ಕೊಂಡೊಯ್ಯಬೇಕು ಎಂದರು.

2020-21ರಲ್ಲಿ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯ ಯಶಸ್ವಿ ಅನುಷ್ಠಾನಗೊಳಿಸಿ, ಸಿಮ್ಸ್ ಮೂರನೇ ಸ್ಥಾನದಲ್ಲಿದೆ ಎಂದು ರಾಷ್ಟ್ರಪತಿಗಳು ಹರ್ಷ ವ್ಯಕ್ತಪಡಿಸಿದರು. ಆರೋಗ್ಯ ಸೇವೆಯ ಪ್ರವೇಶವನ್ನು ಉತ್ತೇಜಿಸುವಲ್ಲಿ, ಈ ಸಂಸ್ಥೆಯ ವಿದ್ಯಾರ್ಥಿಗಳು ಮತ್ತು ಆಡಳಿತ ವರ್ಗ ನಿರ್ಣಾಯಕ ಪಾತ್ರವನ್ನು ವಹಿಸಬೇಕು ಎಂದು ಅವರು ಹೇಳಿದರು. ಇಲ್ಲಿ ತರಬೇತಿ ಪಡೆಯುತ್ತಿರುವ ವೈದ್ಯರು, ದಾದಿಯರು ಮತ್ತು ಅರೆವೈದ್ಯರು ಹೆಚ್ಚಿನ ಬದ್ಧತೆ ಮತ್ತು ಸಮರ್ಪಣೆಯೊಂದಿಗೆ ರಾಷ್ಟ್ರಕ್ಕೆ ಸೇವೆ ಸಲ್ಲಿಸುತ್ತಾರೆ ಮತ್ತು ವೃತ್ತಿಗೆ ಕೀರ್ತಿ ತರುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕಳೆದ ವರ್ಷದ ಆರಂಭದಿಂದಲೂ ವಿಶ್ವದಾದ್ಯಂತ ಕೋವಿಡ್ -19 ಸೋಂಕು ಹರಡಿದೆ. ಇದಕ್ಕೆ ಭಾರತವೂ ಹೊರತಲ್ಲ.  ಇದು ಗಂಭೀರ ಬಿಕ್ಕಟ್ಟಾಗಿತ್ತು, ಆದರೆ ಈ ಸೋಂಕಿನ ವಿರುದ್ಧ ವಿರುದ್ಧದ ಹೋರಾಟ ಎಲ್ಲ ಭಾರತೀಯರನ್ನು ಒಂದುಗೂಡಿಸಿತು. ವೈದ್ಯಕೀಯ ರಂಗದ ಅಪಾರ ಸಮರ್ಪಣೆಯಿಲ್ಲದೆ ಇದು ಸಾಧ್ಯವಾಗುತ್ತಿರಲಿಲ್ಲ. ಕೆಲವರು ಕರ್ತವ್ಯ ನಿರ್ವಹಣೆಯಲ್ಲಿ ತಮ್ಮ ಪ್ರಾಣವನ್ನೂ ತ್ಯಾಗ ಮಾಡಿದ್ದಾರೆ ಎಂದು ಅವರು ಹೇಳಿದರು.

ನಮ್ಮ ರಾಷ್ಟ್ರವು ಅವರಿಗೆ ಎಂದೆಂದಿಗೂ ಋಣಿಯಾಗಿರುತ್ತದೆ. ನಮ್ಮ ಕರೋನಾ ವಾರಿಯರ್ಸ್ ಗಳಾದ ವೈದ್ಯರು, ದಾದಿಯರು, ಅರೆವೈದ್ಯಕೀಯ ಸಿಬ್ಬಂದಿಯ ಸಮರ್ಪಣೆಯನ್ನು ನಾವೆಲ್ಲ ಸ್ಮರಿಸಬೇಕಿದೆ. ಇತಿಹಾಸದಲ್ಲಿಯೇ ಅತಿದೊಡ್ಡ ವ್ಯಾಕ್ಸಿನೇಷನ್ ಅಭಿಯಾನದ ಹಿಂದೆ ಅದೇ ಸಮರ್ಪಣೆ ಕೆಲಸ ಮಾಡುತ್ತಿದೆ. ಭಾರತವು ದೇಶಿಯವಾಗಿ ಕೋವಿಡ್ ಲಸಿಕೆಗಳನ್ನು ತಯಾರಿಸಿದ್ದು ಮಾತ್ರವಲ್ಲದೆ ಲಸಿಕೆಗಳನ್ನು ನಿರ್ವಹಿಸುವಲ್ಲಿ ಹೊಸ ವಿಶ್ವ ದಾಖಲೆಗಳನ್ನು ನಿರ್ಮಿಸಿದೆ. ಒಂದೇ ದಿನದಲ್ಲಿ, ನಾವು ಸುಮಾರು 25 ಮಿಲಿಯನ್ ಜನರಿಗೆ ಲಸಿಕೆ ಹಾಕುವಲ್ಲಿ ಯಶಸ್ವಿಯಾಗಿದ್ದೇವೆ. ಶೀಘ್ರದಲ್ಲೇ ಒಟ್ಟು ಲಸಿಕಾ ಪ್ರಮಾಣ ಒಂದು ಬಿಲಿಯನ್ ಗಡಿ ದಾಟುತ್ತದೆ ಎಂದು ಅವರು ತಿಳಿಸಿದರು.

ದೇಶದ ಅಭಿವೃದ್ಧಿಗೆ ಆರೋಗ್ಯ ಮತ್ತು ಶಿಕ್ಷಣ ಮುಖ್ಯ ಎಂದು ಹೇಳಿದ ರಾಷ್ಟ್ರಪತಿಗಳು, 450 ಹಾಸಿಗೆಗಳ ಆಸ್ಪತ್ರೆಯ ಉದ್ಘಾಟನೆಯೊಂದಿಗೆ, ಪ್ರಾಯೋಗಿಕ ಅನುಭವ ಮತ್ತು ಬೆಳೆಯುತ್ತಿರುವ ಪ್ರತಿಭೆಗಳಿಗೆ ತರಬೇತಿ ನೀಡಲು ಇದು ಹೆಚ್ಚಿನ ಅವಕಾಶಗಳನ್ನು ಒದಗಿಸುತ್ತದೆ ಎಂದು ಎಂದರು. ಅತ್ಯಾಧುನಿಕ ಸೌಲಭ್ಯ ಇರುವ ಈ ಆಸ್ಪತ್ರೆ ಸಾಕಷ್ಟು ಮೂಲಸೌಕರ್ಯ ಮತ್ತು ಕಾರ್ಡಿಯಾಲಜಿ, ನರವಿಜ್ಞಾನ ಮುಂತಾದ ಸೂಪರ್ ಸ್ಪೆಷಾಲಿಟಿ ವಿಭಾಗಗಳನ್ನು ಹೊಂದಿದೆ. ಈ ಪ್ರದೇಶದ ಜನರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸುತ್ತವೆ ಎಂದು ರಾಷ್ಟ್ರಪತಿಗಳು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯಪಾಲ ತಾವರ್‌ಚಂದ್ ಗೆಹ್ಲೋತ್ ಮಾತನಾಡಿ, ಚಾಮರಾಜನಗರ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಿ 5 ವರ್ಷಗಳಲ್ಲಿ ಉತ್ತಮ ಸೇವೆ ನೀಡುತ್ತಿದೆ. ರೋಗಿಗಳಿಗೆ ಉತ್ತಮ ಮತ್ತು ಉಚಿತ ಆರೋಗ್ಯ ಸೇವೆಯನ್ನು ಈ ಆಸ್ಪತ್ರೆ ನೀಡುತ್ತಿದೆ. ಸುಸಜ್ಜಿತ ಪ್ರಯೋಗಾಲಯ, ಓಪಿಡಿ, ಕಾರ್ಡಿಯಾಲಜಿ, ನ್ಯೂರಾಲಜಿ, ಮತ್ತಿತರ ಚಿಕಿತ್ಸೆ ನೀಡುತ್ತಿರುವುದು ಹೆಮ್ಮೆಯ ವಿಷಯ. ಮೊದಲನೇ ಅಲೆಯಲ್ಲಿ ಬಹುದಿನಗಳವರೆಗೆ ಶೂನ್ಯ ಪ್ರಕರಣಗಳು ವರದಿಯಾಗಿದ್ದ ಜಿಲ್ಲೆ.  ಈ ಜಿಲ್ಲೆಯಲ್ಲಿ ಬಡವರು, ಬುಡಕಟ್ಟು ಜನರು ಹೆಚ್ಚಿದ್ದಾರೆ. ಈ ಆಸ್ಪತ್ರೆ ಆ ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡಲಿ ಎಂದು ಆಶಿಸಿದರು.

ರಾಷ್ಟ್ರದ ಪ್ರಥಮ ಮಹಿಳೆ ಸವಿತಾ ರಾಮನಾಥ ಕೋವಿಂದ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,  ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಿಮ್‌ಸ್ ಡೀನ್ ಹಾಗೂ ನಿರ್ದೇಶಕ ಡಾ. ಜಿ.ಎಂ. ಸಂಜೀವ್ ಸ್ವಾಗತಿಸಿದರು.

 ನನಗೆ ಕರ್ನಾಟಕಕ್ಕೆ ಬರಲು ತುಂಬಾ ಇಷ್ಟ: ಕನ್ನಡದಲ್ಲಿ ಎರಡು ಮಾತಾಡಿದ ರಾಷ್ಟ್ರಪತಿ

ಚಾಮರಾಜನಗರ: ತಮ್ಮ ಭಾಷಣಾರಾಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು, ಕೆಲವು ಮಾತುಗಳನ್ನು ಕನ್ನಡದಲ್ಲಿ ಹೇಳಲು ಪ್ರಯತ್ನಿಸುತ್ತೇನೆ ಎಂದು ಇಂಗ್ಲಿಷ್‌ನಲ್ಲಿ ತಿಳಿಸಿ, ನನಗೆ ಕರ್ನಾಟಕಕ್ಕೆ ಬರಲು ತುಂಬಾ ಇಷ್ಟ. ನಿಮ್ಮ ಜೊತೆಯಲ್ಲಿ  ಇರುವುದಕ್ಕೂ ನನಗೆ ತುಂಬಾ ಸಂತೋಷ ಎಂದು ಕನ್ನಡದಲ್ಲೇ ಹೇಳಿ ಸಭಿಕರ ಮನಗೆದ್ದರು.

ನವರಾತ್ರಿಯ ಮೊದಲ ದಿನವೇ ಆಸ್ಪತ್ರೆ ಉದ್ಘಾಟನೆಯಾಗುತ್ತಿರುವುದು ವಿಶೇಷ . ಇಲ್ಲಿನ ಚಾಮರಾಜೇಶ್ವರ ದೇವಾಲಯ ಚಾಮರಾಜರ ಹೆಸರನ್ನು ಹೊತ್ತಿದೆ. ಚಾಮರಾಜ ಒಡೆಯರ್ ಅವರು ಕನ್ನಡ ಮಾಧ್ಯಮದಲ್ಲಿ 1881 ರಲ್ಲೇ ಬಾಲಕಿಯರಿಗಾಗಿ ಶಾಲೆ ಸ್ಥಾಪಿಸಿದರು. ಜಯ ಚಾಮರಾಜೆಂದ್ರ ಒಡೆಯರ್ ಅವರು ಪ್ರಥಮ ರಾಜ್ಯಪಾಲರಾಗಿದ್ದರು ಎಂದು ರಾಷ್ಟ್ರಪತಿಗಳು ಸ್ಮರಿಸಿದರು.

ಚಾಮರಾಜನಗರ ವೈದ್ಯಕೀಯ ಕಾಲೇಜಿನಲ್ಲಿ 750 ವೈದ್ಯಕೀಯ ವಿದ್ಯಾರ್ಥಿಗಳು ದೇಶದ ನಾನಾ ಭಾಗಗಳಿಂದ ಬಂದಿದ್ದಾರೆ. ಜಮ್ಮು ಕಾಶ್ಮೀರ, ಅಸ್ಸಾಂ ನಿಂದಲೂ ಬಂದಿದ್ದಾರೆ. ವಿವಿಧತೆಯಲ್ಲಿ ಏಕತೆಗೆ ಇದು ಸಾಕ್ಷಿ. ಈ ವೈದ್ಯಕೀಯ ಕಾಲೇಜು ಮಿನಿ ಭಾರತದಂತಿದೆ. ಇಲ್ಲಿ ಒಟ್ಟು 300 ವಿದ್ಯಾರ್ಥಿನಿಯರಿದ್ದಾರೆ. ಶೇ. 50 ರಷ್ಟು ಮಹಿಳೆಯರೇ ಇರುವುದು ವಿಶೇಷ. ಶೇ. 60ರಷ್ಟು ನರ್ಸಿಂಗ್ ವಿದ್ಯಾರ್ಥಿಗಳು ಮಹಿಳೆಯರು. ಇದು ಮಹಿಳಾ ಸಬಲೀಕರಣಕ್ಕೆ ಉದಾಹರಣೆ. ಆಧುನಿಕ ಭಾರತ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದನ್ನು ಇದು ತೋರಿಸುತ್ತದೆ ಎಂದು ಅವರು ಪ್ರಶಂಸಿದರು.

ನಮ್ಮ ಜನರು ವೈದ್ಯರನ್ನು ದೇವರೆಂದು ನಂಬಿದ್ದಾರೆ. ಈ ನಂಬಿಕೆಯನ್ನು ಉಳಿಸಲು ನೀವೆಲ್ಲ ಉತ್ತಮ ಸೇವೆ ನೀಡುತ್ತೀರೆಂದು ಆಶಿಸುತ್ತೇನೆ. ಎಂದರು.

ಟಾಪ್ ನ್ಯೂಸ್

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.