ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಗೆ ಮಂಗಲ ಆಯ್ಕೆ
Team Udayavani, Sep 3, 2017, 1:03 PM IST
ಹನೂರು: ಮಂಗಲ ಗ್ರಾಮವು ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಗೆ ಆಯ್ಕೆಯಾಗಿದ್ದು,
45 ಲಕ್ಷ ರೂ. ಅನುದಾನದಲ್ಲಿ ಎಸ್ಸಿ, ಎಸ್ಟಿ ಕಾಲೋನಿಗಳಲ್ಲಿ ಮೂಲ ಸೌಕರ್ಯಕ್ಕೆ ಸಂಬಂಧಿ
ಸಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬಹುದು ಎಂದು ತಾಪಂ ನೋಡೆಲ್
ಅಧಿಕಾರಿ ಹನುಮಶೆಟ್ಟಿ ತಿಳಿಸಿದರು.
ಹನೂರು ಸಮೀಪದ ಮಂಗಲ ಗ್ರಾಮ ಪಂಚಾಯ್ತಿ ಆವರಣದಲ್ಲಿ ಶುಕ್ರವಾರ ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆ ಆಯ್ಕೆ ಕುರಿತು ಆಯೋಜಿಸಿದ್ಧ ವಿಶೇಷ ಗ್ರಾಮ ಸಭೆಯಲ್ಲಿ ಮಾತನಾಡಿ, ಶೇ.50ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಎಸ್ಸಿ, ಎಸ್ಟಿ ಕಾಲೋನಿಗಳಲ್ಲಿ ಅವರಿಗೆ ಭೌತಿಕ ಹಾಗೂ ಸಾಮಾಜಿಕ ಮೂಲ ಸೌಕರ್ಯವನ್ನು ಒದಗಿಸುವುದರ ಮೂಲಕ ಅವರ ಸಾಮಾಜಿಕ,
ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಹಾಗೂ ಪರಿಶಿಷ್ಟ ಹಾಗೂ ಇತರೆ ವರ್ಗದ ನಡುವೆ ಇರುವ ವ್ಯತ್ಯಾಸವನ್ನು ನಿವಾರಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.
ಈ ದಿಸೆಯಲ್ಲಿ ರಾಜ್ಯದಲ್ಲಿ 200 ಗ್ರಾಮಗಳು ಆಯ್ಕೆಯಾಗಿದ್ದು, ಇದರಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ 45, ಮೈಸೂರು ಜಿಲ್ಲೆಯಲ್ಲಿ 45, ಕಲಬುರುಗಿ ಜಿಲ್ಲೆಯಲ್ಲಿ 45, ಕೋಲಾರ 35 ಹಾಗೂ ಚಾ.ನಗರ ಜಿಲ್ಲೆಯಲ್ಲಿ 30 ಗ್ರಾಮಗಳು ಈ ಯೋಜನೆಗೆ ಆಯ್ಕೆಯಾಗಿದ್ದು, ಅದರಲ್ಲಿ ಮಂಗಲ ಗ್ರಾಮವು ಸೇರಿದೆ ಎಂದು ತಿಳಿಸಿದರು. 45 ಲಕ್ಷ ರೂ.ಅನುದಾನ: ಈ ಯೋಜನೆಯಡಿ ಆಯ್ಕೆಯಾದ ಗ್ರಾಮಗಳಿಗೆ ಕೇಂದ್ರ
ಸರ್ಕಾರದಿಂದ 25 ಲಕ್ಷ ರೂ. ಹಾಗೂ ರಾಜ್ಯ ಸರ್ಕಾರದಿಂದ 20 ಲಕ್ಷ ರೂ. ಅನುದಾನ
ದೊರೆಯಲಿದೆ. ಈಗಾಗಲೇ ಕೇಂದ್ರ ಸರ್ಕಾರ ದಿಂದ 40 ಕೋಟಿ ರೂ. ಹಾಗೂ ರಾಜ್ಯ
ಸರ್ಕಾರದಿಂದ 40 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ವಿವರಿಸಿದರು.
ಗ್ರಾಮಸ್ಥರ ಸಹಕಾರ ಪಡೆಯಿರಿ: ಈ ಅನುದಾನದಲ್ಲಿ ಎಸ್ಸಿ, ಎಸ್ಟಿ ವರ್ಗದ ಕಾಲೋನಿಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬಹುದು. ಆದ್ದರಿಂದ ಗ್ರಾಪಂ ಜನಪ್ರತಿನಿಧಿಗಳು, ಅಧಿಕಾರಿಗಳು ಗ್ರಾಮಸ್ಥರ ಸಹಕಾರ ಪಡೆದು ಅಗತ್ಯ ಮೂಲಸೌಕರ್ಯ ಕಲ್ಪಿಸುವುದರ ಮೂಲಕ ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ತಿಳಿಸಿದರು.
ಗ್ರಾಪಂ ಪಿಡಿಒ ಶಿವಪ್ರಸಾದ್ ಮಾತನಾಡಿ, ಆದರ್ಶ ಗ್ರಾಮ ಯೋಜನೆಯ ಅನುದಾನದಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿ, ಬೀದಿ ದೀಪ, ಅಂಗನವಾಡಿ ಹಾಗೂ ಶಾಲಾ ಕಟ್ಟಡ ನಿರ್ಮಾಣ, ದುರಸ್ತಿ ಸೇರಿದಂತೆ ಮೂಲ ಸೌಕರ್ಯಕ್ಕೆ ಸಂಬಧಿಸಿದಂತೆ ಇನ್ನಿತರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬಹುದು ಎಂದು ವಿವರಿಸಿದರು.
ಕ್ರಿಯಾಯೋಜನೆ ಆಗಬೇಕು: ಈಗಾಗಲೇ ಈ ಯೋಜನೆಯಡಿ ಕೈಗೊಳ್ಳಬದಾದ ಕಾಮಗಾರಿಗಳ ಬಗ್ಗೆ ಅಂದಾಜುಪಟ್ಟಿ ತಯಾರಿಸಲಾಗಿದ್ದು, ಕ್ರಿಯಾಯೋಜನೆ ತಯಾರಿಸಬೇಕಿದೆ ಎಂದು ತಿಳಿಸಿದರು.
ಇದೇ ವೇಳೆ ಈ ಯೋಜನೆಯಡಿ ಗ್ರಾಮದಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳ ಬಗ್ಗೆ ಗ್ರಾಮಸ್ಥರಿಂದ ಮಾಹಿತಿ ಪಡೆಯಲಾಯಿತು. ಈ ವೇಳೆ ತಾಪಂ ಸದಸ್ಯೆ ಮಾಣಿಕ್ಯ ಎಚ್.
ಪುಟ್ಟರಾಜು, ಗ್ರಾಪಂ ಅಧ್ಯಕ್ಷೆ ಪುಷ್ಪಾಮೂರ್ತಿ, ಉಪಾಧ್ಯಕ್ಷ ಉಮೇಶ್, ಗ್ರಾಪಂ ಸದಸ್ಯರಾದ
ಕೆ.ಚಿಕ್ಕಸ್ವಾಮಿ, ವಿಶ್ವೇಶ್ವರ್‌ಪ್ರಸಾದ್, ಕನಕರಾಜು, ಡಿ.ವೀರಭದ್ರಯ್ಯ, ಸರೋಜಾ, ಗ್ರಾಮಸ್ಥರು
ಹಾಗೂ ಶಾಲೆಯ ಶಿಕ್ಷಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.